ಶಹಾಬಾದ: ಪಹಣಿ ತಿದ್ದುಪಡಿ, ಪಿಂಚಣಿ ಅದಾಲತ್‍ನಂತಹ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳೇ ಜನರ ಮಧ್ಯೆ ಆಗಮಿಸಿ ಸಮಸ್ಯೆ ಪರಿಹರಿಸುವ ಉದ್ದೇಶವೇ ಕಂದಾಯ ಅದಾಲತ್, ಜನಸ್ಪಂದನ ಸಭೆ ಎಂದು ತಹಸೀಲ್ದಾರ್ ಜಗದೀಶ ಚೌರ್ ತಿಳಿಸಿದರು.
ತಾಲ್ಲೂಕಿನ ಮರತೂರ ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮ, ಕಂದಾಯ ಅದಾಲತ್, ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಹಣಿ ತಿದ್ದುಪಡಿ, ಪಿಂಚಣಿ ಅದಾಲತ್‍ನ ಸಾರ್ವಜನಿಕರು ಹಲವು ಬಾರಿ ಅರ್ಜಿ ಸಲ್ಲಿಸಿದರೂ ಸಮಸ್ಯೆ ಬಗೆಹರಿದಿರುವುದಿಲ್ಲ. ಅಂತಹವರ ಬ್ಯಾಂಕ್ ಅಕೌಂಟ್, ಆಧಾರ್ ಅಪಡೇಟ್ ಆಗಿರುವುದಿಲ್ಲ. ಹಾಗಾಗಿ ಮಾಸಾಶನ ನಿಂತಿರುತ್ತದೆ. ಇಂತಹ ಪ್ರಕರಣಗಳನ್ನು ಪರಿಶೀಲಿಸಿ ಹಾಗೂ ಹೊಸ ಅರ್ಜಿಗಳನ್ನು ಪಡೆದು ಇದುವರೆವಿಗೂ ಯಾವುದೇ ಸೌಲಭ್ಯವನ್ನು ಪಡೆಯದೆ ಇರುವ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಅಲ್ಲದೇ ಮಳೆಗಾಲ ಇರುವುದರಿಂದ ನಿಮ್ಮ ಜಾನುವಾರುಗಳಿಗೆ ಕಾಲುಬಾಯಿ ರೋಗ, ಚರ್ಮಗಂಟು ರೋಗ ಕಂಡು ಬರುವ ಸಾಧ್ಯತೆ ಇರುತ್ತವೆ.ಆದ್ದರಿಂದ ಸರಿಯಾದ ಸಮಯಕ್ಕೆ ಲಸಿಕೆ ಹಾಕಿಸಿ. ಅಲ್ಲದೇ ನಿಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡಿ.ಮಕ್ಕಳಿಗೆ ಪ್ರತಿದಿನ ಶಾಲೆಗೆ ಕಳಿಸಿ.ನಿಮ್ಮ ಯಾವುದೇ ಸಮಸ್ಯೆಗಳಿದ್ದರೂ ತಿಳಿಸಿ.ಇಲ್ಲೇ ಬಗೆಹರಿಸುವ ಸಮಸ್ಯೆಗಳಿದ್ದರೇ ಸ್ಥಳದಲ್ಲಿಯೇ ಪರಿಹಾರ ನೀಡಲಾಗುವುದು.ಇಲ್ಲದಿದ್ದರೇ ಸಂಬಂಧಪಟ್ಟ ಇಲಾಖೆಗೆ ಕಳುಹಿಸಿ ಸಾಧ್ಯವಾದಷ್ಟು ಬೇಗನೆ ಪರಿಹರಿಸಲಾಗುವುದೆಂದು ಹೇಳಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರವಿ ನರೋಣಿ ಮಾತನಾಡಿ, ಗ್ರಾಮದಲ್ಲಿ ಹಂದಿಗಳ ಕಾಟ ಹೆಚ್ಚಾಗಿದೆ.ಇದರಿಂದ ಬಹಳ ಸಮಸ್ಯೆಯಾಗುತ್ತಿದ್ದು, ಹಂದಿಗಳನ್ನು ಸ್ಥಳಾಂತರಿಸಬೇಕು.ಲೈನ್‍ಮ್ಯಾನ ಸಮಸ್ಯೆಯಿದೆ.ಮರತೂರ ಗ್ರಾಮಕ್ಕೆ ಇನ್ನೂ ಬಸ್ ಸೌಕರ್ಯ ಒದಗಿಸಬೇಕೆಂದು ಮನವಿ ಮಾಡಿದರು.
ಜನರ ಸಮಸ್ಯೆ ಆಲಿಸಿ ಪೂರ್ಣ ಪ್ರಮಾಣದಲ್ಲಿ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ತಹಸೀಲ್ದಾರ ತಿಳಿಸಿದರು.
ಮರತೂರ ಗ್ರಾಪಂ ಅಧ್ಯಕ್ಷೆ ಮಧಿನಾಬೇಗಂ, ಗ್ರೇಡ್-2 ತಹಸೀಲ್ದಾರ ಗುರುರಾಜ ಸಂಗಾವಿ, ಸಹಾಯಕ ಕೃಷಿ ಅಧಿಕಾರಿ ರವೀಂದ್ರ, ಕೆಇಬಿ ಇಲಾಖೆಯ ಸಿದ್ದು ಹಚನಾಳ,ಪಶು ವೈಧ್ಯರಾದ ಮಾರುತಿ ನಾಯಕ, ಸಿಡಿಪಿಓ ಸುನೀತಾ,ಉಪತಹಸೀಲ್ದಾರ ರಾಜೇಶ ದೇವಣಿ,ಪಿಡಿಓ ಭಗವಂತರಾಯ ಸೇರಿದಂತೆ ಗ್ರಾಮದ ಅನೇಕ ಜನರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…