ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನದ ಸಭೆ ನಡೆಯಿತು.
ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ,ಬಿಜೆಪಿ ಅತ್ಯಂತ ಶಿಸ್ತಿನ ಪಕ್ಷವಾಗಿದ್ದು, ಪ್ರತಿ 6 ವರ್ಷಕ್ಕೊಮ್ಮೆ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳುತ್ತದೆ. ಈ ಬಾರಿ ವಿಭಿನ್ನವಾಗಿ ಆನ್‍ಲೈನ್ ಮುಖಾಂತರ ಸದಸ್ಯತ್ವಹೊಂದಿ ನಮ್ಮ ಭಾವಚಿತ್ರದ ಜೊತೆಗೆ ಪಕ್ಷದ ಸದಸ್ಯತ್ವ ಸಂಖ್ಯೆಯ ಗುರುತಿನ ಚೀಟಿ ಪಡೆಯುವದಾಗಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಭಿಯಾನದಲ್ಲಿ ಪಾಲ್ಗೊಂಡು ತಮ್ಮ ಜವಾಬ್ದಾರಿ ನಿಭಾಯಿಸಬೇಕಾಗಿದೆ. ಪ್ರತಿ ಬೂತ್‍ನಿಂದ ಕನಿಷ್ಠ 400 ಸದಸ್ಯರನ್ನು ಸೇರ್ಪಡೆ ಮಾಡಿ, ಮುಂದಿನ ದಿನಗಳಲ್ಲಿ ನಮ್ಮ ಪಕ್ಷದ ಗೆಲುವಿಗೆ ಪಣತೊಡಬೇಕಾಗಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶವು ಹಿಂದೆಂದು ಕಾಣದ ರೀತಿಯಲ್ಲಿ ಪ್ರಗತಿ ಸಾಧಿಸುತ್ತಿದೆ. ನಾವೆಲ್ಲರೂ ಅವರಿಗೆ ಶಕ್ತಿ ನೀಡಲು ಈ ಸದಸ್ಯತ್ವ ಅಭಿಯಾನವು ಯಶಸ್ವಿಯಾಗಿಸುವುದು ನಮ್ಮ ಕರ್ತವ್ಯ ವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವ ಮುಖಂಡ ವಿಠಲ ವಾಲ್ಮೀಕ ನಾಯಕ,ಶರಣಗೌಡ ಚಾಮನೂರ,ಭೀಮರಾವ ದೊರೆ,ಅಶೋಕ ಪಂಚಾಳ,ಹೀರಾ ನಾಯಕ, ಪ್ರೇಮ ರಾಠೋಡ,ಆನಂದ ಶಿರವಾಳ,ದಿನೇಶ್ ಚವ್ಹಾಣ, ರವಿ ರಾಠೋಡ, ಚಂದು ರಾಠೋಡ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…