ಕ.ಕ ಭಾಗದ ಅಭಿವೃದ್ಧಿಗೆ ನಾವು ಕಟಿಬದ್ಧ; ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌

ಕಲಬುರಗಿ; ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ದಿಗೆ ಕಾಂಗ್ರೆಸ್‌ ಸರ್ಕಾರ ಬದ್ಧವಾಗಿದೆ. ಸೆ. 17 ರ ಸಂಪುಟ ಸಭೆ ನಮ್ಮ ಬದ್ಧತೆಯ ದ್ಯೋತಕವಾಗಿದೆ ಎಂದು ಕೆಕೆಆರ್‌ಡಿಬಿ ಅಧ್ಯಕ್ಷರು, ಜೇವರ್ಗಿ ಶಾಸಕರಾದ ಡಾ. ಅಜಯ್‌ ಧರ್ಮಸಿಂಗ್‌ ಹೇಳಿದ್ದಾರೆ.

ಸೆ. 17 ರ ಸಂಪುಟ ಸಭೆಯ ಪೂರ್ವಸಿದ್ಧತೆಯ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡು, ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ಕಲ್ಯಾಣ ನಾಡಲ್ಲಿರುವ 7 ಜಿಲ್ಲೆಗಳು, 41 ತಾಲೂಕುಗಳ ಸರ್ವತೋಮುಖ ಪ್ರಗತಿಗೆ ಸಿದ್ದರಾಮಯ್ಯ ಸರ್ಕಾರ ಬದ್ಧ, ಅದಕ್ಕಾಗಿಯೇ ಈ ಬಾರಿ ಕೆಕೆಆರ್‌ಡಿಬಿ 5 ಸಾವಿರ ಕೋಟಿ ರು ಕ್ರಿಯಾ ಯೋಜನೆ ರೂಪಿಸಿ ಪ್ರಗತಿಗೆ ಮುಂದಾಗಿದ್ದೇವೆ ಎಂದರು.

ಕಲಂ 371 ಜೆ ಅನುಷ್ಠಾನ ಗೊಂಡು ದಶಕ ಕಳೆದ ಸಂಭ್ರಮದಲ್ಲಿ ನಾವಿದ್ದೇವೆ. ದಿ. ಧರಂಸಿಂಗ್‌, ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ, ಇನ್ನೂ ಅನೇಕ ಮಹನೀಯರ ಶ್ರಮದಿಂದ ಈ ಸಂವಿಧಾನದ ವಿಶೇಷ ಕಲಂ ನಮಗೆ ದೊರಕಿದೆ. ಇದರಿಂದಾಗಿ ವೃತ್ತಿ ಶಿಕ್ಷಣ, ಉದ್ಯೋಗ, ಅಭಿವೃದ್ಧಿಗೆ ಅವಕಾಸವಾಗಿದೆ. ಇಂತಹ ಅವಕಾಶ ಇನ್ನೂ ವಿಸ್ತಾರಗೊಳ್ಳುತ್ತ ಸಾಗಬೇಕಿದೆ. ಅದನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಸೆ. 17 ವಿಮೋಚನೆ ದಿನ, ಕಲಂ 371 ಜೆ ಅನುಚ್ಚೇದ ಅನುಷ್ಠಾನಗೊಂಡ ದಿನ. ಇವೆರಡರ ಸಂಭ್ರಮ, ಸಂತಸ ಮನೆ ಮಾಡಿದೆ. ಕೆಕೆಆರ್‌ಡಿಬಿ ಈ ಸಂದರ್ಭವನ್ನು ಸಂಭ್ರಮದಿಂದ ಆಚರಿಸಲಿದೆ. ಕಲ್ಯಾಣದ 7 ಜಿಲ್ಲೆಗಳಲ್ಲಿ ಸಂಭ್ರಮ ಮನೆ ಮಾಡುವಂತೆ ಅಗತ್ಯ ಕ್ರಮಗಳನ್ನು, ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಸೆ. 17 ರಂದು ಕಲಬುರಗಿಯಲ್ಲಿ ದಶಕದ ನಂತರ ಸಂಪುಟ ಸಭೆ ನಡೆಯುತ್ತಿದೆ. 1982 ರ ನಂತರ 2014 ರ ನ. 28 ರಂದು ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲೇ ಕಲಬುರಗಿಯಲ್ಲಿ ಸಂಪುಟ ಸಭೆ ನಡೆದಿತ್ತು. ಇದಾದ ನಂತರ ಮತ್ತೆ ಸ. 17 ರಂದು ಐತಿಹಾಸಿಕ ಸಂಪುಟ ಸಭೆ ನಡೆಯುತ್ತಿದೆ. ಇದರಿದಾಗಿ ಕಲಬುರಗಿ ಸೇರಿದಂತೆ ಕಲ್ಯಾಣ ನಾಡಿನ 7 ಜಿಲ್ಲೆಗಳ ಸರ್ವತೋಮುಖ ಪ್ರಗತಿಗೆ ವರವಾಗಲಿದೆ ಎಂದು ಡಾ. ಅಜಯ್‌ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದರು.

