ನಿರಂತರ ಪ್ರಯತ್ನದಿಂದ ಉನ್ನತ ಸಾಧನೆ ಸಾಧ್ಯ

ಕಲಬುರಗಿ: ವಿದ್ಯಾರ್ಥಿ ದೆಸೆಯಿಂದಲೇ ಶಿಸ್ತು, ಪ್ರಯತ್ನಶೀಲತೆ, ಸೃಜನಶೀಲತೆ, ಧನಾತ್ಮಕ ಚಿಂತನೆ, ಏಕಾಗ್ರತೆ, ತಾಳ್ಮೆ, ವಿನಯಶೀಲತೆ ಮೈಗೂಡಿಸಿಕೊಳ್ಳಬೇಕು. ದೊಡ್ಡ ಗುರಿಯನ್ನು ನಿರ್ಧರಿಸಿ, ಅದಕ್ಕೆ ಸಮಯದ ಸದುಪಯೋಗದೊಂದಿಗೆ ಪ್ರಬಲ ಇಚ್ಛಾಶಕ್ತಿಯೊಂದಿಗೆ ನಿರಂತರವಾದ ಪ್ರಯತ್ನ ಮಾಡಿದರೆ ಜೀವನದಲ್ಲಿ ಉನ್ನತವಾದ ಸಾಧನೆ ಮಾಡಲು ಸಾಧ್ಯವಿದೆ ಎಂದು ಗುರುಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕಲ್ಯಾಣಕುಮಾರ ಶೀಲವಂತ ಹೇಳಿದರು.

ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ, ವಿದ್ಯಾರ್ಥಿ ಸಂಘ, ಸಾಂಸ್ಕøತಿಕ ಹಾಗೂ ಎನ್.ಎಸ್.ಎಸ್ ಚಟುವಟಿಕೆಗಳಿಗೆ ಚಾಲನೆ, ಪ್ರತಿಭಾ ಪುರಸ್ಕಾರ, ಕಾಲೇಜಿನ ವರ್ಗಾಯಿತ ಸಿಬ್ಬಂದಿಗೆ ಬೀಳ್ಕೊಡುಗೆ ಮತ್ತು ನೂತನ ಸಿಬ್ಬಂದಿಗೆ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಶೇಷ ಉಪನ್ಯಾಸ ನೀಡಿದ ಸಹ ಪ್ರಾಧ್ಯಾಪಕ ಡಾ.ಶರಣಪ್ಪ ಸೈದಾಪೂರ, ಮಾನವೀಯ ಮೌಲ್ಯಗಳ ಅಳವಡಿಕೆ ಅಗತ್ಯ. ಬದುಕನ್ನು ಕಟ್ಟ್ಟಿಕೊಡುವ ಮೌಲ್ಯಯುತ ಶಿಕ್ಷಣ ಇಂದಿನ ಅವಶ್ಯಕವಾಗಿದೆ. ಕೌಶಲಗಳನ್ನು ಅಳವಡಿಸಿಕೊಳ್ಳಿ. ಶಿಕ್ಷಣದ ಸೌಲಭ್ಯಗಳನ್ನು ಸದುಪಯೋಗಮಾಡಿಕೊಳ್ಳುವಂತೆ ಸಲಹೆ ನೀಡಿದರು.

