ಸುರಪುರ: ಸಪ್ಟೆಂಬರ್ 17 ರಂದು ಪ್ರತಿ ವರ್ಷದಂತೆ ಈ ವರ್ಷವೂ ತಾಲೂಕ ಆಡಳಿತ ದಿಂದ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಗುವುದು ಎಂದು ತಹಸಿಲ್ದಾರ್ ಹುಸೇನಸಾಬ್ ಎ.ಸರಕಾವಸ್ ತಿಳಿಸಿದರು.
ನಗರದ ತಹಸಿಲ್ದಾರ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ನಗರದ ಸರ್ದಾರ್ ವಲ್ಲಭಬಾಯ್ ಪಟೇಲ್ ವೃತ್ತದಲ್ಲಿ 17 ರಂದು ಬೆಳಿಗ್ಗೆ 10 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ,ಬೆಳಿಗ್ಗೆ 8 ಗಂಟೆಯ ಒಳಗಾಗಿ ಎಲ್ಲಾ ಕಚೇರಿ,ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಧ್ವಜಾರೋಹಣ ಆಚರಿಸಿ ನಂತರ ತಾಲೂಕ ಆಡಳಿತದ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಿಳಿಸಿದರು.
ಶಾಸಕ ರಾಜಾ ವೇಣುಗೋಪಾಲ ನಾಯಕ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು,ಉಪನ್ಯಾಸ ಕಾರ್ಯಕ್ರಮವನ್ನು ನಡೆಸಲಾಗುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಇಒ ಬಸವರಾಜ ಸಜ್ಜನ್, ತಾಲೂಕ ಆರೋಗ್ಯಾಧಿಕಾರಿ ಡಾ.ಆರ್.ವಿ.ನಾಯಕ,ಕ್ಷೇತ್ರ ಶಿಕ್ಷಣಾಧಿಕಾರಿ ಯಲ್ಲಪ್ಪ ಕಾಡ್ಲೂರ,ಕ್ಷೇತ್ರ ಸಮನ್ವಯಾಧಿಕಾರಿ ಪಂಡೀತ ನಿಂಬೂರ,ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಪ್ಪಾರಡ್ಡಿ ಮಾಲಿ ಪಾಟೀಲ್,ಪಶುಸಂಗೋಪಾನಾ ಇಲಾಖೆ ಅಧಿಕಾರಿ ಸುರೇಶ ಅಚ್ಚಡ್,ಸಿಡಿಪಿಒ ಅನಿಲ್ ಕಾಂಬ್ಳೆ,ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಮಹ್ಮದ್ ಸಲೀಂ,ಕೃಷಿ ಇಲಾಖೆ ಎಡಿ ಭೀಮರಾಯ ಹವಲ್ದಾರ್,ಮುಖಂಡರಾದ ರಮೇಶ ದೊರೆ ಆಲ್ದಾಳ,ವೆಂಕಟೇಶ ಬೇಟೆಗಾರ,ಚಂದ್ರಶೇಖರ ದೊರೆ ಬಿಚ್ಚಗತ್ತಿಕೇರ,ಉಸ್ತಾದ್ ವಜಾಹತ್ ಹುಸೇನ್,ಹಣಮಂತ್ರಾಯ ಮಕಾಶಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿಶ್ವಕರ್ಮ ಸಮುದಾಯದ ಅನೇಕ ಮುಖಂಡರು ಭಾಗವಹಿಸಿದ್ದರು.
ನಗರದ ಕಬಾಡಗೇರಾದಲ್ಲಿನ ಶ್ರೀ ಕಾಳಿಕಾದೇವಿ ದೇವಸ್ಥಾನದಲ್ಲಿ ವಿಶ್ವಕರ್ಮ ಸಮಾಜದೊಂದಿಗೆ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದ್ದು,ಬೆಳಿಗ್ಗೆ 9 ಗಂಟೆಗೆ ವಿಶ್ವಕರ್ಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮ ಆಚರಿಸಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿಶ್ವಕರ್ಮ ಸಮುದಾಯದ ಮುಖಂಡರು ಮಾತನಾಡಿ,ವಿಶ್ವಕರ್ಮರ ಭಾವಚಿತ್ರ ಮೆರವಣಿಗೆ ನಡೆಸುವ ಕುರಿತು ಸಮಾಜದ ಸಭೆ ನಡೆಸಿ ತಿಳಿಸುವುದಾಗಿ ತಿಳಿಸಿದರು.
ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ದೇವಿಂದ್ರಪ್ಪ ಪತ್ತಾರ ತಳವಾರಗೇರಾ,ಮಾಜಿ ಅಧ್ಯಕ್ಷ ಪ್ರಭು ಚನ್ನಪಟ್ಟಣ,ಸ್ವರ್ಣಕಾರ ಸಂಘದ ಅಧ್ಯಕ್ಷ ಶ್ರೀಕಾಂತ ಚಿಕ್ಕನಳ್ಳಿ,ಮಹೇಶ ಸಗರ,ರಾಜು ತಾಳಿಕೋಟಿ,ಶಂಕರ ತಾಳಿಕೋಟಿ,ಅಶೋಕ ಗೋಗಿ ಸೇರಿದಂತೆ ಅನೇಕು ಮುಖಂಡರು ಭಾಗವಹಿಸಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…