ಸೆಪ್ಟೆಂಬರ್ 15 ರಂದು ದಾಖಲೆ ಪ್ರಮಾಣದಲ್ಲಿ ಮಾನವ ಸರಪಳಿ ರಚನೆ

0
74

ಜಿಲ್ಲೆಯ ಜನತೆ ಭಾಗವಹಿಸುವಂತೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಮನವಿ

ಕಲಬುರಗಿ; ಇದೇ ಸೆಪ್ಟೆಂಬರ್ 15 ರಂದು ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಬೀದರದಿಂದ ಚಾಮರಾಜನಗರ ವರೆಗೂ ರಾಜ್ಯದಾದ್ಯಂತ ಏಕಕಾಲಕ್ಕೆ ದಾಖಲೆ ಪ್ರಮಾಣದಲ್ಲಿ ಮಾನವ ಸರಪಳಿ ರಚಿಸಲಾಗುತ್ತಿದ್ದು, ಜಿಲ್ಲೆಯ ಜನತೆ ಉತ್ಸಾಹದಿಂದ ಇದರಲ್ಲಿ ಭಾಗಿಯಾಗಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಮನವಿ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಏಕಕಾಲಕ್ಕೆ 113 ಕಿ.ಮೀ. ಉದ್ದ ಮಾನವ ಸರಪಳಿ ರಚಿಸಲಾಗುತ್ತಿದೆ. ಪ್ರತಿಯೊಂದು ಕಿ.ಮೀ. ಅಂತರದಲ್ಲಿ ಸುಮಾರು 800 ಜನ ಸೇರಲಿದ್ದಾರೆ. ಅಂದು ಬೆಳಿಗ್ಗೆ 8.45 ಗಂಟೆಗೆೆ ಎಲ್ಲವು ಸಜ್ಜುಗೊಂಡು ಸರಿಯಾಗಿ ಬೆಳಿಗ್ಗೆ 9 ಗಂಟೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವ ಮಹತ್ವ ಸಾರಲಾಗುತ್ತದೆ. ತದನಂತರ 9.15 ಗಂಟೆಗೆ ಸಂವಿಧಾನ ಪೀಠಿಕೆ ವಾಚನ, 9.30 ಗಂಟೆಗೆ ಕೊನೆಯದಾಗಿ ಜಯ ಹಿಂದ್-ಜಯ್ ಕರ್ನಾಟಕ ಘೋಷಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಗಲಿದೆ.

Contact Your\'s Advertisement; 9902492681

ಹೀಗಾಗಿ ಜಿಲ್ಲೆಯ ಎಲ್ಲಾ ಅಧಿಕಾರಿ-ನೌಕರ ಬಂಧಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಮಹಿಳಾ ಸ್ವ-ಸಂಘದ ಸದಸ್ಯರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ‌ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಬೇಕೆಂದು ಕೋರಿದ್ದಾರೆ.

ಜಿಲ್ಲೆಯ ಕಮಲಾಪೂರ ತಾಲೂಕಿನ ಕಿಣ್ಣಿಸಡಕ್‌ನಿಂದ ಕಮಲಾಪೂರ-ಕಲಬುರಗಿ-ಶಹಾಬಾದ-
ರಾವೂರ-ವಾಡಿ(ಬಲರಾಮ್ ಚೌಕ್)-ನಾಲವಾರ ಮಾರ್ಗವಾಗಿ ಅಲ್ಲಿಪೂರ ತಾಂಡಾ ವರೆಗೆ ಮಾನವ ಸರಪಳಿ ನಿರ್ಮಿಸಲಾಗುತ್ತಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here