ಸಿಬಿಸಿ ಉಪಾಧ್ಯಕ್ಷ ರವೀಂದ್ರಕುಮಾರ ವೈ.ಕೋಳಕೂರ ಮಾತನಾಡಿ, ಯಾವ ವ್ಯಕ್ತಿ ಜಾತಿ, ಧರ್ಮಕ್ಕೆ ಪ್ರಾತಿನಿಧ್ಯ ನೀಡುತ್ತಾನೆಯೋ, ಆತ ಶ್ರೇಷ್ಟ ವ್ಯಕ್ತಿಯಾಗಲು ಸಾಧ್ಯವಿಲ್ಲ. ಬದಲಿಗೆ ಮಾನವೀಯತೆಯನ್ನು ಅಳವಡಿಸಿಕೊಂಡು ಸಮಾಜಮುಖಿಯಾಗಿ ಸೇವೆ ಸಲ್ಲಿಸುವವರು ದೊಡ್ಡ ವ್ಯಕ್ತಿಗಳಾಗಲು ಸಾಧ್ಯವಿದೆ. ಇಂತಹ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದುವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಚಾರ್ಯ ರವೀಂದ್ರಕುಮಾರ ಸಿ.ಬಟಗೇರಿ, ನಿವೃತ್ತ ಉಪನ್ಯಾಸಕಿ ಚಂದ್ರಪ್ರಭಾ ಕಮಲಾಪುರಕರ್, ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ.ಪಾಟೀಲ, ಉಪನ್ಯಾಸಕರಾದ ಆಸ್ಮಾ ಜಬೀನ, ಮಲ್ಲಿಕಾರ್ಜುನ ದೊಡ್ಡಮನಿ, ನಯಿಮಾ ನಾಹಿದ್, ಶಂಕ್ರೆಪ್ಪ ಹೊಸದೊಡ್ಡಿ, ಮಲ್ಲಪ್ಪ ರಂಜಣಗಿ, ದ್ವಿ.ದ.ಸ ರಾಮಚಂದ್ರ ಚವ್ಹಾಣ, ನಿವೃತ್ತ ಮುಖ್ಯ ಶಿಕ್ಷಕ ಬಸವರಾಜ ಹಡಪದ ಸೇರಿದಂತೆ ಇನ್ನಿತರರಿದ್ದರು.

ಕಾಲೇಜಿನಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಉಪನ್ಯಾಸಕಿ ಶರಣಮ್ಮ ಭಾವಿಕಟ್ಟಿ, ಗ್ರಂಥಪಾಲಕ ಪ್ರಕಾಶ ಎ.ಪಾಟೀಲ, ಪ್ರ.ದ.ಸ ನೇಸರ ಎಂ. ಬೀಳಗಿಮಠ, ಅತಿಥಿ ಉಪನ್ಯಾಸಕಿಯರಾದ ಉಮಾದೇವಿ ಮಾಲಿಪಾಟೀಲ, ಸುನಂದಾ, ಕವಿತಾ ಕಮಲಾಪೂರಕರ್ ಅವರಿಗೆ ಸತ್ಕರಿಸಿ, ಬೀಳ್ಕೊಡಲಾಯಿತು.

ನೂತನವಾಗಿ ಆಗಮಿಸಿದ ಉಪನ್ಯಾಸಕರಾದ ದುಂಡಪ್ಪ ಯರಗೋಳ, ಕೀರ್ತಿ ಬುಜುರಕೆ, ಸುವರ್ಣಲತಾ ಭಂಡಾರಿ, ಗ್ರಂಥಪಾಲಕ ಲಿಂಗರಾಜ ಹಿರೇಗೌಡ್, ಅತಿಥಿ ಉಪನ್ಯಾಸಕರಾದ ಪರಶುರಾಮ, ಮೊಹಮ್ಮದ್ ಅಬ್ದುಲ್ ಸಮದ್ ಅವರಿಗೆ ಸ್ವಾಗತಿಸಲಾಯಿತು.

ಕಳೆದ ಸಾಲಿನಲ್ಲಿ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಾದ ಸಿದ್ದೇಶ, ಭಾಗೇಶ ಮತ್ತು ಮುಸ್ಕಾನ್ ಅವರಿಗೆ ಪ್ರತಿಭಾ ಪುರಸ್ಕಾರ ಜರುಗಿತು. ವಿದ್ಯಾರ್ಥಿ ಪ್ರತಿನಿಧಿಗಳಾದ ಮಹೇಶ, ಮಿಥುನ, ಶಾರದಾ, ನಾಗರಾಜ, ರೋಹನ್, ಶ್ರೀಶೈಲ್ ಮತ್ತು ಎನ್.ಎಸ್.ಎಸ್ ಸ್ವಯಂ ಸೇವಕರ ಪ್ರತಿನಿಧಿಗಳಾದ ಮರೆಣ್ಣ, ದರ್ಶನ, ಹುಲೆಪ್ಪ, ನಾಗೇಶ ಅವರಿಗೆ ಸನ್ಮಾನಿಸಲಾಯಿತು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

7 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

18 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

18 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

20 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

20 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

20 hours ago