ಗುರು-ಗುರಿ ಇದ್ದರೆ ಯಶಸ್ಸು ಖಚಿತ

0
52

ಕಲಬುರಗಿ: ಬೋಧನಾ ವೃತ್ತಿ ಅತ್ಯಂತ ಶ್ರೇಷ್ಠ ವೃತ್ತಿಗಳಲ್ಲಿ ಒಂದು ಎಂಬುದನ್ನು ಪರಿಗಣಿಸಿರುವ ದೇಶ ನಮ್ಮದು. ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವುದರ ಜತೆಗೆ ಸರಿ ತಪ್ಪುಗಳನ್ನು ತಿದ್ದುವ, ಅವರಲ್ಲಿನ ಆಸಕ್ತಿಗಳನ್ನು ವೃದ್ಧಿಸುವ ಮತ್ತು ಅವರ ಬದುಕಿಗೆ ಗುರಿ ರೂಪಿಸುವುದರಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು. ಮೌಲ್ಯಯುತ ಸಮಾಜ ರೂಪಿಸುವ ಶಿಕ್ಷಕರಿಗೆ ತಮ್ಮದೇ ಆದ ದಿನವೊಂದನ್ನು ಸಂಭ್ರಮಿಸುವ ಅವಕಾಶ ಇದು ಎಂದು ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ಐ ಕೆ ಪಾಟೀಲ್ ಹೇಳಿದರು.

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ,ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

Contact Your\'s Advertisement; 9902492681

ಶಿಕ್ಷಕರ ಮೇಲಿನ ಜವಾಬ್ದಾರಿಗಳು, ಅವರನ್ನು ವಿದ್ಯಾರ್ಥಿಗಳು ಮತ್ತು ಜನರು ನೋಡುವ ಬಗೆ ಹಾಗೂ ಶಿಕ್ಷಕರ ಮನೋಭಾವಗಳು ಕೂಡ ಈ ಕಾಲಘಟ್ಟದಲ್ಲಿ ಬದಲಾಗಿದೆ. ಆದರೆ ಅವರ ಹೊಣೆಗಾರಿಕೆಗಳು ಬದಲಾಗಿಲ್ಲ. ಅವರ ಜವಾಬ್ದಾರಿ ಮತ್ತು ಒತ್ತಡಗಳು ಇನ್ನಷ್ಟು ಹೆಚ್ಚಾಗಿವೆ. ಇಂತಹ ಅನೇಕ ಕಾರಣಗಳಿಂದಾಗಿ ‘ಶಿಕ್ಷಕರ ದಿನಾಚರಣೆ’ ಮಹತ್ವ ಪಡೆದುಕೊಳ್ಳುತ್ತದೆ ಎಂದು ಹೇಳಿದರು.

ಸೆ. 5ರಂದು ಶಾಲಾ ಕಾಲೇಜುಗಳ ವಾತಾವರಣ ಒಂದಷ್ಟು ಬದಲಾಗುತ್ತದೆ. ಮಕ್ಕಳೊಂದಿಗೆ ಶಿಕ್ಷಕರೂ ಮಕ್ಕಳಾಗುತ್ತಾರೆ. ಶಿಕ್ಷಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಮಕ್ಕಳೂ ಶಿಕ್ಷಕರಿಗೆ ವಿವಿಧ ರೀತಿಯಲ್ಲಿ ಗೌರವ ಅರ್ಪಿಸುತ್ತಾರೆ ಇಂದು ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿಗಳು ನಮಗಾಗಿ ಗೌರವ ಅರ್ಪಿಸಿರುವದು ಸಂತಸದ ವಿಷಯವಾಗಿದೆ ಎಂದು ಹೇಳಿದರು.

ಶಿಕ್ಷಕರ ದಿನಾಚರಣೆ ಇತಿಹಾಸ ಹೇಳುತ್ತಾ ಭಾರತದ ಮೊದಲ ಉಪ ರಾಷ್ಟ್ರಪತಿ ಮತ್ತು ಎರಡನೆಯ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನಿಸಿದ್ದು 1888ರ ಸೆ. 5ರಂದು. ಅವರ ಗೌರವಾರ್ಥ ಸೆ. 5ರ ದಿನವನ್ನು ಶಿಕ್ಷಕರ ದಿನವೆಂದು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿದೆ. ರಾಜಕಾರಣಕ್ಕೆ ಪ್ರವೇಶಿಸುವ ಮುನ್ನ ಅವರು ಸುದೀರ್ಘ ಸಮಯ ವಿವಿಧ ಕಾಲೇಜುಗಳಲ್ಲಿ ಪ್ರೊಫೆಸರ್ ಆಗಿ ಬೋಧನಾ ವೃತ್ತಿ ನಡೆಸಿದ್ದರು. ಶಿಕ್ಷಕರಲ್ಲದೆ ಅವರು ಬರಹಗಾರರೂ ಆಗಿದ್ದರು ಎಂದು ಹೇಳಿದರು.

ದೇಶದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಅವರ ನಂತರ 1962ರಲ್ಲಿ ರಾಷ್ಟ್ರಪತಿ ಹುದ್ದೆಗೆ ಏರಿದ ಡಾ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಆಚರಿಸಲು ಅನುಮತಿ ನೀಡುವಂತೆ ಅವರ ವಿದ್ಯಾರ್ಥಿಗಳು ಕೋರಿದ್ದರು. ಆಗ ಅವರು ತಮ್ಮ ಜನ್ಮದಿನದ ಬದಲು ಅಂದು ಶಿಕ್ಷಕರ ದಿನ ಎಂದು ಆಚರಣೆ ಮಾಡುವಂತೆ ಸಲಹೆ ನೀಡಿದ್ದರು. ಹೀಗೆ 1962ರಲ್ಲಿ ಮೊದಲ ಬಾರಿಗೆ ಶಿಕ್ಷಕರ ದಿನವನ್ನು ಆಚರಿಸಲಾಯಿತು. ಅಲ್ಲಿಂದ ಪ್ರತಿ ವರ್ಷ ರಾಧಾಕೃಷ್ಣನ್ ಅವರ ಜನ್ಮದಿನ ‘ಶಿಕ್ಷಕರ ದಿನ’ವಾಗಿ ಆಚರಣೆಯಾಗುತ್ತಿದೆ ಎಂದು ತಿಳಿಸಿದರು.

ಶಿಕ್ಷಕರನ್ನು ಗುರುಗಳಾಗಿ ಗೌರವಿಸುವ ಗುರು ಪರಂಪರೆಯ ದೇಶ ನಮ್ಮದು ಎಂದು ಉಪನ್ಯಾಸಕಿ ಕೃಷ್ಣವೇಣಿ ಪಾಟೀಲ್ ಮಾತನಾಡಿದರು.

ವೇದಿಕೆಯ ಮೇಲೆ ಉಪನ್ಯಾಸಕರಾದ ಡಾ ಪಾಂಡುರಂಗ ಚಿಂಚನಸೂರ, ಆನಂದ್ ಕೊಪ್ಪರ, ಸರೋಜಾದೇವಿ ಪಾಟೀಲ್, ಸಂಗೀತಾ ಸಡಕೀನ್, ಅಶ್ವಿನಿ ಪಾಟೀಲ್, ಕು ಭಾಗ್ಯಶ್ರೀ, ಮಧುಶ್ರೀ ಪಾಟೀಲ್, ರುದ್ರಾಂಬ, ಮಲಕಮ್ಮ ಪಾಟೀಲ್ ಉಪಸ್ಥಿತರಿದ್ದರು ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿ ದತ್ತಾತ್ರೇಯ ವಠಾರ ಮಾಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here