ಚಿತ್ತಾಪುರ ಧಾರಾಕಾರ ಮಳೆ; ಕಾಗಿಣಾ ನದಿ ಸೇತುವೆ ಮುಳುಗಡೆ

ಕಲಬುರಗಿ: ಜಿಲ್ಲಾದ್ಯಂತ ಕಳೆದ ಒಂದು ದಿನದಿಂದ ವರುಣನ ಅರ್ಭಟದ ಆರಂಭವಾಗಿದೆ. ಇನ್ನೂ ಎರಡು ದಿನಗಳ ಕಾಲ ಸೆ 2 ವರೆಗೆ ಮಳೆ ಬರುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿನ್ನೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಚಿತ್ತಾಪುರ ತಾಲೂಕಿನ ಕಾಗಿಣಾ ನದಿ ತುಂಬಿ ಹರಿದು ದಂಡೋತಿ ಗ್ರಾಮದ ಕಾಗಿಣಾ ಸೇತುವೆ ಮುಳುಗಡೆಯಾಗಿದೆ. ಇದರಿಂದ ವಾಹನ ಸಂಚಾರ ಸ್ಥಗಿತಗೊಂಡು ಸವಾರರು ಪರದಾಡಿದರು.

ಶನಿವಾರ ರಾತ್ರಿಯಿಂದ ನದಿಯಲ್ಲಿ ಪ್ರವಾಹ ವೇಗವಾಗಿ ಏರುಗತಿಯಲ್ಲಿ ಹೆಚ್ಚಾಗಿ ಸೇತುವೆ ಸಮನಾಗಿ ನೀರು ಹರಿಯುತ್ತಿತ್ತು. ರವಿವಾರ ಬೆಳಗ್ಗೆ ಸೇತುವೆಯ ಮೇಲಿಂದ ನೀರು ಹರಿಯುತ್ತಿದೆ. ಕಾಗಿಣಾ ನದಿ ಮೇಲ್ಬಾಗದ ಸೇಡಂ, ಚಿಂಚೋಳಿ, ಕಾಳಗಿ ತಾಲೂಕುಗಳಲ್ಲಿ ಹಾಗೂ ನಾಗರಾಳ ಜಲಾಶಯದಿಂದ ನೀರು ಬಿಟ್ಟಿದ್ದರಿಂದ ನದಿಯಲ್ಲಿ ಪ್ರವಾಹ ಉಕ್ಕೇರಿ ಹರಿಯುತ್ತಿದೆ. ಸೇತುವೆ ಮಾರ್ಗವಾಗಿ ನಿತ್ಯವೂ ಕಲಬುರಗಿಗೆ ಸಂಚರಿಸುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಸಂಚಾರವನ್ನು ರಾವೂರ್, ಶಹಾಬಾದ ಮಾರ್ಗಕ್ಕೆ ಬದಲಿಸಲಾಗಿದೆ.

ಸರ್ಕಾರಿ ನೌಕರರು, ಸಾರ್ವಜನಿಕರು, ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಪ್ರಯಾಣಿಕರು ಚಿತ್ತಾಪುರಕ್ಕೆ ಬರಲು ಮತ್ತು ಕಲಬುರಗಿಗೆ ಹೋಗಲು ಶಹಾಬಾದ್ ಮಾರ್ಗದ ಸಂಚಾರ ಅವಲಂಭಿಸಿದ್ದಾರೆ.
ಮರಗೋಳ ಕ್ರಾಸ್, ದಂಡೋತಿ ಗ್ರಾಮ, ಮರಗೋಳ ಕ್ರಾಸ್ ಹತ್ತಿರ ಡಿವೈಎಸ್ಪಿ ಶಂಕತಗೌಡ ಪಾಟೀಲ್, ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್’ಐ ಶ್ರೀಶೈಲ್ ಅಂಬಾಟಿ ಹಾಗೂ ಸಿಬ್ಬಂದಿಗಳು ಕಾಗಿಣ ನದಿಯ ಹತ್ತಿರ ಹೋಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದಾರೆ.

ಬೆಳೆ ಸಂಪೂರ್ಣ ಹಾನಿ; ಧಾರಾಕಾರ ಮಳೆಯಿಂದ ತಾಲೂಕಿನ ವಿವಿಧೆಡೆ ನದಿ, ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿದ್ದು, ದಂಡೋತಿ ಗ್ರಾಮದ ಹೊಲಗಳಲ್ಲಿ ಮಳೆ ನೀರು ಹೊಲಗಳಿಗೆ ನುಗ್ಗಿ‌ ತೊಗರಿ, ಉದ್ದು, ಸೋಯಾ, ಹೆಸರು ಬೆಳೆಗಳು ಹಾನಿಯಾಗಿವೆ.

ಧಾರಾಕಾರ ಮಳೆಗೆ 8 ಮನೆಗಳಿಗೆ ಹಾನಿ; ಚಿತ್ತಾಪುರ ಪಟ್ಟಣ ಸೇರಿದಂತೆ ‌ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಇಲ್ಲಿಯವರೆಗೆ 8 ಮನೆಗಳ ಮೇಲ್ಛಾವಣಿ ಮತ್ತು ಗೋಡೆ ಕುಸಿತಗೊಂಡಿವೆ ಎಂದು ತಹಶಿಲ್ದಾರ್ ಅಮರೇಶ ಬಿರಾದಾರ ಮಾಹಿತಿ ನೀಡಿದ್ದಾರೆ.

ಧಾರಾಕಾರ‌ ಮಳೆ ಸುರಿಯುತ್ತಿರುವುದರಿಂದ ಮನೆಗಳು ಹಾನಿಗೊಳಾಗುತ್ತಿದ್ದು ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ‌ ಪರೀಶಿಲನೆ ನಡೆಸಿದ್ದಾರೆ. ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದರು.

ಮಳೆಯ ವಿವಿರ; ಚಿತ್ತಾಪುರ ಪಟ್ಟಣದಲ್ಲಿ 69.8mm, ಅಳ್ಳೋಳ್ಳಿ ವಲಯದಲ್ಲಿ 20.5mm, ನಾಲವಾರ ವಲಯದಲ್ಲಿ 54.2mm, ಗುಂಡಗುರ್ತಿ ವಲಯದಲ್ಲಿ 30.6mm ಮಳೆ ಸುರಿದ ವರದಿಯಾಗಿದೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago