ಕಲಬುರಗಿ; ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತುವಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಇದೇ ಸೆ.9 ರಂದು ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಿಗದಿಯಾಗಿದ್ದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ತ್ರೈಮಾಸಿಕ ಸಭೆಯು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ತಿಳಿಸಿದ್ದಾರೆ.
ಇದೆ ಸೆ.17 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲು ಉದ್ದೇಶಿಸಿರುವುದರಿಂದ ಸದರಿ ಸಚಿವ ಸಂಪುಟ ಸಭೆಗೆ ಪೂರ್ವ ತಯ್ಯಾರಿ ಕೈಗೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಸಭೆ ಮುಂದೂಡುವಂತೆ ಸಚಿವರು ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಈ ಸಭೆ ಮುಂದೂಡಲಾಗಿದೆ ಎಂದು ತಿಳಿಸಲಾಗಿದೆ.