ಕಲಬುರಗಿ: ರೈತ ವಿರೋಧಿ ವಿದ್ಯುತ್ ನೀತಿಯನ್ನು ಖಂಡಿಸಿ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಪ್ರೊಟೆಸ್ಟ್ ಮಾಡಲಾಯಿತು.
ನಗರದ ಸರ್ದಾರ ವಲ್ಲಭಬಾಯಿ ಪಟೇಲ್ ವೃತ್ತದಿಂದ ಜೆಸ್ಕಾಂ ಕಛೇರಿಯವರೆಗೂ ಪ್ರತಿಭಟನೆ ನಡೆಸಿದ ರೈತ ಮುಖಂಡರು ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ನಂತರ ಮಾತನಾಡಿದ ರೈತ ಮುಖಂಡ ಮಲ್ಲಣಗೌಡ ಪಾಟೀಲ್ ಮಾತನಾಡಿ ರೈತ ವಿರೋಧಿ ವಿದ್ಯುತ್ ನೀತಿಯನ್ನು ರದ್ದುಪಡಿಸಬೇಕು ಹಾಗೂ ಕೃಷಿ ಪಂಪ್’ಸೆಟ್’ಗಳಿಗೆ ಆಧಾರ್ ಜೋಡಣೆ ಮೂಲಕ ಮೀಟರ್ ಅಳವಡಿಕೆ ಮಾಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ರೈತ ಮುಖಂಡರಾದ ಮಹಾಂತೇಶ್ ಜಮಾದಾರ್, ಈರಣ್ಣ ಭಜಂತ್ರಿ, ದೇವಕಿ ಯಾಳವಾರ್, ಬಸವರಾಜ್ ಹಡಪದ್, ಬಸ್ಸುಗೌಡ ಬಿರಾದಾರ, ಅಲ್ಲಾಭಕ್ಷ, ಸೇರಿದಂತೆ ಹಲವು ರೈತ ಮುಖಂಡರು ಭಾಗಿಯಾಗಿದ್ದರು. ಇನ್ನೂ ಹಸಿರು ಸೇನೆಯ ಜಿಲ್ಲೆಯ ಹಾಗೂ ತಾಲೂಕಿನ ಪ್ರಮುಖ ರೈತ ಮುಖಂಡರು ಸಹ ಭಾಗಿಯಾಗಿದ್ದರು.
ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…
ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…
ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…
ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…
ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…
ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…