ಕಲಬುರಗಿ: ಶ್ರಾವಣ ಮಾಸದ ನಿಮಿತ್ತ ಜಯನಗರ ಶಿವಮಂದಿರದಲ್ಲಿ ಜರುಗಿದ ಒಂದು ತಿಂಗಳು ಮಹಾದಾಸೋಹಿ ಶ್ರೀ ಶರಣಬಸವೇಶ್ವರ ಪುರಾಣ ಪ್ರವಚನದ ಮಹಾ ಮಂಗಲೋತ್ಸವ ಹಾಗೂ ಪಲ್ಲಕ್ಕಿ ಮೆರವಣಿಗೆ ಕಾರ್ಯಕ್ರಮವು ಸೆ.1 ರಂದು ಭಾನುವಾರ ಶಿವಮಂದಿರಲ್ಲಿ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಯನಗರ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಳೆದ ಆ.5ರಂದು ಪ್ರಾರಂಭವಾಗಿರುವ ಮಹಾದಾಸೋಹಿ ಶ್ರೀ ಶರಣಬಸವೇಶ್ವರ ಪುರಾಣ ಯಶಸ್ವಿಯಾಗಿ ಜಯನಗರದ ಶಿವಮಂದಿರದಲ್ಲಿ ಪ್ರತಿ ದಿನ 7 ರಿಂದ 8 ಗಂಟೆವರೆಗೆ ನಡೆಯುತ್ತಿದೆ.ಚಿಂಚೋಳಿ ತಾಲೂಕಿನ ಐನಾಪೂರ ಗ್ರಾಮದ ಹೆಸರಾಂತ ಪುರಾಣ ಪಂಡಿತ ವೇ.ಮು.ಶ್ರೀ ಮಲ್ಲಿಕಾರ್ಜುನ ಶಾಸ್ತ್ರಿ ಅವರು ಒಂದು ತಿಂಗಳು ಪುರಾಣ ನಡೆಸಿಕೊಡುತ್ತಿದ್ದಾರೆ.
ಕಲಬುರಗಿ ಆರಾಧ್ಯದೈವ ಮಹಾದಾಸೋಹಿ ಶ್ರೀ ಶರಣಬಸವೇಶ್ವರರ ಜೀವನ ಚರಿತ್ರೆ ಮತ್ತು ಅವರ ಕಾಯಕ ಪವಾಡಗಳು ಹಾಗೂ ದಾಸೋಹದ ಮಹಿಮೆ ಕುರಿತು ವಿಸ್ತಾರವಾಗಿ ಪುರಾಣದ ಮೂಲಕ ತಿಳಿಸುತ್ತಿದ್ದಾರೆ. ಪುರಾಣ ಕಾರ್ಯಕ್ರಮದಲ್ಲಿ ಶರಣಬಸವೇಶ್ವರರ ತೊಟ್ಟಿಲು ತೂಗುವ ಕಾರ್ಯಕ್ರಮ ಅದ್ಧೂರಿಯಾಗಿ ಆಚರಿಸಿದ್ದು ವಿಶೇಷವಾಗಿತ್ತು.ಮಹಿಳೆಯರಿಗೆ ಸೀರೆ ಉಡಿಸಿ ಪದಗಳನ್ನು ಹಾಡಲಾಯಿತು.
ಪುರಾಣ ಕೇಳಲು ದಿನ ನಿತ್ಯ ನಗರದ ಬೆರೆ ಬೆರೆ ಬಡಾವಣೆಗಳ ಭಕ್ತರು, ಸಾರ್ವಜನಿಕರು, ಮಹಿಳೆಯರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಅದರಂತೆ ಒಂದು ತಿಂಗಳು ನಿರಂತರ ದಿನಾಲೂ ನೂರಾರು ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದೆ.ಸುಮಾರು 90 ಕ್ಕಿಂತಲೂ ಹೆಚ್ಚು ದಾನಿಗಳು ಪ್ರಸಾದ ದಾಸೋಹ ಮಾಡಿಸಿದ್ದಾರೆ.ಕಳೆದ ವರ್ಷಕ್ಕಿಂತಲೂ ಇದು ಹೆಚ್ಚು ಆಗಿದೆ ಎಂದರು.
ಅಂದು ನಡೆಯುವ ಮಹಾ ಮಂಗಲೋತ್ಸವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಲು ಮುಗಳನಾಗಾಂವ ಕಟ್ಟಿಮನಿ ಸಂಸ್ಥಾನ ಹಿರೇಮಠದ ಪರಮ ಪೂಜ್ಯ ಶ್ರೀ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಆಗಮಿಸುವರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಪೂಜ್ಯ ಮಾತೋಶ್ರೀ ಡಾ.ದಾಕ್ಷಾಯಣಿ ಎಸ್.ಅಪ್ಪಾ ಅವರು ಪಲ್ಲಕ್ಕಿ ಮೆರವಣಿಗೆಗೆ ಚಾಲನೆ ನೀಡುವರು.ಪುರಾಣ ಪಂಡಿತ ಶ್ರೀ ಮಲ್ಲಿಕಾರ್ಜುನ ಶಾಸ್ತ್ರೀ ಅವರು ಉಪಸ್ಥಿತರಿರುವರು.
ಮುಖ್ಯ ಅತಿಥಿಗಳಾಗಿ ಸಂಸದ ರಾಧಾಕೃಷ್ಣ ದೊಡ್ಡಮನಿ,ಶಾಸಕರಾದ ಅಲ್ಲಮಪ್ರಭು ಪಾಟೀಲ್,ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಟ್ರಸ್ಟ್ ಗೌರವಾಧ್ಯಕ್ಷರು ಹಾಗೂ ಮಾಜಿ ಎಚ್ಕೆಇ ಸಂಸ್ಥೆಯ ಅಧ್ಯಕ್ಷ ಡಾ.ಭೀಮಾಶಂಕರ ಬಿಲಗುಂದಿ,ಹಿರಿಯ ಹೋರಾಟಗಾರ ಡಾ.ಲಕ್ಷ್ಮಣ ದಸ್ತಿ ಆಗಮಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಟ್ರಸ್ಟ್ ಅಧ್ಯಕ್ಷ ಲಿಂಗರಾಜ ಸಿರಗಾಪೂರ ವಹಿಸುವರು.ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತ ಕೆ.ಬಿ ಸ್ವಾಗತಿಸುವರು. ಜಿ.ಜಿ.ವಣಿಕ್ಯಾಳ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.ಟ್ರಸ್ಟಿನ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿರುವರು.
ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಗುತ್ತದೆ.ನಂತರ ಭಕ್ತಿ ಹಾಗೂ ಭಾವಗೀತೆಗಳ ಸಂಗೀತ ಕಾರ್ಯಕ್ರಮ ನಡೆಯುವುದು.
ಅಂದು ಜಯನಗರ ಸೇರಿದಂತೆ ಬೆರೆ ಬೆರೆ ಬಡಾವಣೆಯ ಹಿರಿಯರು, ಮಹಿಳೆಯರು, ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…