ಆಳಂದ: ಮಾಜಿ ಶಾಸಕ ಸುಭಾಷ್ ಗುತ್ತೇದಾರ ನೇತೃತ್ವದಲ್ಲಿ ಗುರುವಾರ ಮಾದನಹಿಪ್ಪರ್ಗಾ ಗ್ರಾಮದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ನಂತರ ಮಾಜಿ ಶಾಸಕ ಸುಭಾಷ ಗುತ್ತೇದಾರ ಮಾತನಾಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆಗಳನ್ನು, ಅಭಿವೃದ್ಧಿ ಕಾರ್ಯಗಳನ್ನು ಮನೆ ಮನೆಗೆ ತೆರಳಿ ಮನವರಿಕೆ ಮಾಡಿಕೊಡುವುದರ ಜೊತೆಗೆ ಸದಸ್ಯತ್ವ ನೊಂದಣಿ ಮಾಡಲಾಗುತ್ತಿದೆ ಎಂದು ಹೇಳಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಸಮ್ಮುಖದಲ್ಲಿ ಪಕ್ಷದ ಪ್ರಥಮ ಸದಸ್ಯತ್ವ ಪಡೆಯುವ ಮೂಲಕ ದೇಶಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ ಅಂತೆಯೇ ತಾಲೂಕಿನಲ್ಲಿ ಕೂಡ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ, ಯಶವಂತರಾವ ಪಾಟೀಲ ಇಕ್ಕಳಕಿ, ಶಿವಪ್ಪ ಕೋಳಶೆಟ್ಟಿ, ಬಸವರಾಜ ಸಾಣಕ, ಸುಭಾಷ ಪಾಟೀಲ, ಎಸ್‍ಸಿ ಮೋರ್ಚಾ ಅಧ್ಯಕ್ಷ ರಾಜಕುಮಾರ ಘೂಳ, ಸೀತಾರಾಮ ಜಮಾದಾರ, ಪ್ರಕಾಶ ಮಾನೆ ಸೇರಿದಂತೆ ಮಾದನಹಿಪ್ಪರ್ಗಾ ಶಕ್ತಿ ಕೇಂದ್ರದ ವ್ಯಾಪ್ತಿಯ ಎಲ್ಲ ಗ್ರಾಮಗಳ ಪ್ರಮುಖರು, ಮುಖಂಡರು, ಕಾರ್ಯಕರ್ತರು ಹಾಗೂ ಇನ್ನಿತರರು ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…