ಗುವಿವಿಯ 45ನೇ ಸಂಸ್ಥಾಪನಾ ದಿನಾಚರಣೆ

0
49

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕಲ್ಯಾಣ ಕನಾಟಕ ಭಾಗದ ವಿದ್ಯಾರ್ಥಿಗಳ ಉತ್ತಮ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತಿದೆ. ಸರ್ಕಾರದ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ವಿಶ್ವವಿದ್ಯಾಲಯ ಪ್ರಗತಿಪಥದತ್ತ ಸಾಗುತ್ತಿದೆ. ಸಾಧನೆ ಸಾರ್ಥಕತೆ ಜೊತೆಗೆ ಹೊಸ ಶೈಕ್ಷಣಿಕ ಯೋಜನೆಯೊಂದಿಗೆ ಭವಿಷ್ಯದಲ್ಲಿ ಗುರಿ ಸಾಧಿಸುವ ಸಂಕಲ್ಪವಿರಲಿ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಸಲಹೆ ನೀಡಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಜ್ಞಾನಗಂಗಾ ಅವರಣದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ 45ನೇ ಸಂಸ್ಥಾಪನಾ ದಿನಾಚರಣೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ 1980ರಲ್ಲಿ ಸ್ವತಂತ್ರ ವಿಶ್ವವಿದ್ಯಾಲಯವಾಗಿ ಕಾರ್ಯಾರಂಭ ಮಾಡಿದ ಗುಲಬರ್ಗಾ ವಿಶ್ವವಿದ್ಯಾಲಯದ ಸಮಗ್ರ ಶೈಕ್ಷಣಿಕ ಬೆಳವಣಿಗೆಗೆ ಶ್ರಮಿಸಿರುವ ಕುಲಪತಿಗಳ ಸೇವೆ ನಿಜಕ್ಕೂ ಸ್ಮರಣೀಯ. ಅವರ ಕನಸಿನಂತೆ ಇಂದು ರಾಷ್ಟ್ರೀಯ ಮತ್ತು ಅಂತರ ರಾಷ್ಟ್ರೀಯ ಸಂಸ್ಥೆಗಳ ನೆರವು ಮತ್ತು ಸಹಕಾರದೊಂದಿಗೆ ಒಪ್ಪಂದ ಮಾಡಿಕೊಂಡು ಗುಣಾತ್ಮಕ ಶಿಕ್ಷಣ ಮತ್ತು ಉತ್ಕೃಷ್ಠ ಸಂಶೋಧನೆ ಕಾರ್ಯದಲ್ಲಿ ಹೆಗ್ಗುರುತು ಸಾಧಿಸಿರುವುದು ವಿಶ್ವವಿದ್ಯಾಲಯದ ಹೆಗ್ಗಳಿಕೆಯಾಗಿದೆ. ಇದಕ್ಕೆ ವಿಶ್ವವಿದ್ಯಾಲಯದ ಬೋದಕ ಮತ್ತು ಬೋದಕೇತರ ಸಿಬ್ಬಂದಿ ಸೇವೆಯನ್ನು ನೆನೆಯಬೇಕು ಎಂದ ಅವರು ಪ್ರಸ್ತುತ ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ ವಿಶ್ವವಿದ್ಯಾಲಯದ ಬೆಳವಣಿಗೆ ಜೊತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಿನೂತನ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಯೋಜಿಸಿ ಯಶಸ್ವಿಗೊಳಿಸಲಾಗತ್ತಿದೆ ಎಂದರು.

Contact Your\'s Advertisement; 9902492681

ಪ್ರಸ್ತುತ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳಿಗೆ ಕೆಕೆಆರ್‌ಡಿಬಿಯ ಅನುದಾನ ಸಿಕ್ಕಿದೆ. ರಾಜ್ಯದ ಬೇರೆ ವಿಶ್ವವಿದ್ಯಾಲಯಗಳಂತೆ ಮತ್ತಷ್ಟು ಅಭಿವೃದ್ಧಿಗೆ ಐದುನೂರು ಅಥವಾ ಸಾವಿರ ಕೋಟಿಯಷ್ಟು ಅನುದಾನ ಸಿಕ್ಕರೆ ಬೇರೆ ವಿಶ್ವವಿದ್ಯಾಲಯಗಳಂತೆ ಗುಲಬರ್ಗಾ ವಿಶ್ವವಿದ್ಯಾಲಯ ಸಂಪೂರ್ಣ ಅಭಿವೃದ್ಧಿಗೆ ಸಹಾಯಕವಾಗಲಿದೆ. ವಿವಿಧ ವಿಭಾಗಗಳ ಪ್ರಾಧ್ಯಾಪಕರು ಸಂಶೋಧನೆ ಕ್ಷೇತ್ರದಲ್ಲಿ ಸಾಧಿಸಿರುವ ಪ್ರಗತಿಯಿಂದ ವಿದೇಶದ ವಿಶ್ವವಿದ್ಯಾಲಯಗಳ ಸಹಯೋಗದಲ್ಲಿ ನಡೆದ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಸುಮಾರು 13 ದೇಶಗಳ ವಿಜ್ಞಾನಿಗಳು ಆಗಮಿಸಿ ಸಸ್ಯಶಾಸ್ತ್ರ ಮತ್ತು ಜೀವ ವಿಜ್ಞಾನ ವಿಷಯಗಳ ಕುರಿತು ಜಾಗತಿಕ ಸಂಶೋಧನೆ ಜ್ಞಾನ ಚಿಂತನೆಗಳಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ದೊರೆತಿದೆ ಎಂದರು.

ಕುಲಸಚಿವ ಪ್ರೊ. ರಾಜನಾಳ್ಕರ್ ಲಕ್ಷ್ಮಣ ಅತಿಥಿ ಗಣ್ಯರನ್ನು ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿ ಗುಲಬರ್ಗಾ ವಿವಿ ಕಲ್ಯಾಣ ಕರ್ನಾಟಕ ಭಾಗದ ನಾಲ್ಕು ದಶಕಗಳ ಕಾಲ ಶೈಕ್ಷಣಿಕ ಸೇವೆಯಲ್ಲಿ ಮಹತ್ವದ ದಾಖಲೆ ಸಾಧಿಸಿದೆ. ವಿವಿಯ ಇಲ್ಲಿಯವರೆಗಿನ ಸಾಧನೆಯ ಆತ್ಮವಲೋಕನ ಮತ್ತು ಭವಿಷ್ಯದಲ್ಲಿ ಸಾಧಿಸಬೇಕಾದ ಶೈಕ್ಷಣಿಕ ಗುರಿಯ ಬಗೆ ಪುನರ್ ಮನನ ಮಾಡಿಕೊಳ್ಳುವ ಅವಿಸ್ಮರಣೀಯ ದಿನವಾಗಿದೆ. ವಿದ್ಯಾರ್ಥಿಗಳ ಜ್ಞಾನ ಬೆಳವಣಿಗೆಗೆ ಅಗತ್ಯವಿರುವ ಮೂಲಭೂತ ಸೌಕರ್ಯದೊಂದಿಗೆ ಶೈಕ್ಷಣಿಕ ಸುಧಾರಣೆ ಮತ್ತು ಗುಣಮಟ್ಟ ಶಿಕ್ಷಣವನ್ನು ಉತ್ತೇಜಿಸಲು ನಾವೀನ್ಯ ಕಾರ್ಯಕ್ರಮ ರೂಪಿಸಿ ಯಶಸ್ವಿಗೊಳಿಸುತ್ತಿದೆ ಎಂದರು.

