ಕಲಬುರಗಿ: ಜಿಲ್ಲಾ ಬಣಗಾರ ಸಮಾಜ ಹಾಗೂ ಶ್ರೀ ಜಡೆ ಶಂಕರಲಿಂಗ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಶ್ರೀ ಗುಡ್ಡಾಪುರ ವರದಾನೇಶ್ವರಿ ಪುರಾಣ ಪ್ರವಚನ ಮಹಾಮಂಗಳ, ಪ್ರತಿಭಾ ಪುರಸ್ಕಾರ ವಿತರಣೆ, ಪಲ್ಲಕ್ಕಿ ಮೆರವಣಿಗೆ ಸಮಾರಂಭವನ್ನು ಸೆ.೮ ಹಾಗೂ ೯ರಂದು ಮಕ್ತಂಪುರದ ಶ್ರೀ ಜಡೆ ಶಂಕರಲಿಂಗ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಸೆ.೮ರಂದು ಬೆಳಿಗ್ಗೆ ೧೧.೩೦ಕ್ಕೆ ನಡೆಯುವ ಪುರಾಣ ಮಹಾಮಂಗಲ, ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭದ ಸಾನಿಧ್ಯವನ್ನು ಮಕ್ತಂಪುರ ಬೃಹ್ನಮಠದ ಶ್ರೀ ಶಿವಾನಂದ ಮಹಾಸ್ವಾಮಿಗಳು ವಹಿಸುವರು. ಗದ್ದುಗೆ ಮಠದ ಶ್ರೀ ಚರಲಿಂಗ ಮಹಾಸ್ವಾಮಿಗಳು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕ ಅಲ್ಲಮಪ್ರಭು ಪಾಟೀಲ್, ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಅತಿಥಿಗಳಾಗಿ ಪಾಲಿಕೆ ಸದಸ್ಯ ವಿಜಯಕುಮಾರ ಸೇವಲಾನಿ, ಮಾಜಿ ಸದಸ್ಯ ಬಸವರಾಜ ನಾಶಿ ಆಗಮಿಸುವರು. ಅಧ್ಯಕ್ಷತೆಯನ್ನು ದೇವಸ್ಥಾನ ಟ್ರಸ್ಟ್‌ನ ಅಧ್ಯಕ್ಷ ಆನಂದ ದಂಡೋತಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಧನಶೆಟ್ಟಿ, ಸಮಾಜದ ಅಧ್ಯಕ್ಷ ಶಾಂತಪ್ಪ ಘೂಳಿ, ಪ್ರಧಾನ ಕಾರ್ಯದರ್ಶಿ ಸುರೇಶ ಉಡಚಣ ವಹಿಸುವರು.
ಸೆ.೯ರಂದು ಮಧ್ಯಾಹ್ನ ೨ರಿಂದ ಸಂಜೆ ೭ ಗಂಟೆವರೆಗೆ ದೇವಸ್ಥಾನದಿಂದ ಭಾಜಾ ಭಜಂತ್ರಿಯೊಂದಿಗೆ ಅದ್ಧೂರಿಯಾಗಿ ದೇವರ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಪಾಲ್ಗೊಳ್ಳಬೇಕೆಂದು ಟ್ರಸ್ಟ್‌ನ ಅಧ್ಯಕ್ಷ ಆನಂದ ದಂಡೋತಿ, ಸಮಾಜದ ಅಧ್ಯಕ್ಷ ಶಾಂತಪ್ಪ ಘೂಳಿ ಮನವಿ ಮಾಡಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…