ಸುರಪುರ: ಅಪ್ರಾಪ್ತೆ ಮೇಲೆ ಮೂವರು ಕಾಮುಕರು ಲೈಂಗಿ ದೌರ್ಜನ್ಯ ನಡೆಸಿ ಒಂದು ತಿಂಗಳಾಗಿದ್ದು ಪ್ರಕರಣ ದಾಖಲಾಗಿದ್ದು ಪೊಲೀಸರು ಇದುವರೆಗೆ ಬಂಧಿಸಿಲ್ಲ ಎನ್ನುವುದು ಬೇಸರದ ಸಂಗತಿ, ಕೂಡಲೇ ಬಂಧಿಸಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ನಿಂಗಣ್ಣ ಗೋನಾಲ ಆಕ್ರೋಶ ವ್ಯಕ್ತಪಡಿಸಿದರು.
ಹುಣಸಗಿ ತಾಲೂಕಿನ ಗ್ರಾಮವೊಂದರಲ್ಲಿ ಆಗಸ್ಟ್ 4 ರಂದು ಅಪ್ರಾಪ್ತ ಬಾಲಕಿ ಮೇಲೆ ಮೂವರು ಕಾಮುಕರು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಅವರನ್ನು ಬಂಧಿಸುವಂತೆ ಆಗ್ರಹಿಸಿ ನಗರದ ಪೊಲೀಸ್ ಠಾಣೆಯ ಡಿವೈಎಸ್ಪಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಿ ಮಾತನಾಡಿ,ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌಜ್ಯನ್ಯ ನಡೆಸಿ ಕೇಳಲು ಹೋದವರ ಮೇಲೆಯೇ ದರ್ಪ ತೋರಿದ್ದಾರೆ.ಆಗಸ್ಟ್ 6 ರಂದು ಪ್ರಕರಣ ದಾಖಲಾಗಿದೆ.ಆದರೆ ಇದುವರೆಗೂ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ,ಇದರಿಂದಲೇ ಕಾಮುಕರಿಗೆ ಯಾವುದೇ ಭಯ ಇಲ್ಲದಂತಾಗಿ ಅತ್ಯಾಚಾರದಂತ ಪ್ರಕರಣಗಳು ದಿನೆ ದಿನೆ ಹೆಚ್ಚುತ್ತಿವೆ,ಇದಕ್ಕೆ ಪೊಲೀಸರ ಇಂತಹ ನಿರ್ಲಕ್ಷ್ಯ ಕಾರಣವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿ,ಕೂಡಲೇ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸಿದರು.
ಇದಕ್ಕು ಮುನ್ನ ಧರಣಿ ಆರಂಭಿಸಿ ಪೊಲೀಸ್ ಇಲಾಖೆ ಹಾಗೂ ಡಿವೈಎಸ್ಪಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ನಾಗರಾಜ ಓಕಳಿ,ತಾಲೂಕ ಸಂಚಾಲಕ ರಮೇಶ ಪೂಜಾರಿ,ಸದಾಶಿವ ಬೊಮ್ಮನಹಳ್ಳಿ,ಹೆಚ್.ಆರ್.ಬಡಿಗೇರ,ಮಾನಪ್ಪ ಶೆಳ್ಳಗಿ,ನಾಗುರಾಜ ಗೋಗಿಕೇರಾ,ರಾಮಪ್ಪ ಕೋರೆ,ಅನೀಲ ಜಿ.ಕಟ್ಟಿಮನಿ,ಚಂದ್ರಾಮ ದಿವಳಗುಡ್ಡ,ಭೀಮಣ್ಣ ಅಡ್ಡೊಡಗಿ,ಗೋಪಾಲ ಗೋಗಿಕೇರಾ ಸೇರಿದಂತೆ ಬಾಲಕಿ ಕುಟುಂಬಸ್ಥರು ಹಾಗೂ ಸಂಘಟನೆಯ ಅನೇಕ ಮುಖಂಡರು ಹಾಗು ಕಾರ್ಯಕರ್ತರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…