ಕಲಬುರಗಿ: ಪ್ರಧಾನಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಅಡಿಯಲ್ಲಿ 2024-25ನೇ ಸಾಲಿಗೆ ಕಲಬುರಗಿ ಜಿಲ್ಲೆಗೆ 13,175 ಮನೆಗಳನ್ನು ಜಿಪಿಎಸ್ ಮಾಡಲು ಗುರಿ ನೀಡಲಾಗಿದ್ದು, ಆದ್ಯತಾ ಪಟ್ಟಿಯಲ್ಲಿರುವ ಫಲಾನುಭವಿಗಳು ಇದೇ ಸೆ. 15 ರೊಳಗೆ ಅಗತ್ಯ ದಾಖಲೆಗಳನ್ನು ಗ್ರಾಮ ಪಂಚಾಯತಿಗೆ ಸಲ್ಲಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ತಿಳಿಸಿದ್ದಾರೆ.
ಜಿಲ್ಲೆಯ 13,175 ಮನೆಗಳ ಫಲಾನುಭವಿಗಳ ಪಟ್ಟಿ ಈಗಾಗಲೇ ಗ್ರಾಮ ಪಂಚಾಯತಿಯಲ್ಲಿ ಲಭ್ಯವಿದ್ದು, ಇದನ್ನು ಖಾತ್ರಿಪಡಿಸಿಕೊಂಡು ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಸಂಖ್ಯೆ, ಜಾಬ್ ಕಾರ್ಡ್, ಪಡಿತರ ಚೀಟಿ ಹಾಗೂ ಇತರೆ ಅಗತ್ಯ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ಅದರಂತೆ ಪಿಡಿಓ, ಟಿಎನ್‌ಒ ಹಾಗೂ ಡಿಇಓ ಅವರುಗಳು ಸೆ.12 ರಿಂದ 15ರ ವರೆಗೆ (ರಜೆ ದಿನಗಳು ಸೇರಿ) ಫಲಾನುಭವಿಗಳು ನೀಡುವ ಆಧಾರ ಕಾರ್ಡ, ಬ್ಯಾಂಕ್ ಪಾಸ್ ಬುಕ್, ಮೊಬೈಲ್ ಸಂಖ್ಯೆ, ಜಿಪಿಎಸ್ ಫೋಟೋಗಳನ್ನು ಕಡ್ಡಾಯವಾಗಿ ತಂತ್ರಾಂಶದಲ್ಲಿ ಅಪಲೋಡ್ ಮಾಡಬೇಕು.
ಈ ಸಂಬಂಧ ಫಲಾನುಭವಿಗಳಿಂದ ಏನೇ ದೂರು, ಅಕ್ಷೇಪಣೆಗಳಿದಲ್ಲಿ ಸಂಬಂಧಪಟ್ಟ ಆಯಾ ತಾಲೂಕಿನ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ದೂರು ಸಲ್ಲಿಸಿ ಬಗೆಹರಿಸಿಕೊಳ್ಳಬೇಕೆಂದು ತಿಳಿಸಲಾಗಿದೆ.
ಕೇಂದ್ರ ಸರ್ಕಾರದಿಂದ ಪ್ರಸಕ್ತ ಸಾಲಿಗೆ ರಾಜ್ಯಕ್ಕೆ 2,26,175 ಮನೆಗಳ ಗುರಿಯನ್ನು ಮಂಜೂರು ಮಾಡಿದ್ದು, ಪ್ರಧಾನಮಂತ್ರಿಗಳು ಇದೇ ಸೆ.15 ರಂದು ರಾಜ್ಯದ 1 ಲಕ್ಷ ಮನೆಗಳಿಗೆ ಏಕಕಾಲಕ್ಕೆ ಮೂದಲೇ ಕಂತಿನ ಅನುದಾನ ಬಿಡುಗಡೆ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…