ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

0
86

ಕಲಬುರಗಿ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಜರುಗಿತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಳಂಗಾ (ಸ.ಕಿ.ಪ್ರಾ.ಸ.ಶಾ ಆಳಂಗಾ)ದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಆಳಂಗಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಪ್ರೀತಿ ರಡ್ಡಿ ಯವರು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳಲ್ಲಿ ಇರುವ ಆಂತರಿಕ ಕಲೆಯನ್ನು ಹೊರ ಹಾಕುವುದು ಮತ್ತು ಪ್ರತಿಭೆಯನ್ನು ಗುರುತಿಸುವುದು ಪ್ರತಿಭಾ ಕಾರಂಜಿಯ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ. ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಪ್ರತಿಭೆ ಅನಾವರಣವಾಗಲೆಂದು ಹಾರೈಸಿದರು.

Contact Your\'s Advertisement; 9902492681

ಕಾರ್ಯಕ್ರಮದಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ವೀರೇಶ ಬೋಳಶೆಟ್ಟಿ ಮಾತನಾಡುತ್ತಾ ಹೊದಲೂರ ಕ್ಲಸ್ಟರ್ ನಲ್ಲಿ ಮೂರು ಗ್ರಾಮ ಪಂಚಾಯಿತಿಗಳು ಬರುತ್ತವೆ ಹೊದಲೂರ,ಆಳಂಗಾ, ಮತ್ತು ತಡೋಳಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಸರ್ಕಾರಿ, ಅನುದಾನಿತ ,ಅನುದಾನ ರಹಿತ, ಶಾಲೆಯ ಮಕ್ಕಳು ಇಂದು ನಡೆಯುವ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸುಮಾರು 50 ಕ್ಕಿಂತಲೂ ಹೆಚ್ಚು ಸ್ಪರ್ಧೆಗಳು ನಡೆಯುತ್ತಿದ್ದು ಜಾನಪದ, ಸಾಮೂಹಿಕ ನೃತ್ಯ,ಚಿತ್ರಬಿಡಿಸುವದು, ಕವನ ವಾಚನ, ಹೀಗೆ ಹಲವಾರು ಸ್ಪರ್ಧೆಗಳು ನಡೆಯುತ್ತಿದ್ದು 1ರಿಂದ 4 ಹಾಗೂ 5 ರಿಂದ7 ಮತ್ತು 8 ರಿಂದ10ನೇ ತರಗತಿಯ ವಿದ್ಯಾರ್ಥಿಗಳು ಹಂತ ಹಂತವಾಗಿ ಭಾಗವಹಿಸುವರು ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here