ಸಂವಿಧಾನದ ಕಲಂ 371 ಜೆ ಜಾರಿಗೆ ಬಂದು ಹತ್ತು ವರ್ಷಗಳು ಆದ ಈ ಸಂದರ್ಭದಲ್ಲಿ ಕಲಬುರಗಿ ಯಲ್ಲಿ ಸೆಪ್ಟೆಂಬರ್ 17 ರಂದು ನಡೆಯಲಿರುವ ದಶಮಾನೋತ್ಸವ ಏರ್ಪಡಿಸಲಾಗಿದೆ ಹಾಗೂ ಹತ್ತು ವರ್ಷಗಳ ನಂತರ ನಡೆಯುತ್ತಿರುವ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು ಕಲ್ಯಾಣ ನಾಡಿನ ಬಗ್ಗೆ ಕಾಂಗ್ರೆಸ್‌ಗೆ ಇರುವ ಕಳಕಳಿಗೆ ಇದು ಕನ್ನಡಿ ಎಂದು ಡಾ. ಅಜಯ್‌ ಸಿಂಗ್‌ ಹೇಳಿದರು.

emedialine

Recent Posts

ಬಂದಾ ನವಾಜ್ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಸಚಿವ ಜಮೀರ್ ಅಹ್ಮದ್ ಖಾನ್

ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಮತ್ತು ವಸತಿ ಸಚಿವರಾದ ಬಿ.ಝಡ್ ಜಮೀರ್ ಅಹ್ಮದ್ ಖಾನ್ ಅವರು ಗುರುವಾರ ಇಲ್ಲಿನ…

56 mins ago

ಕಣ್ಣುಗಳನ್ನು ದಾನ ಮಾಡಿ ಅಂಧರ ಬಾಳಿಗೆ ಬೆಳಕಾಗಲು ಜಿ. ಪಂ. ಮಾಜಿ ಸದಸ್ಯೆ ಅನಿತಾ ವಳಕೇರಿ ಕರೆ

ಕಲಬುರಗಿ: ನೇತ್ರದಾನ ಮಹಾದಾನ, ಪ್ರತಿಯೊಬ್ಬರೂ ತಮ್ಮ ನೇತ್ರದಾನ ಮಾಡುವುದರೊಂದಿಗೆ ಅಂಧರ ಬಾಳಿಗೆ ಬೆಳಕಾಗಲು ಮುಂದೆ ಬರಬೇಕು ಎಂದು ಜಿಲ್ಲಾ ಪಂಚಾಯತ್…

1 hour ago

ಲಿಂಗರಾಜ ಶಾಸ್ತ್ರಿ ಪುಣ್ಯಸ್ಮರಣೋತ್ಸವ: ಬಹುಮುಖ ವ್ಯಕ್ತಿತ್ವದ ಶಾಸ್ತ್ರಿ

ಕಲಬುರಗಿ: ದಿ.ಲಿಂಗರಾಜ ಶಾಸ್ತ್ರಿ ಅವರದು ಬಹುಮುಖ ವ್ಯಕ್ತಿತ್ವ ಎಂದು ಜೆಡಿಎಸ್ ಮುಖಂಡ ನಾಸೀರ್ ಹುಸೇನ್‌ ಅಭಿಮತ ವ್ಯಕ್ತಪಡಿಸಿದರು. ನಗರದ ಕನ್ನಡ…

1 hour ago

ಕಲಬುರಗಿ: ನಕಲಿ ವೈದ್ಯರ ಹಾವಳಿ ತಡೆಯಲು ಆರೋಗ್ಯಧಿಕಾರಿಗೆ‌ ಮನವಿ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಕಲಿ ವೈದ್ಯರ ವಹಾವಳಿ ತಡೆಯಬೇಕೆಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಯುವ ಕರ್ನಾಟಕ ವೇದಿಕೆ ಚಿಂಚೋಳಿ ಮತ್ತು…

1 hour ago

ವೀ.ಲಿಂ.ಸಂಘಟನಾ ವೇದಿಕೆ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಸವರಾಜ ಶೆಳ್ಳಗಿ

ಸುರಪುರ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಸುರಪುರ ತಾಲೂಕ ವಿದ್ಯಾರ್ಥಿ ಘಟಕದ ಅಧ್ಯಕ್ಷರನ್ನಾಗಿ ಬಸವರಾಜ ಎಸ್.ಶೆಳ್ಳಗಿ ಅವರನ್ನು ನೇಮಕಗೊಳಿಸಲಾಗಿದೆ. ಈ…

2 hours ago

ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯ ವಿಶ್ವ ಓಜೋನ್ ದಿನ

ಸುರಪುರು: ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಾದಗಿರಿಯವರ ಸಂಯೋಗದಲ್ಲಿ “ವಿಶ್ವ ಓಜೋನ್ ದಿನ”…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420