ಕಲಬುರಗಿ: ಸಂವಿಧಾನದ ಆಶಯಗಳ ಅಡಿಯಲ್ಲಿ ರಾಷ್ಟ್ರಪತಿಗಳ ನೇರ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಬೇಕಾದ ರಾಜ್ಯಪಾಲರು ಪ್ರಧಾನಮಂತ್ರಿಗಳ ಹಾಗೂ ಗೃಹ ಸಚಿವರ ಕೈಗೊಂಬೆಗೆಯಾಗಿ ಕೆಲಸ ಮಾಡುವ ಮೂಲಕ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯುಂಟು ಮಾಡುತ್ತಿರುವುದನ್ನು ಖಂಡಿಸಿ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಮರಿಯಪ್ಪ ಹಳ್ಳಿ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಅವರು ಮಾತನಾಡಿ ಜೆಡಿಎಸ್’ನ ಎಚ್.ಡಿ. ಕುಮಾರ ಸ್ವಾಮಿ, ಬಿಜೆಪಿಯ ಮುರುಗೇಶ ನಿರಾಣಿ, ಜನಾರ್ಧನ್ ರೆಡ್ಡಿ, ಹಾಗೂ ಶಶಿಕಲಾ ಜೊಲ್ಲೆ ಇವರುಗಳ ವಿರುಧ್ದ ಲೋಕಾಯುಕ್ತ ಮತ್ತು ಎಸ್ ಐಟಿಯಂಥ ತನಿಖಾ ಸಂಸ್ಥೆಗಳು ಪ್ರಾಸಿಕ್ಯೂಷನ್ ನಡೆಸಲು ಅನುಮತಿ ಕೋರಿ ವರ್ಷವಾಗುತ್ತಾ ಬಂದರೂ ಅನುಮತಿ ನೀಡದ ರಾಜ್ಯಪಾಲರು ಖಾಸಗಿ ವ್ಯಕ್ತಿ ನೀಡಿದ ದೂರನ್ನು ಆಧರಿಸಿ ಮುಖ್ಯಮಂತ್ರಿ ಸಿಧ್ದರಾಮಯ್ಯನವರಿಗೆ ಒಂದೇ ದಿನದಲ್ಲಿ ಷೋಕಾಸ್ ನೋಟೀಸ್ ನೀಡಿದ್ದಲ್ಲದೇ, ಪ್ರಾಸಿಕ್ಯೂಷನ್’ಗೆ ಅನುಮತಿ ನೀಡಿರುವುದು ಮತ್ತು ರಾಜ್ಯಪಾಲ ಥಾವರ್’ಚಂದ್ ಗೆಹ್ಲೋಟ್’ರವರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ನಡೆದುಕೊಳ್ಳುತ್ತಿರುವುದನ್ನು ಖಂಡಿಸಿ ಸೆಪ್ಟೆಂಬರ್ 3 ನೇ ತಾರೀಖಿನಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಆವರಣದಲ್ಲಿ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಶಿವಶರಣಪ್ಪಾ ಕುರನಳ್ಳಿ, ಜಯಕುಮಾರ ನೂಲಕರ್, ಮಲ್ಲಿಕಾರ್ಜುನ ಸೇರಿದಂತೆ ಇತರರು ಭಾಗವಹಿಸಿದ್ದರು.