ಕಲಬುರಗಿ: ಸುಳ್ಳನ್ನೇ ಪ್ರತಿಪಾದಿಸಿ ಸತ್ಯವೆಂದು ಬಿಂಬಿಸುವ ಪರಿಪಾಠವನ್ನು ಕರಗತ ಮಾಡಿಕೊಂಡಿರುವ ಮತ್ತು ಸದಾ ಜನರ ದಿಕ್ಕನ್ನು ಬೇರೆ ಕಡೆ ಬದಲಾಯಿಸುವ ಸುದ್ದಿಗಳನ್ನು ಹಬ್ಬಿಸುವ ಬಿಜೆಪಿ ಪಕ್ಷ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಸಿದ್ದಾರ್ಥ ವಿಹಾರ ಶಿಕ್ಷಣ ಟ್ರಸ್ಟಿಗೆ ಹಂಚಿಕೆ ಆಗಿರುವ ನಾಗರಿಕ ನಿವೇಶನ ಕುರಿತು ಮತ್ತೆ ಮತ್ತೆ ಮೈಪರಿಚಿಕೊಳ್ಳುತ್ತಿದೆ ಎಂದು ಅರ್ಜುನ ಭದ್ರೆ ಬಿಜೆಪಿ ವಿರುಧ್ದ ಕಿಡಿ ಕಾರಿದ್ದಾರೆ.
ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಶುಕ್ರವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ನಾಗರಿಕ ನಿವೇಶನದ ಹಂಚಿಕೆ ಕುರಿತು ಸಾಮಾನ್ಯ ಜ್ಞಾನವಿಲ್ಲದ ಬಿಜೆಪಿ ನಾಯಕರು ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಅವರ ಕುಟುಂಬದ ಮೇಲೆ ಆರೋಪ ಮಾಡಿ ರಾತ್ರೋರಾತ್ರಿ ನಾಗರಿಕರಾಗಲು ಹೊರಟಿದ್ದಾರೆ. ನಾರಾಯಣ ಸ್ವಾಮಿ
ಛಲವಾದಿ ಅವರು ವ್ಯಕ್ತಿಗತವಾಗಿ ಟೀಕೆ ಮಾಡುವ ಮೊದಲು ಅದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಟೀಕೆ ಮಾಡಬೇಕು ಎಂದು ಎಚ್ಚರಿಸಿದರು.
ನಾರಾಯಣ ಸ್ವಾಮಿಯವರಿಗೆ ವಿಷಯ ತಿಳಿದುಕೊಳ್ಳುವ ಕೊರತೆ ಎದ್ದು ಕಾಣುತ್ತಿದೆ. ಹಾಗಾಗಿ ಇದರ ಬಗ್ಗೆ ತಿಳಿದುಕೊಂಡು ಮಾತನಾಡಲಿ ಎಂದಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಲ್ಲಿಕಾರ್ಜುನ ಕ್ರಾಂತಿ, ಮಲ್ಲಿಕಾರ್ಜುನ ಖನ್ನಾ, ಸೂರ್ಯಕಾಂತ ಅಜಾದಪೂರ, ಕಪಿಲ್ ಸಿಂಗೆ, ಸೈಬಣ್ಣ ಕೋಟನೂರಕರ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…