ಕಲಬುರಗಿ: ನಗರದ ಶ್ರೀ ದಾಮೋದರ ರಘೋಜಿ ಮೆಮೋರಿಯಲ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಮೂರನೇ ವರ್ಷದ ಶಾಲೆಯ ಸಂಸ್ಥಾಪಕರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಗೀತ ಶಿಕ್ಷಕರಾದ ಮಹೇಶ ಬಡಿಗೇರ ಇವರ ಸಹಕಾರದೊಂದಿಗೆ ಶ್ರೀಮತಿ ಮೀರಾ ಆರ್ ರಘೋಜಿ ಹಾಗೂ ಸಂಗಡಿಗರಿಂದ ಸಂಗೀತ ನುಡಿನಮನ ಜರುಗಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ. ವಿಜಯ ಡಿ. ರಘೋಜಿ, ಶಾಲೆಯ ಅಧ್ಯಕ್ಷರಾದ ರಾಮಚಂದ್ರ ಡಿ ರಘೋಜಿ ಕಾರ್ಯದರ್ಶಿಗಳಾದ ಮೀರಾ ಆರ್ ರಘೋಜಿ, ಟ್ರಸ್ಟೀ ಹೊಂದಿರುವ ಕಮಲಾಬಾಯಿ ಡಿ ರಘೋಜಿ, ಕುಮಾರಿ ನಂದಿನಿ ಆರ್ ರಘೋಜಿ, ವಿಷ್ಣು ಕೇಲೋಜಿ ಇವರುಗಳಿಗೆ ಶಾಲೆಯ ವತಿಯಿಂದ ನೆನಪಿನ ಕಾಣಿಕೆಯನ್ನು ಕೊಟ್ಟು ಸನ್ಮಾನಿಸಿಲಾಯಿತು.
ಈ ಸಂಸ್ಥೆಯಲ್ಲಿ ಸತತವಾಗಿ ಐದು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ಶಾಲೆಯ ಎಲ್ಲಾ ಭೋದಕರಿಗೂ ಹಾಗೂ ಭೋದಕೇತರರಿಗೂ ಶಾಲೆಯ ಪ್ರಾಂಶುಪಾಲರಾದ ಪ್ರಮೋದ ಎಸ್ ಮಾಳೇಕರ ಹಾಗೂ ಸಂಸ್ಥೆಯ ಸಮಸ್ತ ಪದಾಧಿಕಾರಿಗಳಿಂದ ನೆನಪಿನಕಾಣಿಕೆಯನ್ನು ಕೊಟ್ಟು ಗೌರವಿಸಿದರು.
ಈ ಕಾರ್ಯಕ್ರಮದಲ್ಲಿ, ಬೋಧಕರು, ಬೋಧಕೇತರರು ಹಾಗೂ ಶಾಲೆಯ ಎಲ್ಲಾ ಮಕ್ಕಳು ಉಪಸ್ಥಿತರಿದ್ದರು. ಕೊನೆಗೆ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಳಿಸಲಾಯಿತು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…