ಕಲಬುರಗಿ; ಜಿಲ್ಲೆಯಲ್ಲಿ ವ್ಯಾಪಕ ಮಳೆ ಆಗುತ್ತಿರುವ ಹಿನ್ನಲ್ಲೇಯಲ್ಲಿ ಆರೆಂಜ್ ಹಾಗೂ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮುಂಜಾಗ್ರತೆ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಾರ್ವಜನಿಕರಲ್ಲಿ ಪತ್ರಿಕಾ ಪ್ರಕಟಣೆ ಮೂಲಕ ಮನವಿಮಾಡಿದ್ದಾರೆ.
ಜಿಲ್ಲಾದ್ಯಂತ ವ್ಯಾಪಕ ಮಳೆ ಬೀಳುತ್ತಿದ್ದು ಹಾಗೆ ಮುಂದುವರೆಯುವ ಸಂಭವವಿದ್ದು ಭಾರತೀಯ ಹವಾಮಾನ ಇಲಾಖೆ ದಿನಾಂಕ 02/09/2024 ಬೆಳಿಗ್ಗೆ 8.30 ರವರೆಗೆ “ಆರೆಂಜ್ ಅಲರ್ಟ್ ” ಹಾಗೂ ದಿನಾಂಕ 3 ರ ಬೆಳಿಗ್ಗೆ 8.30 ರವರೆಗೆ ” ಯಲ್ಲೋ ಅಲರ್ಟ್ ” ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಅತಿ ಹೆಚ್ಚಿನ ಮುಂಜಾಗ್ರತೆವಹಿಸುವಂತೆ ಜಿಲ್ಲಾ ಉಸ್ತುವಾರಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು ಜಿಲ್ಲೆಯಲ್ಲಿ ಅದರಲ್ಲೂ ಸೇಡಂ ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹಾಗೆ ಇದೇ ರೀತಿ ಮುಂದುವರೆಯಲಿದೆ. ಹೀಗಾಗಿ ಸಾರ್ವಜನಿಕರು ಹಾಗೂ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಮುಂಜಾಗರೂಕತೆ ವಹಿಸಿಕೊಳ್ಳಬೇಕು.
ಅತೀ ಹೆಚ್ಚು ಮಳೆಯಾಗುವ ಕಾರಣ ಗ್ರಾಮದಲ್ಲಿನ ಕೆರೆ, ಹಳ್ಳ-ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುವ ಸಾಧ್ಯತೆಯಿರುವುದರಿಂದ ಜಾನುವಾರುಗಳಿಗೆ ನೀರು ಕುಡಿಸಲು ಹೊಳೆಯ ಸಮೀಪ ತೆಗೆದುಕೊಂಡು ಹೋಗಬಾರದೆಂದು ಹಾಗೂ ಸಾರ್ವಜನಿಕರು ಸಹ ನದಿ, ಹಳ್ಳ ದಂಡೆ ಕಡೆ ಹೋಗಬಾರದೆಂದು ಸಚಿವರು ಹೇಳಿದ್ದಾರೆ.
ರೈತರಲ್ಲಿ ಮನವಿ:
ಹೊಲದಲ್ಲಿ ಕೆಲಸ ಮಾಡುವ ರೈತ ಭಾಂದವರು ಕೀಟನಾಶಕ ಸಿಂಪರಣೆಯನ್ನು ಮುಂದೂಡುವುದು ಒಳ್ಳೆಯದು. ಹೆಸರು, ಉದ್ದು ಬೆಳೆಗಳು ಕಟಾವಿಗೆ ಬಂದಿರುವ ಕಾರಣ ಬೇಗನೆ ಕಟಾವು ಮಾಡಬಹುದಾಗಿದೆ. ಹೊಲ-ಗದ್ದೆಗಳಲ್ಲಿ ಹೆಚ್ಚಿನ ನೀರು ನಿಂತು ಬೆಳೆ ಹಾನಿಯಾಗುವ ಸಂಭವ ಇರುವುದರಿಂದ ಹೊಲದಲ್ಲಿ ಬಸಿಗಾಲಿವೆ ಮಾಡಿ ನೀರನ್ನು ಹೊರಹಾಕಿ ಬೆಳೆ ಸಂರಕ್ಷಿಸಿಕೊಳ್ಳಬೇಕೆಂದು ಸಚಿವರು ರೈತ ಬಾಂಧವರಿಗೆ ಮನವಿ ಮಾಡಿದ್ದಾರೆ.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…