ಶರಣಬಸವ ವಿವಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ.೧ಕೋಟಿ ದೆಣಿಗೆ

0
35

ಕಲಬುರಗಿ: ರಾಜ್ಯದ ನೇರೆ ಸಂತ್ರಸ್ತರ ನೇರವಿಗಾಗಿ ನಗರದ ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳಿಂದ ಮುಖ್ಯಮಂತ್ರಿಯ ಪರಿಹಾರ ನಿಧಿಗೆ ಸುಮಾರು ೧ಕೋಟಿ ರೂಪಾಯಿ ಚಕ್ ದೆಣಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಶರಣಬಸವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ನೀಡಿದರು.

ಬಸವರಾಜ ದೇಶಮುಖ ಜೊತೆ ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನೀಲಕುಮಾರ ಬಿಡವೆ, ಶರಣಬಸವೇಶ್ವರ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಸರೇಶ ನಂದಗೊವನ್ ನಿಯೋಗ ಬೆಂಗಳೂರು ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯಲ್ಲಿ ಮುಖ್ಯಮಂತ್ರಿಗೆ ಭೇಟಿಯಾಗಿ ಚಕ್ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಪಾಟೀಲ, ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೊಡು, ಸೇಡಂ ಶಾಸಕ ರಾಜಕುಮಾರ ತೆಲ್ಕರ್, ಸುರುಪುರ ಶಾಸಕ ರಾಜುಗೌಡ ಮತ್ತು ವಿಧಾನಪರಿಷತ್ ಸದಸ್ಯ ಬಿ.ಜಿ ಪಾಟೀಲ ಇದ್ದರು.

Contact Your\'s Advertisement; 9902492681

ಕಲಬುರಗಿಗೆ ಇತ್ತೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಿದ ಸಂದರ್ಭದಲ್ಲಿ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಮತ್ತು ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರು ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕ್ರಮಕೈಗೊಳ್ಳಲು ಶರಣಬಸವ ವಿವಿ ಮತ್ತು ಶರಣಬಸವ ವಿದ್ಯಾವರ್ಧಕ ಸಂಘದ ವತಿಯಿಂದ ಸುಮಾರು ೧ಕೋಟಿ ರೂಪಾಯಿ ಮುಖ್ಯಮಂತ್ರಿಯ ಪರಿಹಾರ ನಿಧಿಗೆ ನೀಡುತ್ತೇನೆ ಎಂದು ಘೋಷಣೆ ಮಾಡಿದ್ದರು. ಅದರಂತೆ ಅಪ್ಪಾಜಿ ಅವರು ನುಡಿದಂತೆ ನಡೆದುಕೊಂಡಿದ್ದಾರೆ ಎಂದು ಶರಣಬಸವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here