3 ರಂದು ಮಹಾತ್ಮಾ ಚರಬಸವೇಶ್ವರ ಪುರಾಣ ಮಂಗಲೋತ್ಸವ

ಕಲಬುರಗಿ; ನಗರದ ಬಸವೇಶ್ವರ ಆಸ್ಪತ್ರೆ ಎದುರುಗಡೆ ಇರುವ ವಿದ್ಯಾನಗರ ಕಾಲೋನಿ, ವಿದ್ಯಾನಗರ ವೆಲ್‍ಫೇರ ಸೊಸೈಟಿಯ ವತಿಯಿಂದ ಶ್ರಾವಣ ಮಾಸದ ನಿಮತ್ಯ ತಿಂಗಳ ಪರ್ಯಂತ ಹಮ್ಮಿಕೊಂಡ ಪುರಾಣ ಪ್ರವಚನ ಸೆಪ್ಟೆಂಬರ 3 ರಂದು ಮಂಗಳವಾರ ಬೆಳಿಗ್ಗೆ 11-00ಗಂಟೆಗೆ ಮಂಗಲೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ತೊಟ್ಟಿಲು ಹರಾಜಿನಲ್ಲಿ ಭಾಗವಹಿಸಿ ಪ್ರಸಾದ ತೆಗೆದುಕೊಂಡು ಹೋಗಬೇಕೆಂದು ಸೊಸೈಟಿ ಕಾರ್ಯದರ್ಶಿ ಶಿವರಾಜ ಅಂಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೇಡಂ ರಸ್ತೆ ವಿದ್ಯಾನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಮ್ಮಿಕೊಂಡ ಮಹಾತ್ಮಾ ಚರಬಸವೇಶ್ವರ ಪುರಾಣ ಮಂಗಳವಾರ ಮಂಗಲೋತ್ಸವ ಕಾರ್ಯಕ್ರಮಕ್ಕೆ, ಕಾರ್ಯಕ್ರಮದ ಸಾನಿಧ್ಯ ವಹಿಸುವುದಕ್ಕಾಗಿ ಯಡ್ರಾಮಿ ಶ್ರೀ ಮುರುಗೇಂದ್ರ ಶಿವಯೋಗಿ ವಿರಕ್ತ ಮಠದ ಪೂಜ್ಯ ಶ್ರೀ ಮ.ನಿಪ್ರ. ಸಿದ್ಧಲಿಂಗ ಸ್ವಾಮಿಜಿಯವರಿಗೆ ಅಧಿಕೃತ ಆಹ್ವಾನ ಪತ್ರಿಕೆ ನೀಡಿ ಗೌರವಿಸಲಾಯಿತು.

ಪುರಾಣ ಮಂಗಲೋತ್ಸವ ಕಾರ್ಯಕ್ರಮಕ್ಕೆ ಯಡ್ರಾಮಿ ಶ್ರೀ ಮುರುಘೇಂದ್ರ ಶಿವಯೋಗಿ ವೀರಕ್ತಮಠದ ಪೂಜ್ಯರಾದ ಶ್ರೀ. ಮ.ನಿ.ಪ್ರ. ಶಿದ್ಧಲಿಂಗ ಸ್ವಾಮಿಗಳು ದಿವ್ಯಸಾನಿಧ್ಯ ವಹಿಸಲಿದ್ದಾರೆ. ಶಹಾಪೂರಿನ ಶ್ರೀ ಚರಬಸವೇಶ್ವರ ಸಂಸ್ಥಾನ ಉತ್ತರ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಡಾ. ಶರಣು ಗದ್ದುಗೆ, ಬೆಂಗಳೂರಿನ ಮಾಜಿ ಕ್ರೆಡೆಲ್ ಅಧ್ಯಕ್ಷರಾದ ಚಂದು ಬಿ. ಪಾಟೀಲ, ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಎಂ.ಬಿ.ನಗರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಶಿವಾನಂದ ವಾಲಿಕಾರ, ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀಮತಿ ಯಂಕಮ್ಮ ಗುತ್ತೇದಾರ ಅತಿಥಿಗಳಾಗಿ ಆಗಮಿಸಲಿದ್ದಾರೆ. ವಿದ್ಯಾನಗರ ವೆಲ್‍ಫೇರ ಸೊಸೈಟಿಯ ಅಧ್ಯಕ್ಷ ಮಲ್ಲಿನಾಥ ದೇಶಮುಖ ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರಾರಂಭದಲ್ಲಿ ಸಂಗೀತ ಕಲಾವಿದರಾದ ಶಿವಕುಮಾರ ಎಂ. ಹಿರೇಮಠ, ಸಿದ್ಧಣ್ಣ ದೇಸಾಯಿ ಕಲ್ಲೂರ ಅವರಿಂದ ಸಂಗೀತ ಸೇವೆ ನಡೆಯಲಿದ್ದು, ಪುರಾಣ ಪ್ರವಚನದ ತೊಟ್ಟಿಲು ಹಾಗು ಇನ್ನಿತರ ಸಲಕರಣೆಗಳು ಹರಾಜು ಪ್ರಕ್ರೀಯೆ ಜರುಗಲಿದ್ದು, ನಂತರ ಪುರಾಣ ಪ್ರವಚನಕಾರರಾದ ವೇ.ಮೂ. ಶಂಭುಲಿಂಗ ಶಾಸ್ತ್ರಿ ಅವರಿಂದ ಪುರಾಣ ಮಂಗಲ ಪೂಜ್ಯ ಶ್ರೀ ಮ.ನಿ.ಪ್ರ. ಸಿದ್ಧಲಿಂಗ ಸ್ವಾಮಿಗಳಿಂದ ಆಶೀರ್ವಚನದ ನಂತರ ಪ್ರಸಾದ ವಿತರಣೆ ಜರುಗುವುದು ವಿದ್ಯಾನಗರ ವೆಲ್‍ಫೇರ ಸೊಸೈಟಿಯ, ಶಿವಶರಣೆ ಅಕ್ಕಮಹಾದೇವಿ ಮಹಿಳಾ ಟ್ರಸ್ಟ್ ಹಾಗು ಶ್ರೀ ಮಲ್ಲಿಕಾರ್ಜುನ ತರುಣ ಸಂಘದ ಪದಾಧಿಕಾರಿಗಳು ಉಪಸ್ಥಿತರಿರುವರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago