ಕಲಬುರಗಿ ಉಸ್ತುವಾರಿ ಸಚಿವರು ಎಲ್ಲಿದ್ದಾರೆ? ಮಾಜಿ ಶಾಸಕ ತೆಲ್ಕೂರ್ ಪ್ರಶ್ನೆ

0
72

ಕಲಬುರಗಿ: ಜಿಲ್ಲೆಯಲ್ಲಿ ಈಚೆಗೆ ಸುರಿದ ಭಾರಿ ಮಳೆಯಿಂದಾಗಿ ಜನ ಜಾನುವಾರುಗಳು ತತ್ತರಿಸುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಚಕಾರ ಎತ್ತದಿರುವುದು ಸಖೇದಾಶ್ಚರ್ಯ ಮೂಡಿಸಿದೆ ಎಂದು ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ ಆರೋಪಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳೆ ಹಾನಿ ಕುರಿತಂತೆ ಜಂಟಿ ಸಮೀಕ್ಷೆ ನಡೆಸಿ ರೈತರಿಗೆ, ಜನರಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

Contact Your\'s Advertisement; 9902492681

ಕಬ್ಬು ನುರಿಸಲು ಅನುಮತಿ ನೀಡಿ: ಜಿಲ್ಲೆಯ ನಾಲ್ಕು ತಾಲ್ಲೂಕುಗಳ 400 ಹಳ್ಳಿಗಳ 1 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಚಿಂಚೋಳಿ ತಾಲ್ಲೂಕಿನಲ್ಲಿ ಸ್ಥಾಪಿಸಲಾದ ಸಕ್ಕರೆ ಹಾಗೂ ಇಥೆನಾಲ್ ಕಾರ್ಖಾನೆಯಲ್ಲಿ ಕಬ್ಬು ನುರಿಸಲು ಅನುಮತಿ ನೀಡಬೇಕು ಎಂದು ತಿಳಿಸಿದರು.

ಹೈಕೋರ್ಟ್ ಪರವಾನಗಿ ಕೊಟ್ಟಿದ್ದರೂ ಕಬ್ಬು ನುರಿಸಲು ರಾಜ್ಯ ಸರ್ಕಾರ ಅನುಮತಿ ನೀಡದೆ ರಾಜಕಾರಣ ಮಾಡುತ್ತಿರುವುದು ಕಾಂಗ್ರೆಸ್ ಗೆ ಶೋಭೆ ತರುವಂಥದ್ದಲ್ಲ ಎಂದು ಟೀಕಿಸಿದರು.

ಸೆ.‌15ರೊಳಗೆ ಕಬ್ಬು ನುರಿಸಲು ಅನುಮತಿ ನೀಡದಿದ್ದಲ್ಲಿ ಸಚಿವ ಸಂಪುಟ ನಡೆಸುವ ದಿನದಂದು ಸಾವಿರಾರು ರೈತರು, ಕಾರ್ಯಕರ್ತರು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಶಾಸಕರಾದ ಬಸವರಾಜ ಮತ್ತಿಮೂಡ , ಅವಿನಾಶ್ ಜಾಧವ್ ಕಲಬುರ್ಗಿ ಬಿಜೆಪಿ ಜಿಲ್ಲಾಧ್ಯಕ್ಷರುಗಳಾದ ಶಿವರಾಜ್ ಪಾಟೀಲ್ ರದ್ದೇವಾಡಗಿ ಮತ್ತು ಚಂದು ಪಾಟೀಲ್ , ಸಂತೋಷ ಹಾದಿಮನಿ, ಬಾಬುರಾವ ಹಾಗರಗುಂಡಗಿ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here