ಸಂಪುಟ ಸಭೆ | ಕಕ ಭಾಗದ ಸಮಗ್ರ ಅಭಿವೃದ್ದಿಯ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಜಿಲ್ಲೆಯಲ್ಲಿ ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಯ ಕುರಿತಂತೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿ ಯ ಐವಾನ್ ಶಾಹಿ ಅತಿಥಿಗೃಹದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಸಾಮಾನ್ಯವಾಗಿ ಸಚಿವ ಸಂಪುಟ ಸಭೆಯಲ್ಲಿ ಇಡೀ ರಾಜ್ಯದ ಅಭಿವೃದ್ದಿ ಕುರಿತಂತೆ ಚರ್ಚೆ ನಡೆಯುತ್ತದೆ. ಆದರೆ, ಬಹಳ ವರ್ಷಗಳ ನಂತರ ಕಲಬುರಗಿ ಯಲ್ಲಿ ನಡೆಯುತ್ತಿರುವ ಸಂಪುಟ ಸಭೆಯಲ್ಲಿ ನಮ್ಮ ಭಾಗದ ಜನರ ಆಶಯದಂತೆ ಚರ್ಚೆ ನಡೆಸಿ ಅಭಿವೃದ್ದಿಯ ನೀಲಿನಕ್ಷೆ ತಯಾರಿಸಲಾಗುವುದು ಎಂದರು.

ನಿಪುಣ ಕರ್ನಾಟಕ ಯೋಜನೆ: ಕಕ ಭಾಗದದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ” ಈ ನಿಟ್ಟಿನಲ್ಲಿ ಈಗಾಗಲೇ ಕೌಶಲ್ಯಾಭಿವೃದ್ದಿ ಹಾಗೂ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಜಂಟಿ ವತಿಯಿಂದ ” ನಿಪುಣ – ಕರ್ನಾಟಕ ” ಎನ್ನುವ ಯೋಜನೆ ರೂಪಿಸಲಾಗಿದೆ. ಈ ಯೋಜನೆಯಡಿಯಲ್ಲಿ ಯುವಕರಿಗೆ ಉದ್ಯೋಗ ಕಲ್ಪಿಸುವ ಮಹತ್ವಾಕಾಂಕ್ಷೆ ಇದ್ದು ಮುಂದಿನ ಎರಡು ತಿಂಗಳಲ್ಲಿ ಈ ಯೋಜನೆ ಜಾರಿಗೆ ಬರಲಿದೆ ” ಎಂದು ಇದೇ ಸಂದರ್ಭದಲ್ಲಿ ಸಚಿವರು ಹೇಳಿದರು.

ಶಾಸಕರ, ಅಧಿಕಾರಗಳ ಸಭೆ: ಸಚಿವ ಸಂಪುಟ ಸಭೆ ನಡೆಸುವ ಹಿನ್ನೆಲೆಯಲ್ಲಿ ಕಕ ಭಾಗಕ್ಕೆ ಅಗತ್ಯವಿರುವ ಯೋಜನೆಗಳ ಕುರಿತಂತೆ ಸಭೆಯಲ್ಲಿ ಚರ್ಚಿಸಲು ಈಗಾಗಲೇ ಸಂಬಂಧಿಸಿದ ಕ್ಷೇತ್ರಗಳ ಶಾಸಕರ ಹಾಗೂ ಅಧಿಕಾರಿಗಳ ಜೊತೆ ಎರಡು ಸುತ್ತಿನ ವಿಸಿ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಚರ್ಚಿಸಲಾಗಿದೆ.

ಸಿಎಸ್ ಜತೆ ಸಭೆ: ಸಂಪುಟ ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ‌ ಮುಖ್ಯ ಕಾರ್ಯದರ್ಶಿಗಳೊಂದಿಗೆ ನಾಳೆ ಸಭೆ ನಡೆಸಲಾಗುವುದು. ಇದೇ ರೀತಿ ಸಚಿವರ ಸಭೆ ನಡೆಸಲು ಸಿಎಂ ಅವರಿಗೆ ಮನವಿ ಮಾಡಲಾಗಿದೆ ಎಂದರು.

