ನಾಳೆ ಕಸಾಪದಿಂದ ಕನ್ನಡದ ಚಿನ್ನ ಪ್ರಶಸ್ತಿ ಪ್ರದಾನ

ಕಲಬುರಗಿ: ಕರ್ನಾಟಕ ರಾಜ್ಯವೆಂದು  ನಾಮಕರಣಗೊಂಡು ಐವತ್ತು ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಮಾಜದ ವಿವಿಧ ರಂಗಗಳಲ್ಲಿ ಸೇವಾಮುಖಿಯಾಗಿರುವ ಜಿಲ್ಲೆಯ ಐವತ್ತು ಚೇತನಗಳಿಗೆ ಕನ್ನಡದ ಚಿನ್ನ-2024 ಎಂಬ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ.2 ರಂದು ಸಾಯಂಕಾಲ 4.30 ಕ್ಕೆ ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.

ಜಗದೇಳಿಗೆಯಾಗುವುದಿದೆ ಕರ್ನಾಟಕದಿಂದೆ ಎಂಬ ಮಹಾಘೋಷವಾಕ್ಯದೊಂದಿಗೆ ಪರಿಷತ್ತು ಇಡೀ ವರ್ಷ ನಮ್ಮ ನಾಡಿನ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕøತಿ ಹಾಗೂ ನೆಲ-ಜಲ ಕ್ಕೆ ಸಂಬಂಧಿಸಿದಂತೆ ಇಂದಿನ ಹೊಸ ಪೀಳಿಗೆಯಲ್ಲಿ ಕನ್ನಡ ಕನ್ನಡಿಗ ಕರ್ನಾಟಕ ಎಂಬುದರ ಬಗ್ಗೆ ಅರಿವು ಮೂಡಿಸುವ ರಚನಾತ್ಮಕ ಕಾರ್ಯಕ್ರಮಗಳನ್ನು ಈಗಾಗಲೇ ನಡೆಸಿಕೊಂಡು ಬರಲಾಗಿದೆ.

ಮಾತೃಭಾಷೆಯ ಸಿರಿಯನ್ನು ಅಸ್ಮಿತೆಯನ್ನಾಗಿ ಬದುಕು ಕಟ್ಟಿಕೊಂಡವರ ಜತೆಗೆ ಭಾಷೆಯೊಂದಿಗೆ ಸಾಧನೆಯ ಹೆಜ್ಜೆ ಹಾಕಿದವರು ಹಲವರು. ಸಮಾಜ ಪ್ರಗತಿ ಹೊಂದಬೇಕಾದರೆ ಭಾಷೆಯ ಪಾತ್ರವೂ ಹಿರಿದು. ಇಂಥ ಸಾಂಸ್ಕøತಿಕ ಕಾರ್ಯ ಚಟುವಟಿಕೆಗಳೊಂದಿಗೆ ಜೀವನ ಮೌಲ್ಯ ಎತ್ತರಿಸಿದವರು.

ಈ ಹಿನ್ನೆಲೆಯಾಗಿ ಕನ್ನಡದ ಚಿನ್ನ-2024 ಎಂಬ ಪ್ರಶಸ್ತಿಯನ್ನು  ಜಿಲ್ಲೆಯ ಐವತ್ತು ಜನ ಕನ್ನಡ ಅಸ್ಮಿತೆ ತೋರಿದವರಿಗೆ ಈ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದು, ವಿಜಯಪುರ ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ಮಕ್ಕಳ ಸಾಹಿತಿ ಎ.ಕೆ. ರಾಮೇಶ್ವರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಕಸಾಪ ದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಶರಣರಾಜ ಛಪ್ಪರಬಂದಿ ಸೇರಿದಂತೆ ಅನೇಕರು ಉಪಸ್ಥಿತರಿರುವರು ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

4 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

4 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

5 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

15 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

15 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

15 hours ago