ಸಮಾಜ ವಿಜ್ಞಾನ ನಿಕಾಯದ ಡೀನ್ ಹಾಗೂ ಸಿಂಡಿಕೇಟ್ ಸದಸ್ಯ ಪ್ರೊ. ಜಿ. ಶ್ರೀರಾಮುಲು, ವಿಜ್ಞಾನ ನಿಕಾಯದ ಡೀನ್ ಪ್ರೊ. ಸುಲೋಚನಾ, ಶಿಕ್ಷಣ ನಿಕಾಯದ ಡೀನ್ ಪ್ರೊ. ಹೂವಿನಬಾವಿ ಬಾಬಣ್ಣ, ಕಲಾ ನಿಕಾಯದ ಡೀನ್ ಪ್ರೊ. ಅಬ್ದುಲ್ ರಬ್ ಉಸ್ತಾದ್, ವಾಣಿಜ್ಯ ಮತ್ತು ನಿರ್ವಹಣಾ ನಿಕಾಯದ ಡೀನ್ ಪ್ರೊ. ಎ. ಪಿ. ಹೊಸಮನಿ ಹಾಗೂ ಕಾನೂನು ನಿಕಾಯದ ಡೀನ್ ಪ್ರೊ. ದೇವಿದಾಸ ಮಾಲೆ ಇವರುಗಳು ವಿವಿಧ ನಿಕಾಯಗಳ ಅಡಿಯಲ್ಲಿ ಬರುವ ವಿಭಾಗಗಳ ಪಠ್ಯ ಸ್ವರೂಪ, ಸಂಶೋಧನೆ ಕಾರ್ಯಕ್ರಮ ರೂಪರೇಷೆಗಳನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ವಿದ್ಯಾ ವಿಷಯಕ ಪರಿಷತ್ ಸದಸ್ಯ ಪ್ರೊ. ಕೆ. ಸಿದ್ದಪ್ಪ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಸಾಧಕರು, ನಿವೃತ್ತರಾದ ವಿಶ್ರಾಂತ ಪ್ರಾಧ್ಯಾಪಕರು. ಹಾಗೂ ವಿಶ್ರಾಂತ ಶಿಕ್ಷಕೇತರ ನೌಕರ ಸಿಬ್ಬಂದಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ. ಎಚ್. ಟಿ. ಪೋತೆ ವಾರ್ಷಿಕ ವರದಿ ವಾಚಿಸಿದರು. ಆಡಳಿತ ವಿಶೇಷಾಧಿಕಾರಿ ಪ್ರೊ. ಚಂದ್ರಕಾಂತ್ ಕೆಳಮನಿ ಸನ್ಮಾನ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ ಪರಿಷತ್ ಸದಸ್ಯರು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಅತಿಥಿ ಅಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿ, ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗ್ರಂಥಪಾಲಕಿ ಡಾ. ಮಮತಾ ಮೇಸ್ತ್ರಿ ಹಾಗೂ ಡಾ. ಎಂ. ಬಿ. ಕಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಮೌಲ್ಯಮಾಪನ ಕುಲಸಚಿವೆ ಪ್ರೊ. ಮೇಧಾವಿನಿ ಕಟ್ಟಿ ವಂದಿಸಿದರು. ಸಂಗೀತ ವಿಭಾಗದ ಅತಿಥಿ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕೊನೆಯಲ್ಲಿ ಸಾಮೂಹಿಕವಾಗಿ ರಾಷ್ಟ್ರಗೀತೆ ಹಾಡಲಾಯಿತು.

ವಿಶ್ವವಿದ್ಯಾಲಯದ ಸಮಗ್ರ ಬೆಳವಣಿಗೆಗೆ ಶ್ರಮಿಸಿರುವ ವಿಶ್ರಾಂತ ಕುಲಪತಿಗಳ ಸೇವೆ ಅನನ್ಯವಾಗಿದೆ. ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಗುಣಾತ್ಮಕ ಸಂಶೋಧನೆ ಕಾರ್ಯದಿಂದ ಜಾಗತಿಕ ಸಂಶೋಧಕರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅಂತರ ರಾಷ್ಟ್ರೀಯ ಮಟ್ಟದ ವಿಶ್ವವಿದ್ಯಾಲಯಗಳಲ್ಲಿ ನಮ್ಮ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಅಧ್ಯಯನ ಮತ್ತು ಸಂಶೋಧನೆ ಅವಕಾಶ ಪಡೆದಿದ್ದಾರೆ. ವಿಶ್ವವಿದ್ಯಾಲಯದ ಗುರಿ ಮತ್ತು ಬೆಳವಣಿಗೆಗೆ ಹಲವು ಸ್ಥಳಿಯ ಸಂಸ್ಥೆಗಳು ಸಹಕಾರ ನೀಡುತ್ತಿವೆ. ವಿಶ್ವವಿದ್ಯಾಲಯದ ಶೈಕ್ಷಣಿಕ ಬೆಳವಣಿಗೆ ಸಾಧಿಸಲು ನೇಮಕಾತಿ ಅನಿವರ‍್ಯತೆಯಿದೆ. ಪ್ರಸ್ತುತ 30% ಬೋದಕರು ಮತ್ತು 40% ಬೋದಕೇತರ ಸಿಬ್ಬಂದಿಗಳು ಮಾತ್ರ ಕೆಲಸ ನಿರ್ವಹಿಸುತ್ತಿದ್ದಾರೆ. ಸೆ. 17 ರಂದು ಗುಲಬರ್ಗಾದಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಕ್ ಖರ್ಗೆ ಅವರು ಉನ್ನತ ಶಿಕ್ಷಣ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಬೋದಕ ಮತ್ತು ಬೋದಕೇತರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ಕೊಡಿಸಿದರೆ ಅನುಕೂಲವಾಗವುದು.- ಪ್ರೊ. ದಯಾನಂದ ಅಗಸರ, ಕುಲಪತಿ, ಗುಲಬರ್ಗಾ ವಿಶ್ವವಿದ್ಯಾಲಯ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here