ವಿದ್ಯಾರ್ಥಿಗಳ ಬೌದ್ಧಿಕ ಶಕ್ತಿಯನ್ನು ಹೆಚ್ಚಿಸಲು ಶ್ರಮಿಸಬೇಕು

0
89

ಕಲಬುರಗಿ: ವಿದ್ಯಾರ್ಥಿಗಳ ಭವಿಷ್ಯದ ಬದುಕನ್ನು ರೂಪಿಸುವ ಶಿಕ್ಷಕರಾದ ನಮ್ಮ ಮೇಲೆ ಬಹು ದೊಡ್ಡ ಜವಾಬ್ದಾರಿ ಇದೆ. ಗುಣಾತ್ಮಕ ಶಿಕ್ಷಣ ನೀಡುವ ಜತೆಗೆ ವಿದ್ಯಾರ್ಥಿಗಳ ಮನೋಭಾವನೆಯನ್ನು ಅರಿತು ಅವರಿಗೆ ಶಿಕ್ಷಣ ಕೊಡಬೇಕಿದೆ. ನನ್ನ ವಿದ್ಯಾರ್ಥಿಗಳಿಗೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ನನಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದ್ದು ದೊಡ್ಡ ಖುಷಿ ಕೊಟ್ಟಿದೆ ಎಂದು ಪ್ರಸಕ್ತ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಮಲ್ಲಿಕಾರ್ಜುನ ಸಿರಸಗಿ ಅವರು ಹೇಳಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕಸಾಪ ದಿಂದ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಪ್ರತಿಯೊಬ್ಬ ಶಿಕ್ಷಕನೂ ಸಹ ಸಹ ಸಮಾಜದ ಹಿತದೃಷ್ಟಿಯಿಂದ ಶಿಕ್ಷಣವನ್ನು ಸವಾಲಾಗಿ ಸ್ವೀಕರಿಸಿ ವಿದ್ಯಾರ್ಥಿಗಳ ಬೌದ್ಧಿಕ ಶಕ್ತಿಯನ್ನು ಹೆಚ್ಚಿಸಲು ಶ್ರಮಿಸಬೇಕು. ಸುಭದ್ರ ಸಮಾಜ ಕಟ್ಟುವಲ್ಲಿ ನಮ್ಮ ಶಿಕ್ಷಕರ ಪಾತ್ರ ಬಹು ಮುಖ್ಯವಾಗಿದೆ ಎಂದರು.

ಪ್ರಮುಖರಾದ ರವೀಂದ್ರಕುಮಾರ ಭಂಟನಳ್ಳಿ, ಶರಣರಾಜ್ ಛಪ್ಪರಬಂದಿ, ರಾಜೇಂದ್ರ ಮಾಡಬೂಳ, ಸಿದ್ಧಲಿಂಗ ಬಾಳಿ, ಡಾ. ರೆಹಮಾನ್ ಪಟೇಲ್, ಚನ್ನಮಲ್ಲಯ್ಯ ಹಿರೇಮಠ, ಪ್ರಭುಲಿಂಗ ಮೂಲಗೆ, ಈರಯ್ಯಾ ಹಿರೇಮಠ, ಬಾಬುರಾವ ಪಾಟೀಲ, ಶಿವಕುಮಾರ ಸಿ ಎಚ್., ಧರ್ಮರಾಜ ಜವಳಿ, ಸೈಯದ್ ನಜಿರುದ್ದೀನ್ ಮುತ್ತವಲಿ, ರಾಘವೇಂದ್ರ ಚಾರ್ಯ, ಶಾಂತಗೌಡ , ಮಲ್ಲುಗೌಡ, ಅಪ್ಪಜಿ ಕೆ ಗುಡೂರ, ವಿನೋದಕುಮಾರ ಜೇನವೇರಿ, ಶಿವಲಿಂಗಪ್ಪ ಅಷ್ಟಗಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here