ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ಬಿಡುಗಡೆಗೆ ಕಾರ್ಮಿಕರ ಆಗ್ರಹ

ಶಹಾಬಾದ: ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುವ ವಿದ್ಯಾರ್ಥಿವೇತನವನ್ನು ಶೀಘ್ರವೇ ಬಿಡುಗಡೆ ಮಾಡಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ತಾಲೂಕು ಸಮಿತಿ ಅಧ್ಯಕ್ಷ ರಾಮು ಜಾಧವ್ ಮಾತನಾಡಿ, “ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಪೆಡರೇಷನ್ ಕರೆಯ ಮೇರೆಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತರಾದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪ್ರತಿ ವರ್ಷ ಶೈಕ್ಷಣಿಕ ಧನಸಹಾಯವನ್ನು ನೀಡುತ್ತಿದ್ದು, ಕಳೆದ ಎರಡ್ಮೂರು ವರ್ಷಗಳಿಂದ ಯಾವುದೇ ರೀತಿಯ ವಿದ್ಯಾರ್ಥಿವೇತನ ನೀಡಿರುವುದಿಲ್ಲ” ಎಂದರು.

ಕಟ್ಟಡ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕಲ್ಯಾಣ ಮಂಡಳಿಯಿಂದ ವಿದ್ಯಾರ್ಥಿವೇತನ ಧನಸಹಾಯವನ್ನು ಪಡೆಯಲು ಸೇವಾಸಿಂಧು ಹಾಗೂ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದದ ಮೂಲಕ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಕಾರ್ಮಿಕ ಇಲಾಖೆ ಸದರಿ ಅರ್ಜಿಗಳನ್ನು ಪರಿಶೀಲಿಸಿ ಮಂಜೂರು ಮಾಡಿದ್ದು, ಕಲ್ಯಾಣ ಮಂಡಳಿಯು ಬೋಗಸ್ ಕಾರ್ಮಿಕರ ಸಂಖ್ಯೆ ಹೆಚ್ಚಳ ಎನ್ನುವ ಕಾರಣದ ನೆಪವೊಡ್ಡಿ, ನೈಜ ಕಟ್ಟಡ್ಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನಸಹಾಯ ಮೊತ್ತವನ್ನು ಬಿಡುಗಡೆ ಮಾಡದೇ ವಿಳಂಬ ನೀತಿ ಅನುಸರಿಸಿ ಬಡ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಉಂಟಾಗಿದೆ ಎಂದು ಆರೋಪಿಸಿದರು.

ಪ್ರಧಾನ ಕಾರ್ಯದರ್ಶಿ ನಾಗಪ್ಪ ರಾಯಚೂರಕರ್ ಮಾತನಾಡಿ,ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2021-22 ಹಾಗೂ 2022-23 ನೇ ಸಾಲಿನ ಕಲ್ಯಾಣ ಮಂಡಳಿಯಲ್ಲಿ ಬಾಕಿಯಿರುವ ವಿದ್ಯಾರ್ಥಿವೇತನ ಮೋತ್ತವನ್ನು ಶೀಘ್ರವೆ ಬಿಡುಗಡೆ ಮಾಡಿಸಿ ಕಟ್ಟಡ ಕಾರ್ಮಿಕರ ಖಾತೆಗೆ ಜಮೆ ಮಾಡಬೇಕು ಎಂದು ಒತ್ತಾಯಿಸಿದರು.

ಕಲ್ಯಾಣ ಮಂಡಳಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಸಂಗ್ರಹವಿದ್ದರೂ ಬಡ ಕಾರ್ಮಿಕರ ಮಕ್ಕಳಿಗೆ ಕೊಡುತ್ತಿರುವ ಶೈಕ್ಷಣಿಕ ಧನಸಹಾಯ ಮೊತ್ತವನ್ನು ಕಡಿತಗೊಳಿಸಲಾಗಿದೆ. ಮಾತ್ರವಲ್ಲ ಕಡಿತಗೊಳಿಸರುವ ಮೊತ್ತವನ್ನು ಕಾರ್ಮಿಕರ ಖಾತೆಗೆ ಜಮೆ ಮಾಡುತ್ತಿಲ್ಲ. ಈ ಹಿಂದೆ 2020-21ರ ಮಾರ್ಗಸೂಚಿಯಂತೆ ಶೈಕ್ಷಣಿಕ ಧನಸಹಾಯ ಮೊತ್ತವನ್ನು ನೀಡಬೇಕು ಹಾಗೂ 1ನೇ ತರಗತಿಂದ 10ನೇ ತರಗತಿವರೆಗೆ ಈ ಹಿಂದೆ ನೀಡುತ್ತಿದ್ದಂತೆ ಶೈಕ್ಷಣಿಕ ಧನಸಹಾಯ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರದ ಶಾಸಕರ ಮೂಲಕ ಮುಖ್ಯಮಂತ್ರಿ ಗಮನ ಸೆಳೆಯಲು ಕಟ್ಟಡ ಕಾರ್ಮಿಕರ ಮಕ್ಕಳಾದ ನಾವು ನಮ್ಮ ಪೆÇೀಷಕರ ಸಂಘದ ಪರವಾಗಿ ಮನವಿ ನೀಡುತ್ತಿದ್ದು, ತಾವು ಕಾರ್ಮಿಕರ ಪರವಾಗಿ ಕಲ್ಯಾಣ ಮಂಡಳಿಗೆ ಶೀಘ್ರ ಪಾವತಿಗೆ ಕ್ರಮ ವಹಿಸಲು ಆದೇಶಿಸಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪ್ರಕಾಶ ಕುಸಾಳೆ, ಶಿವರಾಮ್ ಚಹ್ವಾಣ್, ರವಿ ಬೆಳಮಗಿ, ಲಕ್ಷ್ಮೀಕಾಂತ, ಶಿವಶರಣಪ್ಪ, ರಾಜು, ಕಮಲಬಾಯಿ, ನಾಮದೇವ ಸೇರಿದಂತೆ ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

19 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago