ಕಲಬುರಗಿ: ಈದ್ ಮಿಲಾದ್ ಉನ್ ನಬಿ ಪ್ರಯುಕ್ತ ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಜ್ ಫಾತೀಮಾ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಗಣೇಶ್ ಚತುರ್ಥಿ ಮತ್ತು ಮಿಲಾದ್ ಉನ್ ನಬಿಯ ಆಚರಣೆ ವೇಳೆ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆ ಮತ್ತು ಅಡಚಣೆಗಳನ್ನು ಸಂಭವಿಸದಂತೆ ನಗರದಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕೆ. ವಿದ್ಯುತ್ ದೀಪಗಳ ದುರಸ್ತಿ, ನಗರದಲ್ಲಿ ಸ್ವಚ್ಛತೆ, ನೀರಿನ ವ್ಯವಸ್ಥೆ ಸೇರಿದಂತೆ ಇನ್ನಿತರ ಸೇವೆಗಳ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ಸಮರ್ಪಕವಾಗಿ ಒದಗಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಹಾಕಿತು ಮಾಡಿದ್ದರು.
ಈ ಸಂದರ್ಭದಲ್ಲಿ ಪಾಲಿಕೆಯ ಆಯುಕ್ತರಾದ ಪಾಟೀಲ್ ಭುವನೇಶ್ ದೇವಿದಾಸ್, ಫರಾಜ್ ಉಲ್ ಇಸ್ಲಾಂ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಾಮ್ ಖಾನ್, ಪಾಲಿಕೆ ಸದಸ್ಯ ಸೈಯದ್ ಅಹ್ಮದ್, ಅಜಮಲ್ ಗೋಲಾ, ವಾಹೆದ್ ಅಲಿ ಫಾತೆಖಾನಿ ಸೇರಿದಂತೆ ಹಲವರು ಇದ್ದರು.