ಚಿತ್ತಾಪುರ: ತಾಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ರೈತರು ಬೆಳೆದ ಉದ್ದಿನ ಬೆಳೆಯು ಕಟಾವು ಮಾಡಲು ಸಾಧ್ಯವಾಗದೇ ಇರುವುದರಿಂದ ಉದ್ದು ನೆನೆದು ಮೊಳಕೆಯೊಡೆಯುತ್ತಿವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಮೌನೇಶ ಕರದಾಳಕರ್ ಮತ್ತು ರೈತರು ತಮ್ಮ ಅಳಲು ತೊಡಿಕೊಂಡಿದ್ದಾರೆ.
ಐದು ಎಕರೆ ಜಮೀನಿನಲ್ಲಿ ಉದ್ದು ಬಿತ್ತನೆ ಮಾಡಿದ್ದೇ ಬೆಳೆಯೂ ಉತ್ತಮವಾಗಿಯೇ ಬಂದಿದೆ. ಆದರೆ ಸತತವಾಗಿ ಬರುತ್ತಿರುವ ಮಳೆಯಿಂದ ಉದ್ದಿನ ರಾಶಿ ಮಾಡಲು ಸಾಧ್ಯವಾಗುತ್ತಿಲ್ಲ. ಮಳೆಬರುತ್ತಿರುವ ವಾತಾವರಣ ನೋಡಿದರೆ ನಾವು ಬೆಳೆದಿರುವ ಬೆಳೆಯು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಇದರಿಂದ ನಮಗೆ ದಿಕ್ಕೇ ತೊಚದಂತಾಗಿದೆ.
ಇಷ್ಟೆಲ್ಲಾ ಬೆಳೆ ಹಾಳಾಗಿ ರೈತರು ಸಂಕಷ್ಟದಲ್ಲಿದ್ದರೂ ಕಂದಾಯ, ಕೃಷಿ ಇಲಾಖೆಯ ಅಧಿಕಾರಿಗಳು ರೈತರ ಬೆಳೆ ಹಾಳಾಗಿರುವ ಕುರಿತು ಸಮೀಕ್ಷೆ ಮಾಡುತ್ತಿಲ್ಲ ಎಂದು ಆರೋಪಿಸಿದ ರೈತರು, ನಾವು ಬೆಳೆದ ಬೆಳೆ ಹಾಳಾಗಿರುವುದಕ್ಕೆ ಸರ್ಕಾರವು ಎಕರೆಗೆ 25 ಸಾವಿರ ಪರಿಹಾರ ಘೋಷಣೆ ಮಾಡಬೇಕು.
ಇಲ್ಲವಾದಲ್ಲಿ ರೈತ ಸಂಘವು ತಾಲೂಕು ಆಡಳಿತ ವಿರುದ್ಧ ಉಗ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…