ಹನಿಟ್ರ್ಯಾಪ್ ಆರೋಪಿಗಳು ಸ್ವಯಂ ಶರಣಗಾತರಾಗಿಲ್ಲ: ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ

ಕಲಬುರಗಿ: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಆರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಆ ಆರೋಪಿಗಳು ಸ್ವಯಂ ಪ್ರೇರಿತರಾಗಿ ಶರಣಾಗತರಾಗಿಲ್ಲ. ಬದಲಿಗೆ ನೋಟಿಸ್ ಕೊಟ್ಟಿದ್ದರಿಂದ ಅವರು ಆಗಮಿಸಿದ್ದು, ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಅವರು ಹೇಳಿದರು.

ತಮ್ಮ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ರಾಜು ಲೆಂಗಟಿ ಮತ್ತು ಪ್ರಭು ಹಿರೇಮಠ್ ಅವರನ್ನು ಬಂಧಿಸಲಾಗಿತ್ತು. ಅವರ ವಿಚಾರಣೆಯ ನಂತರ ಆರು ಜನರಿಗೆ ನೋಟಿಸ್ ಜಾರಿ ಮಾಡಲಾಗಿತ್ತು ಎಂದರು.

ನೋಟಿಸ್ ಕೊಟ್ಟ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಪ್ರಕರಣದ ಆರೋಪಿಗಳಾದ ಹನುಮಂತ್ ಯಳಸಂಗಿ, ಮಂಜುನಾಥ್ ಭಂಡಾರಿ, ಉದಯಕುಮಾರ್ ಖನಗೆ, ಅರವಿಂದ್ ಕಮಲಾಪುರ, ಸಂತೋಷ್ ಪಾಳಾ, ಶ್ರೀಕಾಂತ್ ರೆಡ್ಡಿ ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಬಂಧಿತರಿಂದ ಯಾವುದೇ ರೀತಿಯ ಮಾರಕಾಸ್ತ್ರಗಳನ್ನು ವಶಪಡಿಸಿಕೊಂಡಿಲ್ಲ ಎಂದು ಅವರು ಹೇಳಿದರು.

ಹನಿಟ್ರ್ಯಾಪ್ ಒಳಗಾದ ಯಾವುದೇ ಉದ್ಯಮಿಗಳು, ನೌಕರರು ಮುಂದೆ ಬಂದು ದೂರು ಕೊಟ್ಟಿಲ್ಲ. ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿದ್ದವರು ಮುಂದೆ ಬಂದು ದೂರು ಕೊಟ್ಟರೆ ಅವರ ಗೌಪ್ಯತೆಯನ್ನು ಕಾಪಾಡಿ ವಿಚಾರಣೆ ಮಾಡುತ್ತೇವೆ ಎಂದು ಎಂದು ಅವರು ಹೇಳಿದರು.

ಹನಿಟ್ರ್ಯಾಪ್ ಪ್ರಕರಣದಲ್ಲಿ ಇನ್ನೂ ಆರೋಪಿಗಳು ಇರಬಹುದೇ? ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಆಯುಕ್ತರು, ಇರಬಹುದು ಎಂದರಲ್ಲದೇ, ಪೋಲಿಸ್ ಕಚೇರಿಗಳು ಕಾಂಗ್ರೆಸ್ ಕೈಗೊಂಬೆಗಳಾಗಿವೆ ಎಂಬ ರಾಜಕೀಯ ನಾಯಕರ ಆರೋಪಗಳನ್ನು ತಳ್ಳಿ ಹಾಕಿದರು.

ಮುಂಬಯಿ ಮೂಲದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಗರ್ಭಪಾತ ಮಾಡಿಸಿದ ಕುರಿತು ಪ್ರಸ್ತಾಪಿಸಿದಾಗ ಪೋಲಿಸ್ ಆಯುಕ್ತರು ಉತ್ತರಿಸಿ, ಆ ಪ್ರಕರಣದ ದೋಷಾರೋಪಣೆ ಪಟ್ಟಿ ಈಗಾಗಲೇ ಸಿದ್ಧಗೊಂಡಿದೆ. ಕಾನೂನು ಕ್ರಮ ಜಾರಿಯಾಗಲಿದೆ ಎಂದರು.

ನಗರ ಪೋಲಿಸ್ ಆಯುಕ್ತರ ಕಚೇರಿ ವ್ಯಾಪ್ತಿಯಲ್ಲಿ ಮಟಕಾ, ಜೂಜಾಟ, ರೌಡಿಸಂ ಮುಂತಾದ ಎಲ್ಲ ಅಪರಾಧಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

24 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

24 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

24 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago