ರಾಜ್ಯದ 50 ಗ್ರಾಮ ಪಂಚಾಯತಿಗಳಲ್ಲಿ ಸೌರ ಬೀದಿ ದೀಪ ಅಳವಡಿಕೆ; ಸಚಿವ ಪ್ರಿಯಾಂಕ್‌ ಖರ್ಗೆ

0
33

ಕಲಬುರಗಿ; ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ ಇರಿಸಲು ಹಾಗೂ ವಿದ್ಯುತ್‌ ವೆಚ್ಚ ಕಡಿಮೆ ಮಾಡಲು ರಾಜ್ಯದ 50 ಗ್ರಾಮ ಪಂಚಾಯತಿಗಳಲ್ಲಿ ಸೋಲಾರ್‌ ಬೀದಿ ದೀಪಗಳನ್ನು ಅಳವಡಿಸುವ ʼಹೊಂಬೆಳಕುʼ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ವರ್ಷದ ಆಯವ್ಯಯದಲ್ಲಿ ಘೋಷಿಸಿದ್ದಂತೆ ‘ಹೊಂಬೆಳಕು’ ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತಿದ್ದು, ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ 25 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದೆಂದು ಸಚಿವರು ಹೇಳಿದರು. “ಸೌರ ಬೀದಿ ದೀಪಗಳು ಪರಿಸರ ಸ್ನೇಹಿಯಾಗಿದ್ದು, ಇಂಧನ ಬಳಕೆಯಾಗದಿರುವುದರಿಂದ ಗ್ರಾಮ ಪಂಚಾಯತಿಗಳಿಗೆ ವಿದ್ಯುತ್‌ ವೆಚ್ಚದ ಹೊರೆ ಕಡಿಮೆಯಾಗಲಿದೆ” ಎಂದಿದ್ದಾರೆ.

Contact Your\'s Advertisement; 9902492681

ಅಳವಡಿಸಲಾಗುತ್ತಿರುವ ಸೌರ ಬೀದಿ ದೀಪಗಳು ಎಲ್.ಇ.ಡಿ ತಂತ್ರಜ್ಞಾನವನ್ನು ಹೊಂದಿದ್ದು ದೀರ್ಘ ಕಾಲ ಬಾಳಿಕೆ ಬರಬಹುದೆಂದು ನಿರೀಕ್ಷಿಸಲಾಗಿದೆ, ಈ ವರ್ಷ ಸುಮಾರು 16,500 ಸೋಲಾರ್‌ ಬೀದಿ ದೀಪಗಳನ್ನು ಅಳವಡಿಸುವ ಗುರಿ ಹೊಂದಲಾಗಿದೆ. ಗ್ರಾಮೀಣ ಜನರು ಪ್ರಖರ ಬೆಳಕನ್ನು ಪಡೆಯುವುದರೊಂದಿಗೆ ವಿದ್ಯುತ್‌ ವೆಚ್ಚದ ಮಿತವ್ಯಯದಿಂದ ಗ್ರಾಮ ಪಂಚಾಯತಿಗಳ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here