ಶರಣಬಸವ ವಿಶ್ವವಿದ್ಯಾಲಯದಲ್ಲಿ 14ರಂದು ರಾಷ್ಟ್ರೀಯ ವಿಚಾರ ಸಂಕಿರಣ

ಕಲಬುರಗಿ; ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಜಂಟಿಯಾಗಿ, ನಗರದ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿರುವ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ “ಭಾರತೀಯ ಉದ್ಯಮಶೀಲತೆಯ ಪರಿಸರ ವ್ಯವಸ್ಥೆ- ಒಂದು ತನಿಖೆ” ಕುರಿತು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಸೆಪ್ಟೆಂಬರ್ 14 ರಂದು ಆಯೋಜಿಸಲಾಗಿದೆ.

ವಿಶ್ವವಿದ್ಯಾಲಯದ ಕುಲಸಚಿವ ಡಾ. ಎಸ್. ಜಿ. ಡೊಳ್ಳೇಗೌಡರ್ ಗುರುವಾರ ಕಲಬುರಗಿ ನಗರದಲ್ಲಿ ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ, ಉತ್ತರ ಪ್ರದೇಶದ ಅರ್ಥಶಾಸ್ತ್ರಜ್ಞ ಪೆÇ್ರ. ಎ. ಪಿ. ತಿವಾರಿ ಸೆಮಿನಾರ್‍ನ ಉದ್ಘಾಟನಾ ಅಧಿವೇಶನದಲ್ಲಿ ಪ್ರಮುಖ ಭಾಷಣ ಮಾಡಲಿದ್ದಾರೆ. ಗಿರಿ ಪ್ರತಿμÁ್ಠನದ ಅಭಿವೃದ್ಧಿ ಸಲಹೆಗಾರ ಪ್ರದೀಪ್ ಎಸ್. ಮೇಲ್ಗಡೆ ಮುಖ್ಯ ಅತಿಥಿ ಭಾಷಣ ಮಾಡಲಿದ್ದಾರೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಶ್ರೀ ಬಸವರಾಜ ದೇಶಮುಖ ಅವರು ವಿಚಾರ ಸಂಕಿರಣವನ್ನು ಉದ್ಘಾಟಿಸುವರು.

ಈ ವಿಚಾರ ಸಂಕಿರಣದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಅನಿಲಕುಮಾರ ಬಿಡವೆ, ಕುಲಸಚಿವ (ಮೌಲ್ಯಮಾಪನ) ಡಾ. ಎಸ್. ಎಚ್. ಹೊನ್ನಳ್ಳಿ ಹಾಗೂ ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ದಶರಥ್ ಮೇತ್ರಿ ಅಧ್ಯಕ್ಷತೆ ವಹಿಸಲಿದ್ದು, ಇತರ ಪ್ರಮುಖರು ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.

ವಿಚಾರ ಸಂಕಿರಣದಲ್ಲಿ “ಉದ್ಯಮಶೀಲತೆ ಮತ್ತು ಆರ್ಥಿಕ ಬೆಳವಣಿಗೆ” ಹಾಗೂ “ಕೃಷಿ ಮತ್ತು ಆಹಾರ ಭದ್ರತೆ” ಕುರಿತು ಎರಡು ತಾಂತ್ರಿಕ ಅಧಿವೇಶನಗಳನ್ನು ಆಯೋಜಿಸಲಾಗಿದೆ. ಇದರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ರಾಯಚೂರು ಮತ್ತು ಇತರ ಉನ್ನತ ಶಿಕ್ಷಣ ಸಂಸ್ಥೆಗಳ ಹಿರಿಯ ಶಿಕ್ಷಣ ತಜ್ಞರು ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ಹಾಗೂ ವಿದ್ಯಾರ್ಥಿ ಕಲ್ಯಾಣ ವಿಭಾಗದ ಡೀನ್ ಡಾ. ಶಿವಶರಣಪ್ಪ ಬಿ. ಗೌಡಪ್ಪ ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago