ಬಿಸಿ ಬಿಸಿ ಸುದ್ದಿ

ಕೃಷಿ ಕೌಶಲ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡಲು ಡಾ. ಅಜೆಯಸಿಂಗ್ ಕರೆ

ಕಲಬುರಗಿ: ಕೌಶಲ್ಯ ಅಭಿವೃದ್ಧಿ ಕೇಂದ್ರಗಳು ಇಂದಿನ ಅತೀ ಅವಶ್ಯಕವಾದ ಹಾಗೂ ಪ್ರತಿಯೋಬ್ಬ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳುವ ಸಾಧನಾ ಕೇಂದ್ರಗಳು. ವಿದ್ಯಾರ್ಥಿಗಳು ಇವುಗಳ ಸಮಯೋಚಿತ ಸೌಲಭ್ಯ ಪಡೆದುಕೊಳ್ಳಬೇಕು. ಸದ್ಯದ ಪರಿಸ್ಥಿತಿಯಲ್ಲಿ ನಿರುದ್ಯೋಗ ಅತಿರೇಕಕ್ಕೆ ಹೋಗಲು ಗುಣಮಟ್ಟದ ಕೌಶಲ್ಯವಿಲ್ಲದಿರುವುದೇ ಮುಖ್ಯ ಕಾರಣ. ಮುಂಬರುವ ದಿನಗಳಲ್ಲಿ ಜೇವರ್ಗಿಯಲ್ಲಿಯೂ ಕೂಡ ಕೃಷಿ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಸ್ಥಾಪಿಸುವ ಗುರಿಯನ್ನು ಹೊಂದಿದ್ದೇವೆ. ಎಂದು ಜೇವರ್ಗಿಯ ವಿಧಾನಸಭಾ ಸದಸ್ಯರಾದ ಡಾ. ಅಜೇಯ ಸಿಂಗ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಇಂದು ಇಲ್ಲಿನ ಶ್ರೀಮತಿ ವ್ಹಿ.ಜಿ. ಮಹಿಳಾ ಮಹಾವಿದ್ಯಾಲಯದಲ್ಲಿ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ ಏರ್ಪಡಿಸಿದ ಭಾರತೀಯ ವಿಶೇಷ ಅಂಚೇ ಲಕೋಟೇ ಹಾಗೂ ಮೈಸ್ಟಾಂಪ್ ಬಿಡುಗಡೆ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮಾಹಿತಿ ವಿಜ್ಞಾನ ವಿಭಾಗದ ಕೌಶಲ್ಯ ಅಭಿವೃದ್ಧಿ ಕೇಂದ್ರದ ಶಿಲಾನ್ಯಾಸ ಬಿಡುಗಡೆ ಕೂಡ ಮಾಡಲಾಯಿತು.

ಭಾರತೀಯ ಅಂಚೆ ಕಚೇರಿ ವತಿಯಿಂದ ತಯಾರಿಸಲಾದ ವಿಶೇಷ ಅಂಚೇ ಲಕೋಟೆ ಮತ್ತು ಮೈಸ್ಟಾಂಪ್ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೇಯಸನ್ನು ರಾಷ್ಟ್ರಾದ್ಯಂತ ಪ್ರಚುರ ಪಡಿಸುತ್ತದೆ. ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ ಈ ಭಾಗದ ಜನರ ಆಶಾ ದೀಪವಾಗಿದ್ದು ಸಾಕಷ್ಟು ಜನರ ಬಾಳಿನ ನಂದಾ ದೀಪವಾಗಿದೆ, ಇಂದು ಈ ಸಂಸ್ಥೆಯ ಅಧ್ಯಕ್ಷರಾದ ಡಾ. ಭೀಮಾಶಂಕರ ಸಿ. ಬಿಲಗುಂದಿಯವರು ಈ ಮಹತ್ಕಾರ್ಯಕ್ಕೆ ಅನುವು ಮಾಡಿಕೊಟ್ಟಿರುವುದು ಸಂತಸದ ಸಂಗತಿ ಎಂದು ಡಾ. ಅಜೇಯ ಸಿಂಗ್ ನುಡಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಲಬುರಗಿ ವಿಭಾಗದ ಅಂಚೇ ಕಚೇರಿಗಳ ಹಿರಿಯ ಅಧಿಕ್ಷಕ ಅಧಿಕಾರಿಗಳಾದ ಬಿ. ಆರ್. ನನಜಗಿ ಅವರು ಮಾತನಾಡಿ ಈ ವಿಶೇಷ ಅಂಚೆ ಲಕೋಟೆ ಮತ್ತು ಮೈಸ್ಟಾಂಪ್ ಸಂಸ್ಥೆಯ ಹಿರಿಮೆಯನ್ನು ರಾಷ್ಟ್ರದಾದ್ಯಂತ ಪಸರಿಸುವುದಲ್ಲದೆ ಹವ್ಯಾಸಿ ಸಂಗ್ರಹಕಾರರಿಗೆ ಅನುವು ಕೂಡ ಮಾಡಿಕೊಡಲಾಗುತ್ತದೆ ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಡಾ. ಭೀಮಾಶಂಕರ ಸಿ. ಬಿಲಗುಂದಿಯವರು ಮಾತನಾಡಿ ಸಂಸ್ಥೆಯು ತನ್ನ ೬೦ ವರ್ಷಗಳನ್ನು ಪೂರೈಸಿದ ನೇನಪಿಗಾಗಿ ವಿಶೇಷ ಅಂಚೆ ಲಕೋಟೆ ಮತ್ತು ಮೈಸ್ಟಾಂಪ ಬಿಡುಗಡೆಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಯಿತು. ನಮ್ಮ ಶಿಕ್ಷಣ ಸಂಸ್ಥೆಯ ಅಭಿವೃದ್ಧಿ ಹಾಗೂ ಹಿರಿಮೆ ರಾಷ್ಟ್ರಾದ್ಯಂತ ಹರಡಲಿ ಎಂದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಕೌಶಲ್ಯ ಅಭಿವೃದ್ದಿ ಕೇಂದ್ರದ ಬಗ್ಗೆ ಮಾತನಾಡಿದ ಅವರು ಮಾಹಿತಿ ವಿಜ್ಞಾನ ವಿಭಾಗದ ಶಿಕ್ಷಕರು ಈ ಮಹತ್ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿಕೊಡಲಿದ್ದಾರೆಂದು ಹೇಳಿದರು.

