ಸುರಪುರ:ಸರಕಾರದ ಮಹತ್ವದ ಯೋಜನೆ ಪ್ರತಿಯೊಂದು ಅಂಗನವಾಡಿ ಕೇಂದ್ರದ ಆವರಣದಲ್ಲಿ ತಾಯಿಂದಿರ ಸವಿ ನೆನಪಿಗಾಗಿ ಸಸಿಗಳನ್ನು ನೆಡುವುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳಾಭಿವೃಧ್ಧಿ ಇಲಾಖೆ ಮಹಿಳಾ ಮೇಲ್ವಿಚಾರಕಿ ಸಾವಿತ್ರಿ ಗಾಳಿ ತಿಳಿಸಿದರು.
ನಗರದ ರಂಗಂಪೇಟೆಯ ಎಲಿಗಾರ ಓಣಿಯ ಅಂಗನವಾಡಿ ಕೇಂದ್ರದ ಆವರಣದಲ್ಲಿ ಹಮ್ಮಿಕೊಂಡಿದ್ದ ತಾಯಂದಿರ ಸವಿನೆನಪಿಗಾಗಿ ಒಂದು ವೃಕ್ಷ ಯೋಜನೆ ಅಡಿಯಲ್ಲಿ ಸಸಿ ನೆಟ್ಟು ನೀರುಣಿಸುವ ಮೂಲಕ ಮಾತನಾಡಿ,ತಾಯಿ ನಮ್ಮೆಲ್ಲರನ್ನು ಪಾಲನೆ ಪೋಷಣೆ ಮಾಡಿ ಬೆಳೆಸುತ್ತಾರೆ.ಅದರಂತೆ ನಾವು ತಾಯಿಯಂತೆ ಅವರ ನೆನಪಿನಲ್ಲಿ ನೆಡುವ ಸಸಿಯನ್ನು ಕಂಡು ಬೆಳೆಸುವ ಮೂಲಕ ಪರಿಸರ ಉಳಿಸಿ ಬೆಳೆಸೋಣ ಎಂದರು.
ಇದೇ ಸಂದರ್ಭದಲ್ಲಿ ಎಪಿಎಫ್ ಸಂಪನ್ಮೂಲ ವ್ಯಕ್ತಿ ಅನ್ವರ್ ಜಮಾದಾರ್ ಮಾತನಾಡಿ, ನಮ್ಮ ಹುಟ್ಟಿಗೆ ಕಾರಣರಾದ ತಾಯಿಯ ಹೆಸರಿನಲ್ಲಿ ವೃಕ್ಷ ನೆಡುವ ಮೂಲಕ ಹದಗೆಡುತ್ತಿರುವ ನಮ್ಮ ಪರಿಸರವನ್ನು ಉಳಿಸಿ ಬೆಳೆಸಲು ಹಾಗೂ ಸುಸ್ಥಿರತೆ ಕಾಪಾಡಲು ಪ್ರತಿಯೊಬ್ಬರು ಸಸಿ ನೆಟ್ಟು ನಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕಾಗಿದೆ. ಪ್ರಕೃತಿಯ ಉಳಿವಿಗೆ ಗಿಡ ಮರಗಳನ್ನು ಬೆಳೆಸಿ ಉಳಿಸೋಣ ಎಂದ ಅವರು ತಾಯಿಯ ಹೆಸರಿನಲ್ಲಿ ಸಸಿ ನೆಡುವ ವಿಶಿಷ್ಟ ಕಾರ್ಯಕ್ರಮದ ಮೂಲಕ ತಾಯಿಯನ್ನು ಸ್ಮರಿಸಿಕೊಂಡು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು ಪರಿಸರವನ್ನು ಸಮೃದ್ಧಿಗೊಳಿಸೋಣ ಎಂದರು.
ಅಂಗನವಾಡಿ ಕಾರ್ಯಕರ್ತೆಯರಾದ ಸಬೀಯಾ ನಸರೀನ್,ಅಕ್ಷತಾ,ಕಮರುನ್ನೀಸಾ,ಭಾಗ್ಯಶ್ರೀ,ಸರೋಜಾ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…