ರಾಯಚೂರು: ನಗರದ ರಸ್ತೆ ಗುಂಡಿಗಳಲ್ಲಿ ಗಿಡ ನೆಟ್ಟು ರಸ್ತೆ ದುರಸ್ಥಿ ಆಗ್ರಹಿಸಿ ನಗರಸಭೆ ವಿರುದ್ಧ ಅಖಿಲ ಭಾರತ ಕ್ರಾಂತಿಕಾರಿ ಯುವಜನ ಒಕ್ಕೂಟ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಹಾಗೂ ಡಾ. ಬಿ. ಆರ್ ಅಂಬೇಡ್ಕರ್ ವೃತ್ತದ ಬಸ್ ನಿಲ್ದಾಣ ಹೋಗುವ ರಸ್ತೆ ಗುಂಡಿಯಲ್ಲಿ ಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿ ವರ್ಷ ಮಳೆಗಾಲದಲ್ಲಿ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳು ಬಾಯಿ ತೆರೆಯುತ್ತವೆ. ಕಳೆದ ವಿಧಾನಸಭೆ ಚುನಾವಣೆಯ ಮುಂಚೆ ನೀತಿ ಸಂಹಿತೆಯ ಜಾರಿಯಾಗುವ ಮುಂಚೆ ನಿರ್ಮಸಿದ ರಸ್ತೆಗಳು ಎರಡು ವರ್ಷಗಳ ಒಳಗೆ ಅದೋಗತಿಗೆ ತಲುಪಿದ್ದು ಕಳಪೆ ಕಾಮಗಾರಿಗೆ ಸಾಕ್ಷಿ ಯಾಗಿದೆ. ಇದಕ್ಕೆ ಶಾಸಕರೇ ನೇರ ಹೊಣೆ ಹೊರಬೇಕು. ರಾಜ್ಯಕ್ಕೆ ವಿದ್ಯುತ್, ಚಿನ್ನ ನೀಡುವ ರಾಯಚೂರಿನ ಜಿಲ್ಲಾ ಕೇಂದ್ರದಲ್ಲಿಯೇ ಈ ಸ್ಥಿತಿಇದ್ದು ಅಭಿವೃದ್ಧಿಗೆ ಕೊಡಲಿಯೇಟಾಗಿದೆ.
ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆ ಕನಿಷ್ಟ ಗುಂಡಿ ಮುಚ್ಚುವ ಕಾರ್ಯಕ್ಕೆ ಮುಂದಾಗದೇ ಸಾರ್ವಜನಿಕರ ತಾಳ್ಮೆಪರೀಕ್ಷಿಸುವಂತಿದೆ. ಜಿಲ್ಲೆಯಿಂದ ಇಬ್ಬರು ಮಂತ್ರಿ, ಇಬ್ಬರು ಎಂಎಲ್ಸಿ, ಶಾಸಕರಿದ್ದರು ಜಿಲ್ಲಾ ಕೇಂದ್ರದಲ್ಲಿ ಉತ್ತಮವಾದ ರಸ್ತೆಯಿಲ್ಲದಿರುವುದು ದುರದೃಷ್ಟಕರ ಸಂಗತಿಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಗುಂಡಿ ಮುಚ್ಚುವುದರೊಂದಿಗೆ ರಸ್ತೆಗಳ ಗುಣಮಟ್ಟ ಹಾಳಾಗದಿರುವ ಬಗ್ಗೆ ಮುಂಜಾಗ್ರತೆ ಕ್ರಮ ವಹಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ:ಖಙಈI ಜಿಲ್ಲಾ ಮುಖಂಡರು ಅಜೀಜ್ ಜಾಗೀರ್ದಾರ್, ನಿರಂಜನ್ ಕುಮಾರ್, ಮಾರೆಪ್ಪ ಅರವಿ, ರವಿಚಂದ್ರನ್, ನರಸಪ್ಪ, ಆಂಜನೇಯ, ಎಲ್ಲಪ್ಪ, ಹನೀಫ್ ಅಬಕಾರಿ ಇದ್ದರು.
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…
ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ.…
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…