ಈ ಸಂದರ್ಭದಲ್ಲಿ ಅಂಚೇ ಕಚೇರಿಯ ವಿಠ್ಠಲ ಚಿತಕೋಟೆ ಅವರು ವಿಶೇಷ ಅಂಚೇ ಲಕೋಟೆಗಳ ಅನುಕೂಲತೆಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಪಿ.ಡಿ.ಎ. ತಾಂತ್ರಿಕ ಮಹಾವಿದ್ಯಾಲಯದ ಮಾಹಿತಿ ವಿಜ್ಞಾನ ವಿಭಾಗದ ಮುಖ್ಯಸ್ಥೆಯಾದ ಡಾ. ಭಾರತಿ ಹರಸೂರ ಅವರು ಕೌಶಲ್ಯ ಅಭಿವೃದ್ಧಿ ಕೇಂದ್ರದ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.

ಕೌಶಲ್ಯ ಅಭಿವೃದ್ಧಿ ಕೇಂದ್ರದ ಸಂಯೋಜಕರಾಗಿ ಡಾ. ಭಾರತಿ ಹರಸೂರ ಹಾಗೂ ಸಂಚಾಲಕರಾಗಿ ಅಶೋಕ ಪಾಟೀಲ ಅವರು ತಮ್ಮ ಕಾರ್ಯವನ್ನು ನಿರ್ವಹಿಸಲಿದ್ದಾರೆ. ಈ ಕೌಶಲ್ಯ ಅಭಿವೃದ್ಧಿ ಕೇಂದ್ರ ಇದೇ ತಿಂಗಳ ೧೧ ರಂದು ತನ್ನ ಕಾರ್ಯವನ್ನು ಪ್ರಾರಂಭಿಸಲಿದ್ದು ಸದ್ಯದಲ್ಲಿ ಕಂಪ್ಯೂಟರ್ ಪ್ರೋಗ್ರಾಮಿಂಗ ವಿಶಯಗಳಾದ ಸಿ ಪ್ರೋಗ್ರಾಮಿಂಗ್, ಜಾವಾ, ಎಸ್.ಕ್ಯೂ.ಎಲ್, ಪೈಥಾನ್ ಮತ್ತು ಆರ್.ಪ್ರೋಗ್ರಾಮ ಗಳನ್ನು ಪ್ರಾರಂಭಿಸಲಾಗುವುದು ಮತ್ತು ಈ ಕ್ರೇಂದ್ರದ ಮುಖ್ಯ ಉದ್ದೇಶ ಕೇವಲ ಕೌಶಲ್ಯ ಅಭಿವೃದ್ಧಿ ಅಲ್ಲದೇ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶವನ್ನು ಕೂಡ ಕಲ್ಪಿಸಿಕೊಡಲಾಗುವುದು ಎಂದು ಕೌಶಲ್ಯ ಅಭಿವೃದ್ಧಿ ಕೇಂದ್ರದ ಸಂಚಾಲಕರಾದ ಡಾ. ಭಾರತಿ ಹರಸೂರ ಹಾಗೂ ಅಶೋಕ ಪಾಟೀಲ ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ಡಾ. ಶಿವಾನಂದ ಎಸ್. ದೇವರಮನಿ, ಆಡಳಿತ ಮಂಡಳಿ ಸದಸ್ಯರಾದ ಡಾ. ಸಂಪತಕುಮಾರ ಡಿ. ಲೋಯಾ ಅವರು ಉಪಸ್ಥಿತರಿದ್ದರು. ಶ್ರೀಮತಿ. ವ್ಹಿ. ಜಿ. ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ವೀಣಾ ಹುನುಗುಂಟಿಕರ್ ಅವರು ಎಲ್ಲರಿಗೂ ಸ್ವಾಗತಿಸಿದರು. ಪ್ರಾಧ್ಯಾಪಕರಾದ ಡಾ. ರಾಜೇಂದ್ರ ಕೊಂಡಾ ಅವರು ವಂದನಾರ್ಪಣೆ ಮಾಡಿದರು ಹಾಗೂ ಪಿ.ಯು. ಕಾಲೇಜಿನ ಪ್ರಾಚಾರ್ಯರಾದ ಸುಜಾತಾ ಪಾಟೀಲ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಕಾಯಕ್ರಮದಲ್ಲಿ ಎಂ. ಅರ್. ವೈದ್ಯಕೀಯ ಮಹಾವಿದ್ಯಾಲಯದ ಡೀನಗಳಾದ ಡಾ. ಉಮೇಶ್ಚಂದ್ರ, ಬಸವೇಶ್ವರ ಆಸ್ಪತ್ರೆಯ ಡಾ.ಮಲ್ಲಿಕಾರ್ಜುನ ತೆಗನೂರ, ದಂತ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಜಯಶ್ರೀ ಮುದ್ದಾ, ವಿವಿಧ ಕಾಲೇಜುಗಳ ಪ್ರಾಚಾರ್ಯರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

12 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

12 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

12 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

12 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

12 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

12 hours ago