ಕಲಬುರಗಿ; ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯುಪಿಎಸ್ ಅಂದರೆ ಏಕೀಕೃತ ಪಿಂಚಣಿ ಯೋಜನೆ ವಿರೋಧಿಸಿ ಎನ್ ಎಂ ಒಪಿಎಸ್ ದೆಹಲಿ ಹಾಗೂ ಕರ್ನಾಟಕ ರಾಜ್ಯ ಸರಕಾರಿ ಎನ್ ಪಿ ಎಸ್ ನೌಕರರ ಸಂಘ ಮತ್ತು ಜಿಲ್ಲಾ ಎನ್ ಪಿ ಎಸ್ ನೌಕರರ ಸಂಘದ ವತಿಯಿಂದ ಒಂದು ದಿನ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಲ್ಲಿ ಕಪ್ಪು ಬಟ್ಟೆ ಧರಿಸಿ ಕರ್ತವ್ಯವನ್ನು ನಿರ್ವಹಿಸುವುದರ ಮೂಲಕ ಇಡೀ ರಾಷ್ಟ್ರಾದ್ಯಂತ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯುಪಿಎಸ್ ರದ್ದು ಮಾಡಿ ಒಪಿಎಸ್ ಜಾರಿಗೆ ತರುವಂತೆ ಒತ್ತಾಯಿಸಿ ಕಪ್ಪು ಬಟ್ಟೆ ಧರಿಸಿ ಕರ್ತವ್ಯವನ್ನು ನಿರ್ವಹಿಸಲಾಯಿತು.
ರಾಜ್ಯ ಉಪಾಧ್ಯಕ್ಷ ಚಂದ್ರಕಾಂತ ಪಿ ತಳವಾರ ಚಾಲನೆ ನೀಡಿದರು.ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಜೆ.ಮಲ್ಲಪ್ಪ, ಪ್ರಧಾನ ಕಾರ್ಯದರ್ಶಿ ನರಸಪ್ಪ ರಂಗೋಲಿ, ಕಾರ್ಯಾಧ್ಯಕ್ಷ ಶರಣಗೌಡ ಪಾಟೀಲ, ಎನ್ ಪಿ ಎಸ್ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಧರ್ಮರಾಜ ಜವಳಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವನಾಥ ಶಿಂದೆ.ಉಪನ್ಯಾಸಕರಾದ ರವೀಂದ್ರ ಸಜ್ಜಿ, ಉಮೇಶ ಅಷ್ಟಗಿ, ಅಂಬಾದಾಸ ಜಾದವ, ಶರೀಫ್, ವರ್ಷಾ, ಮಂಜುಳಾ, ರೇಣುಕಾ, ಶರಣಮ್ಮಾ, ಶೀಲಾದೇವಿ, ಡಾ.ಪ್ರಭಾವತಿ, ಭೀಮಯ್ಯ, ನಾಗರಾಜ ಮೈಲಾವರ, ಸುನೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…