ಶಹಾಬಾದ: ರೈಲ್ವೆ ಖಾಸಗಿಕರಣ ವಿರುದ್ಧ, ಅಗತ್ಯಕ್ಕೆ ಅನುಗುಣವಾಗಿ ರೈಲು ಸಂಖ್ಯೆ ಹೆಚ್ಚಿಸಲು ಹಾಗೂ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ನಗರದ ರೇಲ್ವೆ ನಿಲ್ದಾಣದ ಮುಂಭಾಗದಲ್ಲಿ ಎಐಡಿವಾಯ್‍ಓ ಸಂಘಟನೆ ವತಿಯಿಂದ ಸಾರ್ವಜನಿಕರಿಂದ ಸಹಿ ಸಂಗ್ರಹ ಅಭಿಯಾನ ಸೋಮವಾರ ನಡೆಯಿತು.
ಕಲಬುರಗಿ ಮತ್ತು ಬೆಂಗಳೂರು ಕಡೆ ಹೋಗುವ ರೈಲ್ವೆಗಳ ಸಂಖ್ಯೆ ಹೆಚ್ಚಿಸಲು, ಜರ್ನಲ್ ಮತ್ತು ಸ್ಲೀಪರ್ ಬೋಗಿಗಳು ಹೆಚ್ಚಿಸುವಂತೆ ಹಾಗೂ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆಗ್ರಹಿಸಿದರು.
ಖಾಸಗೀಕರಣ ಮತ್ತು ವ್ಯಾಪಾರೀಕರಣದ ಕ್ರಮಗಳು ರೈಲ್ವೆ ಪ್ರಯಾಣಿಕರನ್ನು ಬಾಣಲೆಯಿಂದ ಬೆಂಕಿಗೆ ತಳ್ಳಿವೆ. ದೂರ ಯಾನದ ರೈಲುಗಳಲ್ಲಿನ ಪ್ರಯಾಣವು ದುಸ್ಸಾಧ್ಯವಾಗಿದೆ ಮತ್ತು ಸಾಮಾನ್ಯ ಜನರು ಅಸಹನೀಯ ಪರಿಸ್ಥಿತಿಗಳಲ್ಲಿ ಪ್ರಯಾಣಿಸುವಂತಾಗಿದೆ. ಇತ್ತೀಚಿನ ದಿನಗಳಲ್ಲಿ ರೈಲ್ವೆ ಪ್ರಯಾಣದಲ್ಲಿ ಸುರಕ್ಷತೆ ಎಂಬುದು ತೀವ್ರ ಆತಂಕಕಾರಿಯಾಗಿದೆ. ಪ್ರಯಾಣಿಕರ ಸುರಕ್ಷತೆಗೆ ಯಾವುದೇ ಖಾತರಿ ಇಲ್ಲದಂತಾಗಿದೆ.
ರೈಲ್ವೆಯಲ್ಲಿ 3.5 ಲಕ್ಷ ಸಿಬ್ಬಂದಿ ಕೊರತೆ ಇದೆ. ಗ್ರೂಪ್ ಸಿ ಮತ್ತು ಲೆವೆಲ್ | ವರ್ಗಗಳಲ್ಲಿ ಸುಮಾರು 2.74 ಲಕ್ಷ ಹುದ್ದೆಗಳು ಖಾಲಿ ಇವೆ. ಜೂನ್ 2023ರ ಅಂಕಿಅಂಶಗಳ ಪ್ರಕಾರ ಸುರಕ್ಷತಾ ವಿಭಾಗಗಳಲ್ಲೇ 1.7 ಲಕ್ಷ ಹುದ್ದೆಗಳು ಖಾಲಿ ಇವೆ. ಮೆಕ್ಯಾನಿಕ್ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ 1.57 ಲಕ್ಷ ಹುದ್ದೆಗಳು ಖಾಲಿ ಇವೆ. ಇನ್ನೂ ಲೋಕೋ ಪೈಲಟ್‍ಗಳ ಕೊರತೆಯೂ ಇದೆ. 2019 ರಿಂದ 2023 ರವರೆಗೆ ಒಟ್ಟು 162 ರೈಲು ಅಪಘಾತಗಳು ಸಂಭವಿಸಿವೆ. ಇವುಗಳಲ್ಲಿ 118 ಹಳಿತಪ್ಪುವಿಕೆಗಳು ಮತ್ತು ಹದಿನಾರು ಒಂದಕ್ಕೊಂದು ಡಿಕ್ಕಿ ಅಪಘಾತಗಳು ಸೇರಿವೆ. ಖಾಲಿ ಹುದ್ದೆಗಳು ಭರ್ತಿಯಾಗದಿರುವುದರಿಂದಲೇ 2ನೇ ಜೂನ್ 2023ರ ಬಾಲಸೋರ್, ಒರಿಸ್ಸಾದಂತಹ ಅಪಘಾತಗಳು ಸಂಭವಿಸಿವೆ. ಇದು ಈ ಶತಮಾನದಲ್ಲೇ ನಡೆದ ಅತ್ಯಂತ ಭೀಕರ ದುರಂತವಾಗಿದೆ.
ಪ್ರತಿ ರೈಲುಗಳೂ ಜನದಟ್ಟಣೆಯಿಂದ ಓಡುತ್ತಿವೆ, ಇದರ ನಿವಾರಣೆಗೆ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿಲ್ಲ. ಬೋಗಿಗಳ ಸಂಖ್ಯೆಯನ್ನು ಹೆಚ್ಚಿಸುವ ಬದಲು ಅವುಗಳ ಸಂಖ್ಯೆಯನ್ನು ಮೊಟಕುಗೊಳಿಸುತ್ತಿದ್ದಾರೆ ಬದಲಿಗೆ ಎಸಿ ಬೋಗಿಗಳನ್ನು ಹೆಚ್ಚಿಸುತ್ತಿದ್ದಾರೆ. ಸಾರ್ವಜನಿಕ ಉದ್ದಿಮೆಯಲ್ಲಿ ಇಂತಹ ಲಾಭದಾಹಕ್ಕಾಗಿ ರೈಲ್ವೆ ಇಲಾಖೆಯು ಜನರ ಈ ಅಸಹಾಯಕ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಹೆಚ್ಚಿನ ಆದಾಯವನ್ನು ಗಳಿಸುತ್ತಿದೆ.
ಇಂತಹ ಹೀನಾಯ ಸನ್ನಿವೇಶದಲ್ಲಿ ನಾಗರಿಕ ಪ್ರಯಾಣಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿರುವ ಸರ್ಕಾರವು ಪ್ರಧಾನಿ ಮೋದಿಯವರಿಂದ ವಂದೇ ಭಾರತ್ ರೈಲುಗಳನ್ನು ಉದ್ಘಾಟಿಸುತ್ತಲೇ ಇದೆ. ಈ ರೈಲುಗಳ ದರವು ಸಾಮಾನ್ಯ ಸೂಪರ್ ಫಾಸ್ಟ್‍ಗಿಂತ ಆರರಿಂದ ಎಂಟು ಪಟ್ಟು ಹೆಚ್ಚಾಗಿದೆ. ಮಧ್ಯಮ ವರ್ಗದವರೂ ಸಹ ಅದನ್ನು ಭರಿಸಲು ಸಾಧ್ಯವಿಲ್ಲ. ಹಾಗಾಗಿ ಸಾಮಾನ್ಯ ಜನರಿಗೆ ಅಗತ್ಯಕ್ಕೆ ಅನುಗುಣವಾಗಿ ರೈಲು ಸಂಖ್ಯೆ ಹೆಚ್ಚಿಸಿ ,ಜರ್ನಲ್ ಮತ್ತು ಸ್ಲಿಪರ್ರಬೋಗಿಗಳು ಹೆಚ್ಚಿಸುವಂತೆ ಎಐಡಿವೈಓ ಸಂಘಟನೆಯು ದೇಶದ ವಿವಿಧ ಕಡೆ ಜನಸಾಮಾನ್ಯರ ಹಾಗೂ ರೈಲ್ವೆ ಪ್ರಯಾಣಿಕರ ಸಹಿ ಸಂಗ್ರಹಿಸಿ ಸೆಪ್ಟೆಂಬರ್ 12ರಂದು ಹಮ್ಮಿಕೊಂಡ ಅಖಿಲ ಭಾರತ ಪ್ರತಿಭಟನಾ ದಿನದಂದು ಪ್ರತಿಭಟಿಸಿ ಮಾನ್ಯ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವವರಿಗೆ ಸಂಗ್ರಹಿಸಿದ ಸಹಿಗಳ ಪ್ರತಿಯನ್ನು ಸಲ್ಲಿಸಲಾಗುವುದು ಎಂದರು.
ಜಿಲ್ಲಾಧ್ಯಕ್ಷರಾದ ಜಗನ್ನಾಥ.ಎಸ್.ಹೆಚ್, ರಘು ಪವಾರ, ರಮೇಶ ದೇವಕರ್, ಮಲ್ಲಿಕಾರ್ಜುನ, ಅಜಯ್ ಗುರ್ಜಲ್ಕರ್ ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…