ಸುರಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರತ್ತಾಳ ಗ್ರಾಮದಲ್ಲಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ಅನ್ವರ್ ಜಮಾದಾರ್ ಮಾತನಾಡುತ್ತಾ, ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುವುದು ಹಾಕಿ ನಮ್ಮ ರಾಷ್ಟ್ರೀಯ ಬಿಡಿ ಇದನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಖ್ಯಾತಿಗೊಳಿಸುವುದರಲ್ಲಿ ಧ್ಯಾನ್ ಚಂದ್ ರವರ ಪಾತ್ರ ಅಮೋಘವಾದದ್ದು ಹಾಗೂ ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ವಿರುತ್ತದೆ ಎಂಬಂತೆ ಶಾಲೆಗಳಲ್ಲಿ ಮಕ್ಕಳಿಗೆ ಶೈಕ್ಷಣಿಕ ಚಟುವಟಿಕೆಗಳ ಜೊತೆ ಜೊತೆಗೆ ಮಕ್ಕಳು ವೈವಿಧ್ಯಮಯ ಆಟಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ಅವರಲ್ಲಿ ದೈಹಿಕ ಹಾಗೂ ಮಾನಸಿಕ ಸಮತೋಲನೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಂಪನ್ಮೂಲ ವ್ಯಕ್ತಿ ಕೃಷ್ಣ. ಬಿ.ಶಿಕ್ಷಕರಾದ ಹರೀಶ್ ಬಾಬು ಲಕ್ಷ್ಮಣ ವೆಂಕಟೇಶ್ ಶಾಹಿದಬೇಗಂ ಸೌಮ್ಯ ಶಾಲೆಯ ಹಳೆಯ ವಿದ್ಯಾರ್ಥಿಗಳು ಶಾಲಾ ಮಕ್ಕಳು ಭಾಗವಹಿಸಿದ್ದರು ಮುಖ್ಯ ಗುರುಗಳಾದ ರಾಘವೇಂದ್ರ ನಿರೂಪಿಸಿ ವಂದಿಸಿದರು.