ಸುರಪುರ: ನಗರದ ರಂಗಂಪೇಟೆಯ ಮೂಲಕ ರತ್ತಾಳ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿನ ಹಳ್ಳದ ಸೇತುವೆ ಮೇಲೆ ಗುಂಡಿಗಳು ಬಿದ್ದಿದ್ದು ಯಾವುದೇ ಸಂದರ್ಭದಲ್ಲಿ ಅಪಾಯ ಸೃಷ್ಟಿಸುವ ಸಾಧ್ಯತೆ ಇದ್ದು ಸಾರ್ವಜನಿಕರು ಜೀವ ಭಯದಲ್ಲಿ ಸಂಚಾರ ಮಾಡುವ ಸ್ಥಿತಿ ಎದುರಾಗಿದೆ.
ಸೇತುವೆ ಮೇಲೆ ಮೂರು ಕಡೆಗಳಲ್ಲಿ ಕುಸಿತು ಕಾಣಿಸಿಕೊಂಡಿದ್ದು ಮಳೆಗೆ ಕುಸಿಯುವ ಭೀತಿಯು ಜನರಲ್ಲಿ ಕಾಡತೊಡಗಿದೆ.ನಿತ್ಯವು ನೂರಾರು ವಾಹನಗಳು ಈ ರಸ್ತೆ ಮೂಲಕ ಓಡಾಟ ಮಾಡುತ್ತವೆ,ಸೇತುವೆ ಮೇಲೆ ಬಿದ್ದಿರುವ ಗುಂಡಿಗಳು ಭಯ ಹುಟ್ಟಿಸುತ್ತವೆ.
ಸಂಬಂಧಿಸಿರುವ ಇಲಾಖೆಯವರು ಇದರತ್ತ ಗಮನ ಹರಿಸಿ ಕೂಡಲೇ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಏನಾದರು ಅಪಾಯವಾದಲ್ಲಿ ಅದಕ್ಕೆ ಲೋಕೊಪಯೋಗಿ ಇಲಾಖೆ,ತಾಲೂಕ ಆಡಳಿತವೇ ಕಾರಣವಾಗಲಿದೆ.
ಆದ್ದರಿಂದ ಕೂಡಲೇ ಇದರ ದುರಸ್ತಿಗೆ ಮುಂದಾಗುವಂತೆ ರತ್ತಾಳ ಗ್ರಾಮದ ಮುಖಂಡರಾದ ಯಲ್ಲಪ್ಪ ಗಡ್ಡದರ,ನಾಗರೆಡಡಿ ಯಾದಗಿರಿ ಒತ್ತಾಯಿಸಿ,ನಿರ್ಲಕ್ಷ್ಯ ತೋರಿದಲ್ಲಿ ಈ ಭಾಗದ ಜನರು ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…