ಸುಗ್ರೀವಾಜ್ಞೆ ಮೂಲಕ ಒಳಮೀಸಲಾತಿ ಜಾರಿಗೊಳಿಸಲು ಆಗ್ರಹ

ಶಹಾಬಾದ: ಸುಗ್ರೀವಾಜ್ಞೆ ಮೂಲಕ ಕೂಡಲೇ ಒಳಮೀಸಲಾತಿ ಜಾರಿಗೊಳಿಸುವಂತೆ ಅಗ್ರಹಿಸಿ ದಲಿತ ಮಾದಿಗ ಸಮನ್ವಯ ಸಮಿತಿ(ಡಿಎಂಎಸ್‍ಎಸ್)ಯಿಂದ ಗ್ರೇಡ್-2 ತಹಶೀಲ್ದಾರ್ ಗುರುರಾಜ ಸಂಗಾವಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವiನವಿ ಸಲ್ಲಿಸಿದರು.

ದಲಿತ ಮಾದಿಗ ಸಮನ್ವಯ ಸಮಿತಿ ಅಧ್ಯಕ್ಷ ಶಿವರಾಜ ಕೋರೆ ಮಾತನಾಡಿ, ನ್ಯಾಯಮೂರ್ತಿ ಸದಾಶಿವ ಆಯೋಗದ ಆಸೆಯಂತೆ ಪರಿಶಿಷ್ಟ ಜಾತಿಗೆ ಒಳಮೀಸಲಾತಿ ಜಾರಿ ಮಾಡುವುದಕ್ಕೆ ಆಯಾ ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ. ಪರಿಶಿಷ್ಟ ಜಾತಿ ಜನಾಂಗಕ್ಕೆ ಒಳಮೀಸಲಾತಿ ನೀಡಿದರೆ ಸಮಾನತೆಗೆ ಯಾವುದೇ ರೀತಿಯ ಧಕ್ಕೆಯಾಗುವುದಿಲ್ಲ. ಸಂವಿಧಾನದ ಆಶಯದಂತೆ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಅನುಸಾರವಾಗಿ ರಾಜ್ಯ ಸರ್ಕಾರವು ಒಳಮೀಸಲಾತಿ ಜಾರಿ ಮಾಡುವುದಕ್ಕೆ ಯಾವುದೇ ತರಹದ ಕಾನೂನು ಉಲ್ಲಂಘನೆಯಾಗುವುದಿಲ್ಲವೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿರುತ್ತದೆ ಎಂದು ತಿಳಿಸಿದರು.

“ಶಹಾಬಾದ್ ತಾಲೂಕಿನ ದಲಿತ ಮಾದಿಗ ಸಮನ್ವಯ ಸಮಿತಿ ಸುಪ್ರೀಂ ಕೋರ್ಟ್‍ಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇವೆ. ಸುಪ್ರಿಂ ಕೋರ್ಟ್‍ನ ಈ ಐತಿಹಾಸಿಕ ನಿರ್ಣಯವನ್ನು ಸ್ವಾಗತಿಸುತ್ತೇವೆ ಮತ್ತು ರಾಜ್ಯದಲ್ಲಿರುವ ಮಾದಿಗ ಸಮಾಜದ ಹೋರಾಟಗಾರರು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಯಥವತ್ತಾಗಿ ಜಾರಿಗೊಳಿಸಬೇಕೆಂದು ಮೂರು ದಶಕಗಳ ಸತತವಾಗಿ ಹೋರಟ ಮಾಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಅತಿಹೆಚ್ಚು ಮಾದಿಗ ಸಮಾಜದ ಜನಾಂಗವಿದ್ದು, ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಯಾಗದ ಹೊರತು ಮಾದಿಗ ಸಮಾಜಕ್ಕೆ ನ್ಯಾಯ ದೊರಕಲಾರದು.

ವರ್ಷಗಳಲ್ಲಿ ಸಾವು-ನೋವುಗಳಾಗಿವೆ ಮಾದಿಗ ಸಮಾಜದ ಸಹೋದರರ ರಕ್ತ ಹರಿದಿದೆ. ಹೋರಾಟವನ್ನು ನಿರಂತರವಾಗಿ ಮಾಡುತ್ತ ಬಂದಿರುತ್ತೇವೆ. ಅದರ ಪ್ರತಿಫಲವಾಗಿ ಸುಪ್ರೀಂ ಕೋರ್ಟ್ ಐತಿಹಾಸಿಕ ನಿರ್ಣಯವನ್ನು ಪ್ರಕಟಿಸುವ ಮೂಲಕ ಮಾದಿಗ ಸಮಾಜಕ್ಕೆ ನ್ಯಾಯ ನೀಡಿದೆ ಮತ್ತು ಹೋರಾಟಕ್ಕೆ ಬೆಲೆ ಬಂದಿದೆ” ಎಂದು ಸಂತೋಷ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯದಲ್ಲಿರುವ ಹಲವಾರು ಇಲಾಖೆಯ ನೇಮಕಾತಿ ಹುದ್ದೆಗಳನ್ನು ಕೂಡಲೇ ತಡೆಹಿಡಿಯಬೇಕು. ಒಂದುವೇಳೆ ಒಳಮೀಸಲಾತಿ ಸುಗ್ರಿವಾಜ್ಞೆ ವಿಳಂಬವಾದಲ್ಲಿ ರಾಜ್ಯಾದ್ಯಂತ ದಲಿತ ಮಾದಿಗ ಸಮನ್ವಯ ಸಮಿತಿ ಸಂಘಟನೆ ಪರವಾಗಿ ತೀವ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಡಿಎಂಎಸ್‍ಎಸ್ ಕಾರ್ಯಾಧ್ಯಕ್ಷ ಶರಣು ಬಿ ಪಗಲಾಪೂರ, ಜಿಲ್ಲಾ ಪ್ರತಿನಿಧಿ ರವಿ ಬೆಳಮಗಿ, ಸಂಘಟನಾ ಕಾರ್ಯದರ್ಶಿ ನಾಗಪ್ಪ ಟಿ ರಾಯಚೂರಕ್, ಅಧ್ಯಕ್ಷ ಯಲ್ಲಾಲಿಂಗ ಹೈಯ್ಯಾಳಕರ ಸೇರಿದಂತೆ ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

21 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago