ಕಲಬುರಗಿ; ಕಟ್ಟಡ ಕಾರ್ಮಿಕರಿಗೆ ಟೂಲ್ ಕಿಟ್ ವಿತರಣೆ: ಅರ್ಜಿ ಆಹ್ವಾನ

0
117

ಕಲಬುರಗಿ; ಕಾರ್ಮಿಕ ಇಲಾಖೆ ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸರಬರಾಜಾಗಿರುವ ಮೇಸನ್ (ಗೌಂಡಿ) ಕಿಟ್, ವೆಲ್ಡಿಂಡ್ ಕಿಟ್, ರೋಡ್ ಕನ್ಸ್ಟ್ರಕ್ಷನ್ ಟೂಲ್ ಕಿಟ್ ಸೇರಿದಂತೆ ವಿವಿಧ ಟೂಲ್ ಕಿಟ್ ವಿತರಿಸಲು ಕಲಬುರಗಿ ಜಿಲ್ಲೆಯ ಅರ್ಹ ಕಟ್ಟಡ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಿಟ್‍ಗಳನ್ನು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಜೇಷ್ಠತೆ ಆಧಾರದ ಮೇಲೆ ಹಾಗೂ ಈ ಹಿಂದೆ ವಿವಿಧ ಟೂಲ್ ಕಿಟ್‍ಗಳನ್ನು ಪಡೆದುಕೊಂಡಿರುವ ಕಾರ್ಮಿಕರನ್ನು ಹೊರತುಪಡಿಸಿ ಇನ್ನುಳಿದ ಕಾರ್ಮಿರಿಗೆ ವಿತರಿಸಲಾಗುತ್ತದೆ.

Contact Your\'s Advertisement; 9902492681

ಕಲಬುರಗಿ ಜಿಲ್ಲೆಯ ಕಟ್ಟಡ ಕಾರ್ಮಿಕರು ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿ ವ್ಯಾಪ್ತಿಯಲ್ಲಿ 2024ರ ಸೆಪ್ಟೆಂಬರ್ 9 ರಿಂದ 12 ರವರೆಗೆ ಪ್ರತಿದಿನ ಬೆಳಿಗ್ಗೆ 11 ಸಾಯಂಕಾಲ 5.30 ಗಂಟೆಯವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಇರುತ್ತದೆ.

ಸ್ವತ: ಫಲಾನುಭವಿಗಳು ತಮ್ಮ ಆಧಾರ ಕಾರ್ಡ, ಮೋಬೈಲ್ ನಂಬರ್, ನೋಂದಾಯಿತ ಚಾಲ್ತಿಯಲ್ಲಿರುವ ಕಾರ್ಮಿಕರ ಗುರುತಿನ ಚೀಟಿಯನ್ನು ತಮಗೆ ಸಂಬಂಧಿಸಿದ ಹಿರಿಯ ಕಾರ್ಮಿಕ ನಿರೀಕ್ಷಕರು ಹಾಗೂ ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here