ಶಿಸ್ತು, ದೇಶಪ್ರೇಮ, ಭಾವೈಕ್ಯ ಮೂಡಿಸುವ ಸೇವಾದಳ: ಶಶೀಲ್ ಜಿ ನಮೋಶಿ

0
68

ಕಲಬುರಗಿ: ‘ಭಾರತ ಸೇವಾದಳ ಸಂಸ್ಥೆಯು ದ್ಯಾರ್ಥಿಗಳಲ್ಲಿ ಶಿಸ್ತು, ದೇಶಪ್ರೇಮ, ಸಹೋದರತೆ ಹಾಗೂ ಭಾವೈಕ್ಯತೆಯ ಜಾಗೃತಿ ಮೂಡಿಸುತ್ತಿದೆ. ಅಲ್ಲದೇ ದೇಶದ ಸ್ವಾತಂತ್ರ್ಯ ಚಳವಳಿಗೆ ಅಪಾರ ಕೊಡುಗೆ ನೀಡಿದೆ’ ಎಂದು ಭಾರತ ಸೇವಾದಳದ ಜಿಲ್ಲಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಹೇಳಿದರು.

ಅವರು ನಗರದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಪಿ ಡಿ ಎ ಎಂಜಿನಿಯರಿಂಗ್ ಕಾಲೇಜಿನ ಪ್ರೋ ಎಸ್ ವಿ ಮಲ್ಲಾಪೂರ ಮೇಕ್ಯಾನಿಕಲ್ ವಿಭಾಗದಲ್ಲಿ ನಡೆದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ,ಭಾರತ ಸೇವಾದಳ ಕಲಬುರ್ಗಿ ಜಿಲ್ಲಾ ಹಾಗೂ ತಾಲೂಕು ಸಮಿತಿ ಸಂಯುಕ್ತಾಶ್ರಯದಲ್ಲಿ ನಡೆದ ರಾಷ್ಟ್ರಧ್ವಜ, ರಾಷ್ಟ್ರ ಗೀತೆ ಕುರಿತು ಮಾಹಿತಿ ಶಿಬಿರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

Contact Your\'s Advertisement; 9902492681

ದೇಶದ ಸೇವೆಗಾಗಿ ಹುಟ್ಟಿಕೊಂಡಿರುವ ಸೇವಾದಳ ಶಿಸ್ತು, ತಾಳ್ಮೆ, ಸೇವಾ ಮನೋಭಾವದಿಂದ ಬಲಿಷ್ಠ ಸಂಸ್ಥೆಯಾಗಿ ಬೆಳೆದಿದೆ. ಇಂದಿನ ಮಕ್ಕಳು ಅತ್ಯುತ್ತಮ ಕಲಿಕೆ ಮೂಲಕ ಆಧುನಿಕತೆಯನ್ನು ಮೈಗೂಡಿಸಿಕೊಂಡಿದ್ದಾರೆ. ಕೆಲವು ದುಶ್ಚಟಗಳ ಮೂಲಕ ಭವಿಷ್ಯಕ್ಕೆ ಸಂಚಕಾರ ತರಿಸಿಕೊಳ್ಳುತ್ತಿದ್ದಾರೆ. ಸೇವಾದಳದ ಮೂಲಕ ದೇಶಪ್ರೇಮ, ಭಕ್ತಿ ಸೇವೆ ಮನೋಭಾವ ಮೂಡಿಸಿದರೆ ಉತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯ ಎಂದರು.

‘ಸೇವಾದಳವು ಶಿಸ್ತಿನ ಸಂಸ್ಥೆಯಾಗಿದ್ದು, ಹಿಂದೂಸ್ತಾನ ಸೇವಾದಳ ಹೆಸರಿನಿಂದ 1923ರಲ್ಲಿ ಆರಂಭವಾದ ಸಂಸ್ಥೆಯು 1950ರ ಮಾರ್ಚ್ 16ರಂದು ಭಾರತ ಸೇವಾದಳವಾಗಿ ಪುನರ್ ನಾಮಕರಣಗೊಂಡು ಇದೀಗ ಶತಮಾನೋತ್ಸವ ಆಚರಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ವೃತ್ತಿಯಲ್ಲಿ ವೈದ್ಯರಾಗಿದ್ದ ಡಾ.ನಾ.ಸು.ಹರ್ಡೀಕರ್ ಅವರು ಹೋರಾಟಗಾರರಲ್ಲಿ ಸಂಘಟನೆ ಹಾಗೂ ದೇಶಪ್ರೇಮದ ಜಾಗೃತಿ ಮೂಡಿಸಲು ಸ್ವತಃ ಸ್ವಾತಂತ್ರ್ಯ ಹೋರಾಟಕ್ಕೆ ದುಮುಕಿ ಇತರರಿಗೂ ಮಾದರಿಯಾಗಿದ್ದರು’ ಎಂದರು.

