ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆ ಮಾನವ ಸರಪಳಿ ಯಶಸ್ವಿಗೊಳಿಸಿ; ಜಗದೀಶ ಚೌರ್

0
82

ಶಹಾಬಾದ: ಇದೆ ಸೆಪ್ಟೆಂಬರ್ 15ರಂದು ಕರ್ನಾಟಕ ಸರ್ಕಾರದಿಂದ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ
ಬೀದರ ಜಿಲ್ಲೆಯಿಂದ ಚಾಮರಾಜನಗರದವರೆಗೆ ರಾಜ್ಯದ್ಯಾದಂತ ಏಕಕಾಲಕ್ಕೆ ದಾಖಲೆ ಪ್ರಮಾಣದಲ್ಲಿ ಮಾನವ ಸರಪಳಿ ರಚಿಸಲಾಗುತ್ತಿದ್ದು, ತಾಲೂಕಿನ ಜನತೆ ಉತ್ಸಾಹದಿಂದ ಇದರಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ತಹಸೀಲ್ದಾರ ಜಗದೀಶ ಚೌರ್ ಹೇಳಿದರು.

ಅವರು ನಗರದ ತಹಸೀಲ್ದಾರ ಕಚೇರಿಯಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ ಮಾನವ ಸರಪಳಿ ರಚಿಸುವ ಕುರಿತು ಆಯೋಜಿಸಲಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

Contact Your\'s Advertisement; 9902492681

ವಿವಿಧ ಹಾಸ್ಟೇಲ್, ಹೈಸ್ಕೂಲ್ ವಿದ್ಯಾರ್ಥಿಗಳು, ಶಿಕ್ಷಕರು, ವಿವಿಧ ಇಲಾಖೆಯ ಸಿಬ್ಬಂದಿಗಳು, ವಿವಿಧ ಸಂಘಟನೆಯ ಕಾರ್ಯಕರ್ತರು ಮಾನವ ಸರಪಳಿ ರಚನೆಯಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.

ಅಂದು ಬೆಳಿಗ್ಗೆ 9 ಗಂಟೆಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವ ಸಾರಲಾಗುತ್ತದೆ. ತದನಂತ 9:15 ಗಂಟೆಗೆ ಸಂವಿಧಾನ ಪೀಠಿಕೆ ವಾಚನ 9:30 ಗಂಟೆಗೆ ಕೊನೆಯದಾಗಿ ಜೈ ಹಿಂದ್-ಜೈ ಕರ್ನಾಟಕ ಘೋಷಣೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಗಲಿದೆ.

ಹೀಗಾಗಿ ಅಂದು ಬೆಳಿಗ್ಗೆ 8 ಗಂಟೆಗೆ ತಮಗೆ ತಿಳಿಸಿದ ಸ್ಥಳದಲ್ಲಿ ತಾಲೂಕಿನ ಎಲ್ಲ ಅಧಿಕಾರಿ ನೌಕರ ಬಂಧುಗಳು ಶಾಲಾ ಕಾಲೇಜು ವಿದ್ಯಾರ್ಥಿಗಳು ಮಹಿಳಾ ಸ್ವ ಸಂಘದ ಸದಸ್ಯರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಬೇಕೆಂದು ಈ ಮೂಲಕ ಕೋರಿದರು.

ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ ಗುರುರಾಜ ಸಂಗಾವಿ, ತಾಪಂ ಇಓ ಮಲ್ಲಿನಾಥ ರಾವೂರ, ಪೌರಾಯುಕ್ತ ಡಾ. ಕೆ.ಗುರಲಿಂಗಪ್ಪ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕಾಲೇಜಿನ ಪ್ರಾಂಶುಪಾಲರು, ವಿವಿಧ ಶಾಲೆಯ ಮುಖ್ಯಗುರುಗಳು, ವಿವಿಧ ಸಂಘಟನೆ ಮುಖ್ಯಸ್ಥರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here