ಕಲಬುರಗಿ: ನಗರದ ನಗರದ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಮಂಗಳವಾರ ಸ್ಟೀಮ್ ಬಾತ್, ಸೋನಾ ಬಾತ್, ಜಾಕುಜಿ ಮತ್ತು ಮಹಿಳಾ ಜಿಮ್ ಸೆಂಟರನ್ನು ಕಲಬುರಗಿ ಲೋಕಸಭಾ ಸದಸ್ಯ ಡಾ.ಉಮೇಶ ಜಾಧವ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಬಸವರಾಜ್ ಮತ್ತಿಮೂಡ, ದತ್ತಾತ್ರೇಯ ಪಾಟೀಲ ರೇವೂರ, ಪ್ರಾದೇಶಿಕ ಆಯುಕ್ತ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಸುಭೋದ್ ಯಾದವ, ಜಿಲ್ಲಾಧಿಕಾರಿ ಬಿ.ಶರತ್, ಮಹಾನಗರ ಪಾಲಿಕೆಯ ಆಯುಕ್ತ ರಾಹುಲ್ ಪಾಂಡ್ವೆ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.