ಭಾರತ ಸೇವಾದಳಕ್ಕೆ ಶಿಕ್ಷ ಕರೇ ಅಡಿಗಲ್ಲು. ಅದನ್ನು ಉಳಿಸಿ ಬೆಳೆಸುವುದು ಅವರಿಂದ ಮಾತ್ರ ಸಾಧ್ಯ ಎಂದ ಅವರು ಶಿಕ್ಷ ಕ ವೃಂದ ಆ ಹೊಣೆಗಾರಿಕೆಯನ್ನು ಹೊರಬೇಕು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಸೇವಾದಳದ ಶಾಖೆಗಳನ್ನು ಎಲ್ಲ ಶಾಲೆಗಳಲ್ಲೂ ತೆರೆಯಬೇಕು. ಆ ಮೂಲಕ ಇಂದಿನ ಪೀಳಿಗೆಯಲ್ಲಿ ದೇಶಭಕ್ತಿ. ರಾಪ್ಟ್ರಪ್ರೇಮ ಶಿಸ್ತನ್ನು ಬೆಳೆಸಬೇಕು ಎಂದು ಸಲಹೆ ಮಾಡಿದರು.

ರಾಜ್ಯ ಸಂಚಾಲಕರಾದ ಲಕ್ಷ್ಮಣ ಅವಟೆ ಮಾತನಾಡಿ ರಾಷ್ಟ್ರದ ಗರಿಮೆಗೆ ಗರಿ ಮೂಡಿಸಿದ್ದು ಸೇವಾದಳ. ಪ್ರತಿಯೊಬ್ಬರಿಗೂ ಆತ್ಮಸ್ಥೈರ್ಯ ಬೆಳೆಸಿಕೊಳ್ಳಲು ಯೋಗ ಶಿಕ್ಷಣದ ಅಗತ್ಯವಿದೆ. ಸೇವಾದಳದ ಉತ್ತಮ ಚಟುವಟಿಕೆಗಳ ಮೂಲಕ ಜಿಲ್ಲೆ ರಾಜ್ಯದಲ್ಲಿ ಉತ್ತಮ ಸ್ಥಾನದಲ್ಲಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಸೇವಾದಳದ ಜಿಲ್ಲಾ ಕಾರ್ಯದರ್ಶಿಗಳಾದ ಸುರೇಶ್ ಬಡಿಗೇರ ಭಾರತ ಸೇವಾದಳದ ನಡೆದು ಬಂದ ದಾರಿಯ ಕುರಿತು ಹೇಳಿದರು,

ಪಿ ಡಿ ಎ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯರಾದ ಡಾ ಎಸ್ ಆರ್ ಪಾಟೀಲ್ ಸೇವಾದಳದ ತಾಲೂಕ ಕಾರ್ಯದರ್ಶಿಗಳಾದ ಗುರುಲಿಂಗಯ್ಯ ಮಠ ಉಪ ಪ್ರಾಚಾರ್ಯರಾದ ಡಾ ಭಾರತಿ ಹರಸೂರ, ಡಾ ಎಸ್ ಆರ್ ಹೊಟ್ಟಿ ವೇದಿಕೆ ಮೇಲೆ ಉಪಸ್ಥಿತರಿದ್ದರು.

ಜಿಲ್ಲಾ ಸಂಘಟಕರಾದ ಚಂದ್ರಶೇಖರ ಜಮಾದಾರ ರಾಷ್ಟ್ರಧ್ವಜ, ರಾಷ್ಟ್ರ ಗೀತೆ ಕುರಿತು ಸಂಸ್ಥೆಯ ಎಲ್ಲಾ ಕಾಲೇಜುಗಳ ಮುಖ್ಯಸ್ಥರಿಗೆ ಹಾಗು ಉಪನ್ಯಾಸಕರಿಗೆ ತರಬೇತಿ ನೀಡಿದರು. ಕ್ರೀಡಾ ನಿರ್ದೆಶಕರಾದ ಪ್ರಭುಲಿಂಗ ಪಾಟೀಲ್ ವಂದನಾರ್ಪಣೆ ಮಾಡಿದರು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here