ಕಲಬುರಗಿ; ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿನ ವಿದ್ಯುತ್ ಬಳಕೆ ಮೇಲೆ ನಿಗಾ ಇರಿಸಲು ಹಾಗೂ ವಿದ್ಯುತ್ ವೆಚ್ಚ ಕಡಿಮೆ ಮಾಡಲು ರಾಜ್ಯದ 50 ಗ್ರಾಮ ಪಂಚಾಯತಿಗಳಲ್ಲಿ ಸೋಲಾರ್ ಬೀದಿ ದೀಪಗಳನ್ನು ಅಳವಡಿಸುವ ʼಹೊಂಬೆಳಕುʼ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ವರ್ಷದ ಆಯವ್ಯಯದಲ್ಲಿ ಘೋಷಿಸಿದ್ದಂತೆ ‘ಹೊಂಬೆಳಕು’ ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತಿದ್ದು, ಈ ಕಾರ್ಯಕ್ರಮದ ಅನುಷ್ಠಾನಕ್ಕಾಗಿ 25 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುವುದೆಂದು ಸಚಿವರು ಹೇಳಿದರು. “ಸೌರ ಬೀದಿ ದೀಪಗಳು ಪರಿಸರ ಸ್ನೇಹಿಯಾಗಿದ್ದು, ಇಂಧನ ಬಳಕೆಯಾಗದಿರುವುದರಿಂದ ಗ್ರಾಮ ಪಂಚಾಯತಿಗಳಿಗೆ ವಿದ್ಯುತ್ ವೆಚ್ಚದ ಹೊರೆ ಕಡಿಮೆಯಾಗಲಿದೆ” ಎಂದಿದ್ದಾರೆ.
ಅಳವಡಿಸಲಾಗುತ್ತಿರುವ ಸೌರ ಬೀದಿ ದೀಪಗಳು ಎಲ್.ಇ.ಡಿ ತಂತ್ರಜ್ಞಾನವನ್ನು ಹೊಂದಿದ್ದು ದೀರ್ಘ ಕಾಲ ಬಾಳಿಕೆ ಬರಬಹುದೆಂದು ನಿರೀಕ್ಷಿಸಲಾಗಿದೆ, ಈ ವರ್ಷ ಸುಮಾರು 16,500 ಸೋಲಾರ್ ಬೀದಿ ದೀಪಗಳನ್ನು ಅಳವಡಿಸುವ ಗುರಿ ಹೊಂದಲಾಗಿದೆ. ಗ್ರಾಮೀಣ ಜನರು ಪ್ರಖರ ಬೆಳಕನ್ನು ಪಡೆಯುವುದರೊಂದಿಗೆ ವಿದ್ಯುತ್ ವೆಚ್ಚದ ಮಿತವ್ಯಯದಿಂದ ಗ್ರಾಮ ಪಂಚಾಯತಿಗಳ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…
ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…
ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…
ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…
ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…
ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…