ಕಲಬುರಗಿ: ಸೇಡಂ ತಾಲೂಕಿನಾದ್ಯಂತ ಕಳೆದ 2-3 ದಿನದಿಂದ ಸುರಿದ ಮಳೆಯಿಂದ ಹಾನಿಯಾದ ರಸ್ತೆ, ಸೇತುವೆ, ಮನೆ, ಕೆರೆ, ಟ್ಯಾಂಕ್, ಶಾಲಾ ಕಟ್ಟಡಗಳ ಕುರಿತು ಎರಡು ದಿನದಲ್ಲಿ ತಹಶೀಲ್ದಾರರಿಗೆ ಆಯಾ ಇಲಾಖೆ ಅನುಷ್ಟಾನ ಅಧಿಕಾರಿಗಳು ವರದಿ ನೀಡಬೇಕು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಸೂಚಿಸಿದರು.
ಮಂಗಳವಾರ ಸೇಡಂ ಪಟ್ಟಣದ ತಾಲೂಕ್ ಪಂಚಾಯತ್ ಸಭಾಂಗಣದಲ್ಲಿ ಅತಿವೃಷ್ಟಿ ಹಾನಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದು ಮಾತನಾಡಿದ ಅವರು, ಹಾನಿಯಾದ ರಸ್ತೆ, ಸೇತುವೆ, ಶಾಲಾ ಕಟ್ಟಡ ಹೀಗೆ ಎಲ್ಲವು ದುರಸ್ತಿಗೆ ಬೇಕಾದ ಅಂದಾಜು ಪಟ್ಟಿ ಸಲ್ಲಿಸಿದಲ್ಲಿ ಎನ್.ಡಿ.ಆರ್.ಎಫ್ ನಡಿ ಅನುದಾನ ಬಿಡುಗಡೆಗೊಳಿಸಲಾಗುವುದು. ಈ ಸಂಬಂಧ ಡಿ.ಸಿ. ಜೊತೆಗೆ ಮಾತನಾಡುವೆ ಎಂದರು.
ಮಳೆಗೆ ಚಿಂತಪಳ್ಳಿ ಬಳಿ ಸೇತುವೆ ಹಾನಿಯಾಗಿದ್ದು, ಕೂಡಲೆ ಸರಿಪಡಿಸಿ ಎಂದು ಲೋಕೋಪಯೋಗಿ ಇಲಾಖೆಯ ಇ.ಇ.ಗೆ ನಿರ್ದೇಶನ ನೀಡಿದ ಸಚಿವರು, ಕಲಬುರಗಿ ರಸ್ತೆಯ ಮಳಖೇಡ್ ಬಳಿಯ ಕಾಗಿಣಾ ಹಳೇ ಸೇತುವೆ ಹಾನಿಯಾಗಿದಲ್ಲಿ, ಅದನ್ನು ಸಹ ಸರಿಪಡಿಸುವ ಕೆಲಸವಾಗಬೇಕು ಎಂದು ಕೆ.ಅರ್.ಡಿ.ಸಿ.ಎಲ್ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗದ ಅಧಿಕಾರಿಗಳು ಮಾತನಾಡಿ ತಾಲೂಕಿನಲ್ಲಿ 10 ರಸ್ತೆ, 3 ಕೆರೆ ಹಾನಿಯಾಗಿದ್ದು, ದುರಸ್ತಿಗೆ 175 ಲಕ್ಷ ರೂ. ಅಗತ್ಯವಿದೆ ಎಂದು ತಿಳಿಸಿದರು. ತಾಲೂಕಿನಲ್ಲಿರುವ 34 ಕೆರೆಗಳು ತುಂಬಿದ್ದು, ಇದುವರೆಗೆ ಯಾವುದೇ ಹಾನಿಯಾಗಿಲ್ಲ ಎಂದು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸಭೆಯ ಗಮನಕ್ಕೆ ತಂದಾಗ, ಕೆರೆ ತುಂಬಿದ್ದರಿಂದ ಮುಂದೆ ಹಾನಿಯಾಗುವ ಸಾಧ್ಯತೆ ಇದ್ದು, ತೀವ್ರ ನಿಗಾ ವಹಿಸಿ ಎಂದು ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದರು.
ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳು ಕ್ರಮವಾಗಿ ಬಿದ್ದ ಮಳೆ ಪ್ರಮಾಣ ಮತ್ತು ಬೆಳೆ ಹಾನಿ ಬಗ್ಗೆ ಮಾಹಿತಿ ನೀಡಿದರು. ಕುರಕುಂಟಾ ಗ್ರಾಮದ 40 ವರ್ಷದ ವ್ಯಕ್ತಿ ಪ್ರವಾಹಕ್ಕೆ ಕೊಚ್ಚಿ ಹೋಗಿರುವ ಬಗ್ಗೆ ಮಾಹಿತಿ ಪಡೆದ ಸಚಿವರು, ಕೂಡಲೆ ಪತ್ತೆ ಹಚ್ಚುವಂತೆ ಪೊಲೀಸರಿಗೆ ಸೂಚನೆ ನೀಡಿದರು. ಸಿ.ಪಿ.ಐ ಮಹಾದೇವ ಮಾತನಾಡಿ ವ್ಯಕ್ತಿಯ ಶವ ಪತ್ತೆಗೆ ಶೋಧ ನಡೆದಿದ್ದು, ಎಸ್.ಡಿ.ಅರ್.ಎಫ್., ಅಗ್ನಿಶಾಮಕ ತಂಡದ ನೆರವು ಪಡೆಯಲಾಗಿದೆ ಎಂದರು.
ಸೇಡಂ ಪಟ್ಟಣದಲ್ಲಿ ಪ್ರಮುಖವಾಗಿ ಇಂದಿರಾ ನಗರದಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದ್ದು, ತಹಶೀಲ್ದಾರರಿಗೆ ಮನೆಗಳ ಪಟ್ಟಿ ನೀಡಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಶರಣಯ್ಯ ಸ್ವಾಮಿ ತಿಳಿಸಿದರು. ತಾಲೂಕಿನಾದ್ಯಂತ ಮಳೆಯಿಂದ ಶಾಲೆಗಳು ಹಾನಿಯಾದಲ್ಲಿ ಬಿ.ಇ.ಓ ಅವರು ಮುಖ್ಯ ಗುರುಗಳಿಂದ ಮಾಹಿತಿ ಪಡೆದು ವರದಿ ಸಲ್ಲಿಸಬೇಕು ಎಂದು ಸಚಿವರು ತಿಳಿಸಿದರು.
ಪಿ.ಡಿ.ಓ ಗಳು ಕೇಂದ್ರ್ಥಾನದಲ್ಲಿರಿ: ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಪಿ.ಡಿ.ಓ, ವಿ.ಎ.ಗಳು ಕೇಂದ್ರಸ್ಥಾನದಲ್ಲಿದ್ದು, ಮಳೆಯಿಂದಾಗುವ ಹಾನಿ ಬಗ್ಗೆ ಮೇಲಾಧಿಕಾರಿಗಳಿಗೆ ವರದಿ ನೀಡಬೇಕು. ಮನೆಗೆ ನೀರು ನುಗ್ಗಿದ ಪ್ರಕರಣಗಳಲ್ಲಿ ನಿಯಮಾವಳಿಯಂತೆ ಕೂಡಲೆ ಪರಿಹಾರ ವಿತರಣೆ ಮಾಡಬೇಕು ಎಂದು ತಹಶೀಲ್ದಾರ ಶ್ರೇಯಾಂಕಾ ಧನಶ್ರೀ ಅವರಿಗೆ ಸಚಿವರು ಸೂಚನೆ ನೀಡಿದರು.
ಸಂಸದ ರಾಧಾಕೃಷ್ಣ ದೊಡ್ಡಮನಿ, ಸಹಾಯಕ ಆಯುಕ್ತ ಪ್ರಭುರೆಡ್ಡಿ, ತಹಶೀಲ್ದಾರ ಶ್ರೇಯಾಂಕಾ ಧನಶ್ರೀ, ತಾಲೂಕಾ ಪಂಚಾಯತ್ ಇ.ಓ ಚಿನ್ನಪ್ಪ ಸೇರಿದಂತೆ ಅನೇಕ ಅಧಿಕಾರಿಗಳು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…