ಕಲಬುರಗಿ: ಸೇಪ್ಟೆಂಬರ್ 17 ರಂದು ಜಿಲ್ಲೆಯಲ್ಲಿ ನಡೆಯುತಿರುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ವಿವಿಧ ಬೇಡಿಕೆಗಳನ್ನು ಚರ್ಚೆ ಮಾಡಿ, ಕಾರ್ಯರೂಪಕ್ಕೆ ತರಬೆಕೇಂದು ಜೈ ಕನ್ನಡಿಗರ ರಕ್ಷಣಾ ವೇದಿಕೆಯ ಸಚೀನ್ ಎಸ್. ಫರತಾಬಾದ ಒತ್ತಾಯಿಸಿದ್ದಾರೆ.
ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ದೃಷ್ಟಿಯಲ್ಲಿ ನಂತರ ಸಚಿವ ಸಂಪುಟ ಸಭೆಯು ಕಲಬುರಗಿಯಲ್ಲಿ ನಡೆಸುತ್ತಿರುವುದು ಅಭಿನಂದಹಾರ ಆದರೆ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ವಿವಿಧ ಬೇಡಿಕೆಗಳು ಈಡೆರಿಕೆಗೆ ಒತ್ತಡ ಹಾಕಬೇಕೆಂದು ಮನವಿ ಮಾಡಿದ್ದಾರೆ.
17ನೇ ಸೆಪ್ಟಂಬರ್ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ದಂದು ಈ ಭಾಗಕ್ಕೆ ಸರಕಾರಿ ರಜೆ ಘೋಷಣೆ ಮಾಡಬೇಕು, ಈ ಭಾಗದ ಇತಿಹಾಸವನ್ನು ಪಠ್ಯಪುಸ್ತದಲ್ಲಿ ಅಳವಡಿಸಿ ಕಲ್ಯಾಣ ಕರ್ನಾಟಕ ಬಗ್ಗೆ ಮಕ್ಕಳಿಗೆ ತಿಳಿಯುವಂತೆ ಮಾಡಬೇಕು, ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯಿಂದ ರೈತರ ಜಮೀನಿನಲ್ಲಿ ಮಳೆ ನೀರು ನಿಂತು ಬೆಳೆಗಳು ಹಾಳಾಗಿದ್ದು, ರೈತರ ಜಮೀನುಗಳಿಗೆ ಭೇಟಿ ನೀಡಿ ಜಮೀನಿನಲ್ಲಿ ಹಾನಿಯಾದ ಬೆಳೆಯ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.
ನಗರದಲ್ಲಿ ದಿನದಿಂದ ದಿನಕ್ಕೆ ಜನಸಂಖ್ಯೆ ಹೆಚ್ಚಳ ಆಗುತ್ತಿದ್ದು, ನಗರದಲ್ಲಿನ ಎಲ್ಲಾ ರಸ್ತೆಗಳನ್ನು ಇನ್ನೊಮ್ಮೆ ರಸ್ತೆ ಅಗಲಿಕರಣ ಮಾಡಬೇಕು, ಈ ಭಾಗದ ನೀರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ನೀಡುವದು, ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯನ್ನು ನಿಗಿಸುವದು, ನಗರದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಹೊಸದಾಗಿ ಪೊಲೀಸ್ ವಸತಿ ಗೃಹ ಕಟ್ಟಡ ನಿರ್ಮಾಣ ಮಾಡುವದು, ಕಲಬುರಗಿ ವಿಮಾನ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದು, ರಸ್ತೆಯ ಅಗಲಿಕರಣ ಮಾಡಿ ವಾಹನ ಸವಾರರಿಗೆ ಮತ್ತು ವಿಮಾನ ನಿಲ್ದಾಣಕ್ಕೆ ಹೋಗುವವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.