ಪ್ರತ್ಯೇಕ ಸಚಿವಾಲಯ: ಆರ್ಟಿಕಲ್ 371 (J) ಕಟ್ಟುನಿಟ್ಟಾಗಿ ಜಾರಿಗೆ ತರಲು ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡುವ ಕುರಿತಂತೆ ಬೇಡಿಕೆ ಎದ್ದಿದೆ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆ ಬಗ್ಗೆಯೂ ಕೂಡಾ ಚರ್ಚಿಸಲಾಗುವುದು.‌ ಆರ್ಟಿಕಲ್ 371 (J) ಅಡಿಯಲ್ಲಿ ಈ ಭಾಗದಲ್ಲಿ 22,000 ಇಂಜಿನಿಯರಿಂಗ್ ಹಾಗೂ 2000 ವೈದ್ಯಕೀಯ‌ ಸೀಟು ಹಂಚಿಕೆಯಾಗಿವೆ. ಇದೂ ಕೂಡಾ ಕಟ್ಟುನಿಟ್ಟಿನ ಜಾರಿಯಲ್ಲವೇ? ಈ ಬಗ್ಗೆ ಟೀಕೆಗಳು ಸಹಜ. ಆದರೆ, ನಮ್ಮ‌ ಪ್ರಾಮಾಣಿಕ ಪ್ರಯತ್ನ ನಡೆಯಲಿದೆ ಎಂದರು.

ಹನಿ ಟ್ರ್ಯಾಪ್ ಕಪ್ಪುಚುಕ್ಕೆ: ಜಿಲ್ಲೆಯಲ್ಲಿ ಹನಿಟ್ರ್ಯಾಪ್ ನಡೆದಿರುವ ಕುರಿತಂತೆ ಈಗಾಗಲೇ ದೂರು ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಲಾಗಿದೆ. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆಯಲ್ಲಿ ಫಾರೆನ್ಸಿಕ್ ವರದಿ ಕೇಳಲಾಗಿದ್ದು ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು. ಇದೊಂದು ಗಂಭೀರ ಪ್ರಕರಣವಾಗಿದ್ದು ಹೆಚ್ಚಿನ‌ ವಿವರ ಈಗಲೇ ಹೇಳಲು ಆಗದು. ” ಹನಿಟ್ರ್ಯಾಪ್ ಕಲಬುರಗಿ ಜಿಲ್ಲೆಗೆ ಒಂದು ಕಪ್ಪುಚುಕ್ಕೆಯಾಗಿದೆ. ಆರೋಪಿಗಳು ಯಾವುದೇ ಸಂಘಟನೆಯವರು ಇರಲಿ ಅಥವಾ ಎಂತದ್ದೆ ವ್ಯಕ್ತಿಗಳಾಗಿರಲಿ, ಪೊಲೀಸ್ ತನಿಖೆ ನಂತರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.‌ ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಲು ಸೆನ್ ಇಲಾಖೆಗೆ ಸೂಚಿಸಲಾಗಿದೆ. ಹನಿಟ್ರ್ಯಾಪ್ ಗೆ ಸಂಬಂಧಿಸಿದಂತೆ ಏನಾದರೂ ದೂರುಗಳಿದ್ದರೆ ನೊಂದವರು ನೇರವಾಗಿ ನನಗೆ ಇಲ್ಲವೇ ನಗರ ಪೊಲೀಸ್ ಕಮೀಷನರ್ ಅವರಿಗೆ ದೂರು ಸಲ್ಲಿಸಲಿ. ಅಂತವರ ವಿವರ ಹಾಗೂ ಗುರುತು ಗೌಪ್ಯವಾಗಿಡಲಾಗುವುದು ” ಎಂದರು.

ಜೂಜಾಟಕ್ಕೆ ಕಡಿವಾಣ: ಜಿಲ್ಲೆಯಲ್ಲಿ ನಡೆಯುತ್ತಿದ್ದ ಜೂಜು ಸೇರಿದಂತೆ ಹಲವು ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ‌ ಬಂದ ಮೇಲೆ ಶೇ 50 ರಷ್ಟು‌ ಕಡಿವಾಣ ಬಿದ್ದಿದೆ. ಸಮಾಜದಲ್ಲಿ ಎಲ್ಲವೂ ಒಮ್ಮೆಲೆ ಸುಧಾರಣೆ ಕಷ್ಟಸಾಧ್ಯ, ಆದರೂ ಇಂತಹ ಚಟುವಟಿಕೆಗಳನ್ನು ಬಂದ್ ಮಾಡಲು ನಮ್ಮ ಪ್ರಾಮಾಣಿಕ ಪ್ರಯತ್ನ ನಡೆದಿರುತ್ತದೆ ಎಂದು ಸಚಿವರು ಹೇಳಿದರು.

ಸಿಎಂ ಬದಲಾವಣೆ ಚರ್ಚೆ ನಡೆದಿಲ್ಲ: ಸಿಎಂ ಬದಲಾವಣೆ ಚರ್ಚೆ ಸಂಪುಟದಲ್ಲಿ ನಡೆದಿಲ್ಲ ಅದು ಮಾಧ್ಯಮಗಳಲ್ಲಿ ಮಾತ್ರ ನಡೆದಿದೆ.‌ ಸಚಿವರಾದ ಎಂಬಿ ಪಾಟೀಲ್ ಹಾಗೂ ಶಿವಾನಂದ್ ಪಾಟೀಲರು ಈ ವಿಚಾರದಲ್ಲಿ ಮಾತನಾಡಿರುವುದು ಗೊತ್ತಿದೆ. ಸಿಎಂ ಖುರ್ಚಿ ಖಾಲಿ ಇಲ್ಲ. ಯಾರೇ ಸಿಎಂ ಆದರೂ ಬೆಂಬಲವಿದೆ ಎಂದಷ್ಟೆ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

ರಾಜ್ಯಪಾಲರ ಅಧಿಕಾರ ದುರ್ಬಳಕೆ: ಸಿದ್ದಾರ್ಥ ಟ್ರಸ್ಟ್ ಗೆ ಭೂಮಿ ಮಂಜೂರು ಪ್ರಕ್ರಿಯೆ ಎಲ್ಲವೂ ಕಾನೂನುಬದ್ಧವಾಗಿ‌ ನಡೆದಿದೆ. ಈ ಬಗ್ಗೆ ಮೊದಮೊದಲು ಜೋರಾಗಿ ಆರೋಪ ಮಾಡಿದ್ದ ವಿರೋದ ಪಕ್ಷದ ನಾಯಕರು ಹಾಗೂ‌ ಬಿಜೆಪಿ ಅಧ್ಯಕ್ಷರು ಈಗ ಮೌನವಾಗಿದ್ದರೆ. ಶಿಕ್ಷಣ ಸಂಸ್ಥೆ ನಡೆಸಲು ಅನಮತಿ ಪಡೆದುಕೊಂಡು ಈಗ ಬಿರಿಯಾನಿ ಹೊಟೇಲ್ ನಡೆಸುತ್ತಿರುವ ಬಗ್ಗೆ ಕಾಂಗ್ರೆಸ್ ನಾಯಕರು ರಾಜ್ಯ ಪಾಲರಿಗೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ದ ಕೂಡಲೇ ಕ್ರಮ ಜರುಗಿಸುವ ರಾಜ್ಯಪಾಲರು ಈಗ ಏಕೆ ಕ್ರಮ ಜರುಗಿಸಿಲ್ಲ. ಹಾಗೇ ಕುಮಾರಸ್ವಾಮಿ ವಿರುದ್ದದ ದೂರಿನ ಬಗ್ಗೆಯೂ ಕ್ರಮವಿಲ್ಲ ಯಾಕೆ ? ಎಲ್ಲಿ ಬಿಜೆಪಿ ಪಕ್ಷ ಬಲಹೀನವಾಗಿದೆಯೋ ಅಲ್ಲಲ್ಲಿ ರಾಜ್ಯಪಾಲರ ಅಧಿಕಾರವನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸದರು.

ಜಂಟಿ‌ ಸಮೀಕ್ಷೆ: ಜಿಲ್ಲೆಯಲ್ಲಿ ಇತ್ತೀಚಿಗೆ ‌ಬಿದ್ದ ಮಳೆಯಿಂದಾಗಿ ಹೆಸರು,‌ತೊಗರಿ, ಉದ್ದು ಬೆಳೆ ಹಾಳಾಗಿದ್ದು, ಕಂದಾಯ ಹಾಗೂ ಕೃಷಿ‌ ಇಲಾಖೆಯಿಂದ‌ ಜಂಟಿ ಸರ್ವೆಗೆ ಸೂಚಿಸಲಾಗಿದೆ.‌ ಈಗಾಗಲೇ 15,000 ರೈತರು ದೂರು ಸಲ್ಲಿಸಿದ್ದು ಸಮೀಕ್ಷೆ ವರದಿ ಬಂದ ನಂತರ ಬೆಳೆ ಹಾಳಾದ ಸಂಪೂರ್ಣ ವಿವರ ದೊರಕಲಿದೆ ಎಂದರು.

ರಸ್ತೆ ಗುಂಡಿ ಮುಚ್ಚಲು ಅನುದಾನ ಬಿಡುಗಡೆ: ಮಳೆಯಿಂದ ಜಿಲ್ಲೆಯ ರಸ್ತೆಗಳು ಹಾಳಾಗಿದ್ದು ಗುಂಡಿ ಮುಚ್ಚಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ಎರಡು ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಸಧ್ಯ ಮಳೆ‌ ಬೀಳುತ್ತಿರುವುದರಿಂದ ಕೆಲಸ‌ ನಡೆಯುತ್ತಿಲ್ಲ.‌ಸ್ವಲ್ಪ ಮಳೆ ಬಿಡುವಾದ ನಂತರ ಗುಂಡಿ ಮುಚ್ಚುವ ಕೆಲಸ ನಡೆಯಲಿದೆ. ಭೀಮಾ ಬ್ರಿಜ್ ಹಾಗೂ ದಂಡೋತಿ ಬ್ರಿಜ್ ಮೇಲಿನ ರಸ್ತೆ ರಿಪೇರಿಗಾಗಿ ಕೆಆರ್ ಐಡಿ ಎಲ್ ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

emedialine

Recent Posts

ಕಲ್ಯಾಣ ಕರ್ನಾಟಕ ಉತ್ಸವ 18 ರಂದು ಆಚರಿಸಲು ಆಗ್ರಹ

ಕಲಬುರಗಿ:"ಕಲ್ಯಾಣ ಕರ್ನಾಟಕ ಉತ್ಸವ" ವನ್ನು ಸೆಪ್ಟೆಂಬರ್ "18" ರಂದು ಆಚರಿಸಲು ಕರ್ನಾಟಕ ಯುವಜನ ಒಕ್ಕೂಟ(ರಿ) ಮತ್ತು "ಕಲ್ಯಾಣ ಕರ್ನಾಟಕ ಪ್ರತ್ಯೇಕ…

9 hours ago

ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭಕ್ಕೆ ಮನವಿ

ಕಲಬುರಗಿ: ಸಚಿವ ಸಂಪುಟ ಸಭೆಯ ಮೂಲಕ ಚಿಂಚೋಳಿ ಸಕ್ಕರೆ ಕಾರ್ಖಾನೆ ಪುನಃ ಪ್ರಾರಂಭ ಮಾಡುವ ತೀರ್ಮಾನ ಕೈಗೊಳಬೇಕೆಂದು ಕಾಳಗಿ ತಾಲೂಕ…

9 hours ago

ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಣಯ ಕೈಗೊಳ್ಳುವ ನಿರೀಕ್ಷೆ ಇದೆ: ಭೀಮನಗೌಡ ಪರಗೊಂಡ

ಕಲಬುರಗಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಹತ್ತು ವರ್ಷಗಳ ನಂತರ ಬಹುನಿರೀಕ್ಷಿಯ ಸಚಿವ ಸಂಪುಟ ಕಲಬುರಗಿಯಲ್ಲಿ ನಡೆಯುತ್ತಿರುವುದು ಈ ಭಾಗದ…

9 hours ago

10 ವರ್ಷಗಳ ನಂತರ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ: ಡಾ. ಅಜಯಸಿಂಗ್

ಕಲಬುರಗಿ, ಕಳೆದ ಹತ್ತು ವರ್ಷಗಳ ನಂತರ ಕಲಬುರಗಿಯಲ್ಲಿ ಪ್ರಥಮ ಬಾರಿಗೆ ಇಂದು ಸೆಪ್ಟಂಬರ್ 17ರಂದು ರಾಜ್ಯ ಸಚಿವ ಸಂಪುಟ ಸಭೆ…

11 hours ago

ಕೆಐಡಿಸಿಸಿ ಕಪ್ ಕ್ರಿಕೆಟ್ ಟೋರ್ನಮೆಂಟ್ ಸೀಸನ್ 3 ಲಾಂಛನ ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಸುಪ್ರಸಿದ್ದ ಟಿವಿ ಛಾನೆಲ್ ಎಸ್ ಎಸ್ ವಿ ಟಿವಿ ಮತ್ತು ಜೈ ಭೀಮ್ ಟಿವಿ…

12 hours ago

ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾರ್ವಜನಿಕರು ಸಹಕರಿಸಿ: ಶಾಸಕ ಡಾ.ಅಜಯ್ ಸಿಂಗ್

ಕಲಬುರಗಿ: ಪ್ಲಾಸ್ಟಿಕ್ ನಿಷೇಧಕ್ಕೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕರಿಸಿದಾಗ ಮಾತ್ರ ನಗರವನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಾಧ್ಯವಿದೆ ಎಂದು…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420