ಕಲಬುರಗಿ; ಕಾರ್ಮಿಕ ಇಲಾಖೆ ಮತ್ತು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಸರಬರಾಜಾಗಿರುವ ಮೇಸನ್ (ಗೌಂಡಿ) ಕಿಟ್, ವೆಲ್ಡಿಂಡ್ ಕಿಟ್, ರೋಡ್ ಕನ್ಸ್ಟ್ರಕ್ಷನ್ ಟೂಲ್ ಕಿಟ್ ಸೇರಿದಂತೆ ವಿವಿಧ ಟೂಲ್ ಕಿಟ್ ವಿತರಿಸಲು ಕಲಬುರಗಿ ಜಿಲ್ಲೆಯ ಅರ್ಹ ಕಟ್ಟಡ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಿಟ್ಗಳನ್ನು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಜೇಷ್ಠತೆ ಆಧಾರದ ಮೇಲೆ ಹಾಗೂ ಈ ಹಿಂದೆ ವಿವಿಧ ಟೂಲ್ ಕಿಟ್ಗಳನ್ನು ಪಡೆದುಕೊಂಡಿರುವ ಕಾರ್ಮಿಕರನ್ನು ಹೊರತುಪಡಿಸಿ ಇನ್ನುಳಿದ ಕಾರ್ಮಿರಿಗೆ ವಿತರಿಸಲಾಗುತ್ತದೆ.
ಕಲಬುರಗಿ ಜಿಲ್ಲೆಯ ಕಟ್ಟಡ ಕಾರ್ಮಿಕರು ಆಯಾ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿ ವ್ಯಾಪ್ತಿಯಲ್ಲಿ 2024ರ ಸೆಪ್ಟೆಂಬರ್ 9 ರಿಂದ 12 ರವರೆಗೆ ಪ್ರತಿದಿನ ಬೆಳಿಗ್ಗೆ 11 ಸಾಯಂಕಾಲ 5.30 ಗಂಟೆಯವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಇರುತ್ತದೆ.
ಸ್ವತ: ಫಲಾನುಭವಿಗಳು ತಮ್ಮ ಆಧಾರ ಕಾರ್ಡ, ಮೋಬೈಲ್ ನಂಬರ್, ನೋಂದಾಯಿತ ಚಾಲ್ತಿಯಲ್ಲಿರುವ ಕಾರ್ಮಿಕರ ಗುರುತಿನ ಚೀಟಿಯನ್ನು ತಮಗೆ ಸಂಬಂಧಿಸಿದ ಹಿರಿಯ ಕಾರ್ಮಿಕ ನಿರೀಕ್ಷಕರು ಹಾಗೂ ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…