ಕಲಬುರಗಿ: ಸೆ. 13 ರಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ”ರು ಅಭಿಯಾನ

ಕಲಬುರಗಿ: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವತಿಯಿಂದ “ಪ್ರವಾದಿ ಮುಹಮ್ಮದ್(ಸ) ಮಹಾನ್ ಚಾರಿತ್ರ್ಯವಂತ” ಎಂಬ ಧ್ಯೇಯವಾಕ್ಯದಡಿ ರಾಜ್ಯವ್ಯಾಪಿ ಅಭಿಯಾನವನ್ನು 2024, ಸೆಪ್ಟೆಂಬರ್ 13 ರಿಂದ 22ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಮಾಅತೆ ನಿಂದ್ ರಾಜ್ಯ ಕಾರ್ಯದರ್ಶಿ ಯುಸೂಫ್ ಕಣ್ಣಿ ತಿಳಿಸಿದರು.

ಗುರುವಾರ ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಮಾತನಾಡಿದ ಅವರು ಪ್ರವಾದಿ ಮುಹಮ್ಮದ್(ಸ)ರ ಜೀವನ ಮತ್ತು ಸಂದೇಶವು ಸಾರ್ವಕಾಲಿಕ ಮತ್ತು ಸಾರ್ವತ್ರಿಕವಾದುದು. ಅವರ ಜೀವನ ಮತ್ತು ಸಾಧನೆಗಳು ಎಲ್ಲಾ ಧರ್ಮಗಳ ಜ್ಞಾನಿಗಳ ಮೆಚ್ಚುಗೆಯನ್ನೂ ಜಗತ್ತಿನಾದ್ಯಂತ ಜನಮನ್ನಣೆಯನ್ನೂ ಗಳಿಸಿರುತ್ತದೆ. ಅವರ ಮೇಲೆ ಅವತೀರ್ಣಗೊಂಡ ದೈವಿಕ ಗ್ರಂಥ ಪವಿತ್ರ ಕುರ್‌ಆನ್ ಮತ್ತು ಅವರ ಬೋಧನೆಗಳಾದ “ಹದೀಸ್”ಗಳು ಅಧಿಕೃತವಾಗಿ ಸಂರಕ್ಷಿಸಲ್ಪಟ್ಟಿದ್ದು ಇಂದಿಗೂ ಅವು ಪ್ರಸ್ತುತ ಎಂದು ತಿಳಿಸಿದರು.

ಈ ಮಹಾನ್ ವ್ಯಕ್ತಿತ್ವದ ಸಂದೇಶ ಮತ್ತು ಬೋಧನೆಗಳನ್ನು ಸರ್ವಮಾನವ ಕುಲಕ್ಕೆ ಪ್ರಸ್ತುತವೆಂಬುದನ್ನು ಸಾರ್ವಜನಿಕರಿಗೆ ಪರಿಚಯಿಸುವ ಮತ್ತು ಜಾಗೃತಿ ಮೂಡಿಸುವ ಅಗತ್ಯವಿದೆ. ಮುಖ್ಯವಾಗಿ ಅನೈತಿಕತೆ,ದ್ವೇಷ, ಹಿಂಸೆ ಹಾಗೂ ಸ್ವಾರ್ಥಗಳು ಸಾಮಾನ್ಯವಾಗಿರುವ ಇಂದಿನ ವಾತಾವರಣದಲ್ಲಿನೈತಿಕತೆ, ಪ್ರೀತಿ, ವಿಶ್ವಾಸ ಮತ್ತು ಮಾನವೀಯತೆಯ ಸಂದೇಶವನ್ನು ಎತ್ತಿಹಿಡಿಯುವುದು ಅನಿವಾರ್ಯ. ಈ ಬೇಡಿಕೆಯ ಭಾಗವಾಗಿ ರಾಜ್ಯದ ವಿವಿಧೆಡೆ ಅಭಿಯಾನದ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರವಾದಿ ಮುಹಮ್ಮದರ ಬಗ್ಗೆ ಜಗತ್ತಿನ ಪ್ರಸಿದ್ಧ ದಾರ್ಶನಿಕರ ಅನಿಸಿಕೆಗಳು ಮತ್ತು ದೇಶನ ಹೆಸರಾಂತ ಬುದ್ಧಿಜೀವಿಗಳು ಬರೆದಿರುವ ಲೇಖನ ಸಂಕಲನದ ಪುಸ್ತಕಗಳನ್ನು ಹೊರತರಲಾಗುವುದು. ರಾಜ್ಯಾದ್ಯಂತ ಬೃಹತ್ ಸಮ್ಮೇಳನಗಳು, ವಿಚಾರಗೋಷ್ಠಿಗಳು, ಸಂವಾದ ಕಾರ್ಯಕ್ರಗಳು, ಸಾಮಾಜಿಕ ಸೇವಾ ಕಾರ್ಯಗಳು ಇನ್ನಿತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಪ್ರಬಂಧ ಸ್ಪರ್ಧೆ ಮತ್ತು ಕ್ವಿಝ್ ಸ್ಪರ್ಧೆ ಸೇರಿದಂತೆ ವಿಶೇಷ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಪರಸ್ಪರ ಅಪನಂಬಿಕೆ, ದ್ವೇಷ, ಪೂರ್ವಾಗ್ರಹಗಳನ್ನು ಹೋಗಲಾಡಿಸಿ, ಶಾಂತಿ, ಸೌಹಾರ್ದತೆ ಮತ್ತು ಮಾನವೀಯತೆಯನ್ನು ಬೆಳೆಸುವುದೇ ಈ ಅಭಿಯಾನದ ಉದ್ದೇಶವಾಗಿದ್ದು ಸಾರ್ವಜನಿಕರು ಸಹಕಾರ ನೀಡಬೇಕೆಂದು ಮನವಿ ಮಾಡಿದ್ದರು.

ಜಮಾಅತೆ ಹಿಂದ್ ಜಿಲ್ಲಾ ಅಧ್ಯಕ್ಷ ಮೊಹಮ್ಮದ್ ಮಜಹರೊದ್ದೀನ್, ಜಾಕಿರ್ ಹುಸೇನ್, ಅಬ್ದುಲ್ ಖದೀರ್, ಸೈಯದ್ ಮೊಹಿಯೊದ್ದೀನ್, ಇಲಿಯಾಸ್ ಸೇರಿದಂತೆ ಮುಂತಾದವರು ಇದ್ದರು.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

2 hours ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

2 hours ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

3 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

3 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

3 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420